Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್
Team Udayavani, Sep 20, 2024, 10:19 AM IST
ಅನು ಪ್ರಭಾಕರ್ ಮೊದಲ ಬಾರಿಗೆ ಹಾರರ್ ಶೇಡ್‌ನಲ್ಲಿ ಕಾಣಿಸಿಕೊಂಡಿರುವ “ಹಗ್ಗ’ ಚಿತ್ರ ಇಂದು ತೆರೆಕಾಣುತ್ತಿದೆ. ಈಗಾಗಲೇ ಟೀಸರ್, ಟ್ರೇಲರ್‌ಗೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ತಂಡ ಖುಷಿಯಾಗಿದೆ.
ಚಿತ್ರದ ಬಗ್ಗೆ ಮಾತನಾಡುವ ಅನು ಪ್ರಭಾಕರ್, ನಾನು ಈ ಚಿತ್ರ ಒಪ್ಪಿದ್ದು ನಿರ್ದೇಶಕ ಅವಿನಾಶ್ ಹೇಳಿದ ಕಥೆಗಾಗಿ. ನನಗೆ ಹಾರರ್ ಚಿತ್ರಗಳೆಂದರೆ ಇಷ್ಟವಿಲ್ಲ. ನಾನು ಹಾರರ್ ಚಿತ್ರಗಳನ್ನು ನೋಡುವುದಿಲ್ಲ. ಆದರೂ ನಾನು ಒಪ್ಪಿದ್ದು ಅವರು ಹೇಳಿದ ಕಥೆಗಾಗಿ. ನನಗೆ ಅವರ ಸ್ಪಷ್ಟತೆ ಇಷ್ಟವಾಯಿತು. ಅವರು ಏನು ಹೇಳಿದ್ದರೋ, ಅದನ್ನು ತೆರೆ ಮೇಲೆ ತಂದಿದ್ದಾರೆ. ಮೊದಲ ಚಿತ್ರದಲ್ಲೇ ಇಷ್ಟೊಂದು ಚೆನ್ನಾಗಿ ಕೆಲಸ ಮಾಡಿದ್ದು ನೋಡಿ ಖುಷಿಯಾಯಿತು. ಹಾಗಂತ ಚಿತ್ರೀಕರಣ ಸುಲಭವಾಗಿರಲಿಲ್ಲ. ನನ್ನ ಭಾಗದ ಚಿತ್ರೀಕರಣ ರಾತ್ರಿ 7ಕ್ಕೆ ಶುರುವಾಗಿ ಬೆಳಗ್ಗಿನ ಜಾವಕ್ಕೆ ಮುಗಿಯುತ್ತಿತ್ತು. ಆದರೆ, ನಾನು ಎಲ್ಲರು ಹೋದ ಮೇಲೆ ಹೋಗಬೇಕಿತ್ತು. ಏಕೆಂದರೆ, ಮೇಕಪ್ ಹಾಕುವುದಕ್ಕೆ, ತೆಗೆಯುವುದಕ್ಕೆ ಎರಡು ತಾಸು ಬೇಕಾಗುತ್ತಿತ್ತು. ನನ್ನ ಜೊತೆಗೆ ತಾಳ್ಮೆಯಿಂದ ಕಾದಿದ್ದ ನನ್ನ ತಂಡಕ್ಕೆ ಧನ್ಯವಾದ ಹೇಳಬೇಕು’ ಎಂದರು.
“ನಮ್ಮ ಟೀಸರ್ ಬಹಳ ಯಶಸ್ವಿಯಾಯಿತು. ಹಲವು ದಿನಗಳ ಕಾಲ ಟ್ರೆಂಡ್ ಆಗಿತ್ತು. ಈ ಚಿತ್ರ ಗೆಲ್ಲುತ್ತದೆ ಎಂಬ ವಿಶ್ವಾಸ ಇದೆ. ಅದರಲ್ಲೂ ಅನು ಪ್ರಭಾಕರ್ ಅವರು ದ್ವಿತೀಯಾರ್ಧವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ ಮತ್ತು ತಮ್ಮ ಪಾತ್ರವನ್ನು ಬಹಳ ಚೆನ್ನಾಗಿ ನಿಭಾಯಿಸಿದ್ದಾರೆ’ ಎನ್ನುವುದು ನಿರ್ಮಾಪಕ ರಾಜ್ ಭಾರದ್ವಾಜ್ ತಿಳಿಸಿದರು.
ಈ ಚಿತ್ರವನ್ನು ಅವಿನಾಶ್ ನಿರ್ದೇಶನ ಮಾಡಿದ್ದಾರೆ. ಇದಕ್ಕೂ ಮೊದಲು ರಾಜ್ ಭಾರದ್ವಾಜ್ ನಿರ್ಮಾಣದಲ್ಲಿ ಒಂದು ಕಿರುಚಿತ್ರ ನಿರ್ದೇಶಿಸಿದ ಅನುಭವ ಅವರಿಗಿದೆ. “ಇದು ನನ್ನ ಮೊದಲ ಚಿತ್ರ. ಈ ಚಿತ್ರದಲ್ಲಿ ಹಗ್ಗವನ್ನು ಆಯುಧವನ್ನಾಗಿ ಬಳಸಿ ಕೊಳ್ಳಲಾಗಿದೆ. ಒಳ್ಳೆಯ ವಿಷಯಕ್ಕಾಗಿ ಹಗ್ಗ ಹೋರಾಟ ಮಾಡುತ್ತದೆ. ಇದೊಂದು ಹಾರರ್ ಫ್ಯಾಂಟಸಿ ಆ್ಯಕ್ಷನ್ ಥ್ರಿಲ್ಲರ್ ಚಿತ್ರ. ಇಲ್ಲಿ ಸಂದೇಶವಿದೆ, ಸಾಕಷ್ಟು ಗ್ರಾಫಿಕ್ಸ್ ಇದೆ. ಒಂದು ಪಾತ್ರಕ್ಕಾಗಿ ಅನು ಪ್ರಭಾಕರ್ ಇದ್ದರೇ ಚೆನ್ನ ಎಂದನಿಸಿತು. ಅವರೂ ಒಪ್ಪಿಕೊಂಡರು. ಆ ನಂತರ ಆ ಪಾತ್ರವನ್ನು ಅವರು ಬಿಟ್ಟರೆ ಯಾರಿಂದಲೂ ಸಾಧ್ಯವಿಲ್ಲ ಎಂದೆನಿಸಿತು’ ಎಂದರು ನಿರ್ದೇಶಕ ಅವಿನಾಶ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
R Ashwin: ಅಶ್ವಿನ್‌ಗೆ ಖೇಲ್ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ
Virat Kohli: ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ವಿರಾಟ್ ನೂತನ ಕೇಶ ವಿನ್ಯಾಸ
Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ
Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.