ಅನಾಥನೊಬ್ಬನ ಆತ್ಮಚರಿತ್ರೆ


Team Udayavani, May 18, 2018, 6:00 AM IST

k-25.jpg

ಸುದೀಪ್‌ “ಪಾರ್ಥ’ ಎಂಬ ಸಿನಿಮಾ ಮಾಡಿದ್ದರು. ದರ್ಶನ್‌ “ಸಾರಥಿ’ ಮಾಡಿದ್ದರು. ಎರಡೂ ಸೇರಿದರೆ ಏನಾಗುತ್ತದೆ ಹೇಳಿ, “ಪಾರ್ಥಸಾರಥಿ’. ಈಗ “ಪಾರ್ಥಸಾರಥಿ’ ಎಂಬ ಸಿನಿಮಾವೊಂದು ಬಿಡುಗಡೆಯ ಹಂತಕ್ಕೆ ಬಂದಿದೆ. ಸ್ವತಃ ಆ ಚಿತ್ರತಂಡವೇ ಟ್ರೇಲರ್‌ನಲ್ಲಿ “ಪಾರ್ಥ’ ಹಾಗೂ “ಸಾರಥಿ’ ಎರಡೂ ಸೂಪರ್‌ ಹಿಟ್‌ ಈಗ “ಪಾರ್ಥಸಾರಥಿ’ ಕೂಡಾ ಸೂಪರ್‌ ಹಿಟ್‌ ಎಂದು ಹೇಳಿಕೊಂಡು ಈಗ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಈ ವಾರ ತೆರೆಕಾಣುತ್ತಿದೆ.

ರಾಬರ್ಟ್‌ ನವರಾಜ್‌ ಈ ಸಿನಿಮಾದ ನಿರ್ದೇಶಕರು. ನಿರ್ದೇಶನದ ಜೊತೆಗೆ ನಿರ್ಮಾಣ ಕೂಡಾ ಇವರದ್ದೇ. ಮೂವತ್ತು ವರ್ಷಗಳಿಂದ ಗೋವಾದಲ್ಲಿ ನೆಲೆಸಿರುವ ರಾಬರ್ಟ್‌, ಸಿನಿಮಾ ಮೇಲಿನ ಪ್ರೀತಿಯಿಂದ “ಪಾರ್ಥಸಾರಥಿ’ ಸಿನಿಮಾ  ಮಾಡಿದ್ದಾಗಿ ಹೇಳುತ್ತಾರೆ. ಆರಂಭದಲ್ಲಿ ಕನ್ನಡ ಸಿನಿಮಾ ಮಾಡುತ್ತೇನೆ ಎಂದಾಗ ಅನೇಕರು ಹೆದರಿಸಿದ್ದರಂತೆ. ಆದರೆ, ಈಗ ಎಲ್ಲರೂ ನೀಡುತ್ತಿರುವ ಸಹಕಾರ ನೋಡಿ ಆವರ ಮಾತು ಸುಳ್ಳು ಎಂದು ರಾಬರ್ಟ್‌ಗೆ ಮನವರಿಕೆಯಾಗಿದೆ. ಚಿತ್ರದಲ್ಲಿ ಅನಾಥ ಹುಡುಗನ ಕಥೆಯನ್ನು ರಾಬರ್ಟ್‌ ಹೇಳಿದ್ದಾರಂತೆ. 

ಕೇವಲ ತಂದೆ-ತಾಯಿ ಪ್ರೀತಿ ಸಿಕ್ಕ ಮಕ್ಕಳಷ್ಟೇ ಒಳ್ಳೆಯವರಾಗುವುದಿಲ್ಲ, ಅನಾಥ ಮಕ್ಕಳಿಗೂ ಪ್ರೀತಿ ಕೊಟ್ಟು ಸಾಕಿದರೆ ಅವರು ಕೂಡಾ ಮುಂದೆ ಒಳ್ಳೆಯ ದಾರಿ ಹಿಡಿಯುತ್ತಾರೆಂಬ ಅಂಶವನ್ನು ಈ ಸಿನಿಮಾ ಮೂಲಕ ಹೇಳಿದ್ದಾರಂತೆ ರಾಬರ್ಟ್‌. ಅನಾಥನಾಗಿ ಬೆಳೆದು ಜನರ ಪ್ರೀತಿಯಿಂದ ಮುಂದೆ ಪ್ರಾಮಾಣಿಕ ಐಪಿಎಸ್‌ ಆಧಿಕಾರಿಯಾಗುವ ಅಂಶದೊಂದಿಗೆ ಚಿತ್ರ ಸಾಗುತ್ತದೆಯಂತೆ. ಚಿತ್ರದಲ್ಲಿ ಪೊಲೀಸ್‌ ಇಲಾಖೆಯ ಕತೆ ಇದ್ದರೂ ಆಕ್ಷನ್‌ಗಿಂತ  ಭಾವನೆಗಳಿಗೆ ಹೆಚ್ಚು ಒತ್ತುಕೊಡಲಾಗಿದೆಯಂತೆ. ಚಿತ್ರದಲ್ಲಿ ರೇಣುಕುಮಾರ್‌ ನಾಯಕರಾಗಿ ನಟಿಸಿದ್ದಾರೆ. ಹಲವು ಸಿನಿಮಾ, ಧಾರಾವಾಹಿಗಳಲ್ಲಿ ಸಣ್ಣಪುಟ್ಟ ಪಾತ್ರ ಮಾಡುತ್ತಿದ್ದ ರೇಣುಕ್‌ಗೆ ನಾಯಕರಾಗಿ ಇದು ಚೊಚ್ಚಲ ಸಿನಿಮಾ. ಮೊದಲ ಚಿತ್ರದಲ್ಲಿ ಅವಕಾಶ ನೀಡಿದ ನಿರ್ದೇಶಕರಿಗೆ ಥ್ಯಾಂಕ್ಸ್‌ ಹೇಳುತ್ತಾ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಚಿತ್ರದಲ್ಲಿ ಅವರದು ಅನಾಥ ಹುಡುಗನಾಗಿ ಬೆಳೆದು ಮುಂದೆ ಪೊಲೀಸ್‌ ಅಧಿಕಾರಿಯಾಗುವ
ಪಾತ್ರವಂತೆ. ಚಿತ್ರದಲ್ಲಿ ಅಕ್ಷತಾ ನಾಯಕಿ. ಅವರಿಲ್ಲಿ ಪತ್ರಕರ್ತೆಯಾಗಿ ನಟಿಸಿದ್ದಾರೆ. ಪೊಲೀಸ್‌ ಇಲಾಖೆಯಲ್ಲಿನ ವರದಿ ಮಾಡುವ ಸಂದರ್ಭದಲ್ಲಿ ಅಲ್ಲಿನ ಅಧಿಕಾರಿಗಳನ್ನು ಹೇಗೆ ನಿಭಾಯಿಸುತ್ತಾಳೆ ಎಂಬ ಅಂಶದ ಮೂಲಕ ಅವರ ಪಾತ್ರ ಸಾಗುತ್ತದೆಯಂತೆ. ಚಿತ್ರದಲ್ಲಿ ನಟಿಸಿದ ಇತರ ಕಲಾವಿದರು ಕೂಡಾ ತಮ್ಮ ಅನುಭವ ಹಂಚಿಕೊಂಡರು.

ಮೈಸೂರು, ಬೆಂಗಳೂರು, ಉತ್ತರ ಕನ್ನಡ, ಮಂಗಳೂರು, ಗೋವಾ, ಗುಜರಾತ್‌, ರಾಜಸ್ಥಾನ ಕಡೆಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಚಿತ್ರಕ್ಕೆ ಹರ್ಷವರ್ಧನ್‌-ಎನ್‌. ರಾಘವೇಂದ್ರ ಅವರ ಸಂಭಾಷಣೆ, ವಿಕ್ಟರ್‌ ಲೋಗಿದಾಸನ್‌ ಸಂಗೀತ, ನೀಲೇಶ್‌ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.