ಡಿಯರ್ ಸತ್ಯ ಟೀಸರ್ ಸುತ್ತ…
Team Udayavani, Aug 7, 2020, 2:41 PM IST
ಸದಾ ತನ್ನದೇಯಾದ ಕೆಲಸ – ಕಾರ್ಯಗಳಿಂದ ಗಿಜಿಗುಡುವ ಊರು ಬೆಂಗಳೂರು. ಇಲ್ಲಿ ಪ್ರತಿಯೊಬ್ಬರಿಗೂ ಅವರದ್ದೇ ಆದ ಒತ್ತಡಗಳು, ಜಂಜಾಟಗಳಿರುತ್ತವೆ. ಇವೆಲ್ಲದರ ನಡುವೆ ಸಾಮಾನ್ಯ ಹುಡುಗನೊಬ್ಬ ತನ್ನ ಪ್ರೀತಿಯನ್ನು ಉಳಿಸಿಕೊಳ್ಳಲು ಹೇಗೆಲ್ಲ ಹೆಣಗಾಡುತ್ತಾನೆ. ತನ್ನ ಕನಸುಗಳನ್ನು ಈಡೇರಿಸಿಕೊಳ್ಳಲು ಏನೇನು ಕಸರತ್ತು ಮಾಡುತ್ತಾನೆ. ಇಂಥ ಪ್ರಯತ್ನದಲ್ಲಿ ಅವನಿಗೆ ಏನೇನು ಸವಾಲುಗಳು ಎದುರಾಗುತ್ತವೆ. ಇಂಥದ್ದೇ ಕೆಲವು ಸಂಗತಿಗಳನ್ನು ಇಟ್ಟುಕೊಂಡು, ಈಗ “ಡಿಯರ್ ಸತ್ಯ’ ಎನ್ನುವ ಚಿತ್ರ ತೆರೆಗೆ ಬರುತ್ತಿದೆ.
ಈ ಹಿಂದೆ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ “ನೂರು ಜನ್ಮಕು’ ಚಿತ್ರದ ಮೂಲಕ ನಾಯಕ ನಟನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗಿದ್ದ ಆರ್ಯನ್ ಸಂತೋಷ್, ಈ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಕೆಲಕಾಲ “ಪ್ಯಾಟೆ ಹುಡ್ಗಿರ್ ಹಳ್ಳಿ ಲೈಫು’, “ಹಳ್ಳಿ ಹೈದ ಪ್ಯಾಟೇಗ್ ಬಂದ’ ಮೊದಲಾದ ರಿಯಾಲಿಟಿ ಶೋಗಳ ನಿರೂಪಕರಾಗಿ, ಬಳಿಕ “ಬಿಗ್‌ಬಾಸ್ ಸೀಸನ್-2′ ನ ಸ್ಪರ್ಧಿಯಾಗಿದ್ದ ಆರ್ಯನ್ ಸಂತೋಷ್, ಈಗ “ಡಿಯರ್ ಸತ್ಯ’ನಾಗಿ ಮತ್ತೆ ಬಿಗ್ ಸ್ಕ್ರೀನ್‌ಗೆ ರೀ-ಎಂಟ್ರಿ ಆಗುತ್ತಿದ್ದಾರೆ.
“ಡಿಯರ್ ಸತ್ಯ’ನಿಗೆ ಅರ್ಚನಾ ಕೊಟ್ಟಿಗೆ ನಾಯಕಿಯಾಗಿ ಜೋಡಿಯಾಗಿದ್ದಾರೆ. ಒಂದಷ್ಟು ನೈಜ ಘಟನೆಗಳ ಪ್ರೇರಣೆಯಿಂದ ತಯಾರಾಗಿರುವ “ಡಿಯರ್ ಸತ್ಯ’ ಚಿತ್ರದಲ್ಲಿ ಅರುಣಾ ಬಾಲರಾಜ್, ಅಶ್ವಿನ್ ರಾವ್ ಪಲ್ಲಕ್ಕಿ, ಅರವಿಂದ್ ರಾವ್, ಅಪ್ಪಣ್ಣ, ಗುರುರಾಜ ಹೊಸಕೋಟೆ, ಆದರ್ಶ್ ಚಂದ್ರಕರ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ “ಜಿಗರ್ ಥಂಡ’ ಚಿತ್ರವನ್ನು ನಿರ್ದೇಶಿಸಿದ್ದ ಶಿವ ಗಣೇಶ್ “ಡಿಯರ್ ಸತ್ಯ’ ಚಿತ್ರವನ್ನು ನಿರ್ದೇಶಿಸಿದ್ದಾರೆ. “ಆ ದೃಶ್ಯ’, “ತ್ರಾಟಕ’ ಮುಂತಾದ ಚಿತ್ರಗಳಿಗೆ ಕ್ಯಾಮರ ಹಿಡಿದಿದ್ದ, ವಿನೋದ್ ಭಾರತಿ “ಡಿಯರ್ ಸತ್ಯ’ ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದಾರೆ.
ಚಿತ್ರದ ಹಾಡುಗಳಿಗೆ ಶ್ರೀಧರ್ ವಿ. ಸಂಭ್ರಮ್ ಸಂಗೀತ ಸಂಯೋಜಿಸಿದ್ದಾರೆ. ಚಿತ್ರಕ್ಕೆ ಸುರೇಶ್ ಆರ್ಮುಗಂ ಸಂಕಲನವಿದೆ. ಚಿತ್ರದ ಹಾಡುಗಳಿಗೆ ಭಜರಂಗಿ ಮೋಹನ್, ಕಲೈ ಮತ್ತು ಗೀತಾ ನೃತ್ಯ ಸಂಯೋಜಿಸಿದ್ದಾರೆ. ಚಿತ್ರಕ್ಕೆ ಕುಂಗ್‌ಫು ಚಂದ್ರು ಸಾಹಸ, ಭಾರ್ಗವಿ ವಿಖ್ಯಾತಿ ವಸ್ತ್ರ ವಿನ್ಯಾಸವಿದೆ. “ಪರ್ಪಲ್ ರಾಕ್ ಎಂಟರ್‌ಟೈನರ್’ ಮತ್ತು “ವಿಂಟರ್ ಬ್ರಿಡ್ಜ್ ಸ್ಟುಡಿಯೋಸ್’ ಜಂಟಿಯಾಗಿ ನಿರ್ಮಿಸುತ್ತಿರುವ “ಡಿಯರ್ ಸತ್ಯ’ ಚಿತ್ರದ ಚಿತ್ರೀಕರಣ, ಕಳೆದ ವರ್ಷ ಡಿಸೆಂಬರ್‌ನಲ್ಲಿ ಶುರುವಾಗಿ ಈ ವರ್ಷ ಮಾರ್ಚ್ ವೇಳೆಗೆ ಪೂರ್ಣಗೊಂಡಿತ್ತು. ಸದ್ಯ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಅಂತಿಮ ಹಂತದಲ್ಲಿದ್ದು, ಇದೇ ಆಗಸ್ಟ್ 15ರಂದು “ಡಿಯರ್ ಸತ್ಯ’ ಚಿತ್ರದ ಬಹು ನಿರೀಕ್ಷಿತ ಟೀಸರ್ ಬಿಡುಗಡೆ ಯಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.