Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Team Udayavani, Nov 15, 2024, 12:29 PM IST

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

ಹದಿಮೂರು ವರ್ಷಗಳ ಹಿಂದೆ ತೆರೆಕಂಡಿದ್ದ ಸಂಜು ವೆಡ್ಸ್‌ ಗೀತಾ ಸಿನಿಮಾ ಹಿಟ್‌ ಆಗಿದ್ದು ಗೊತ್ತೇ ಇದೆ. ಈಗ ಸಂಜು ವೆಡ್ಸ್‌ ಗೀತಾ 2 ಚಿತ್ರ ತೆರೆ ಕಾಣಲು ಸಜ್ಜಾಗುತ್ತಿದೆ. ಪವಿತ್ರ ಇಂಟರ್‌ನ್ಯಾಷನಲ್‌ ಮೂವಿ ಮೇಕರ್ಸ್‌ ಲಾಂಛನದಡಿ ಚಲವಾದಿ ಕುಮಾರ್‌ ನಿರ್ಮಾಣ ಹಾಗೂ ನಾಗಶೇಖರ್‌ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬರುತ್ತಿದೆ.

ಇತ್ತೀಚೆಗೆ ನಾಗಶೇಖರ್‌ ಜನ್ಮದಿನ ಪ್ರಯುಕ್ತ ಚಿತ್ರದ “ಅವನು ಸಂಜು ಅವಳು ಗೀತಾ ಅವರಿಬ್ಬರು ಸೇರಲು ಸಂಗೀತ’ ಎಂಬ ಹಾಡು ಬಿಡುಗಡೆಗೊಂಡಿತು. ಕವಿರಾಜ್‌ ಅವರ ಸಾಹಿತ್ಯ ಹಾಗೂ ಶ್ರೀಧರ್‌ ವಿ. ಸಂಭ್ರಮ್‌ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಕಾರ್ಯಕ್ರಮದಲ್ಲಿ ನಟ ಉಪೇಂದ್ರ ಹಾಡು ಬಿಡುಗಡೆಗೊಳಿಸಿ ಮಾತನಾಡಿದರು.

“ಈ ಚಿತ್ರದ ಕ್ಲೈಮ್ಯಾಕ್ಸ್‌ ನೋಡಿದೆ, ಬಹಳ ಚೆನ್ನಾಗಿದೆ. ಈ ಹಾಡನ್ನು ನೋಡಿದಾಗ, ಸಿನಿಮಾ ಖಂಡಿತ ಗೆಲ್ಲುತ್ತದೆ ಎಂಬ ವಿಶ್ವಾಸ ಇದೆ’ ಎಂದರು. ನಿರ್ಮಾಪಕ ಛಲವಾದಿ ಕುಮಾರ್‌, “ಮುಂದಿನ ತಿಂಗಳು ಚಿತ್ರ ತೆರೆಗೆ ಬರಲಿದೆ’ ಎಂದು ತಿಳಿಸಿದರು.

ನಿರ್ದೇಶಕ ನಾಗಶೇಖರ್‌, “ಚಿತ್ರದಲ್ಲಿ ಆರು ಸುಂದರ ಹಾಡುಗಳು ಚಿತ್ರದಲ್ಲಿವೆ. “ಅವನು ಸಂಜು ಅವಳು ಗೀತಾ’ ಹಾಡಿನಲ್ಲಿ ಒಬ್ಬ ಸೈನಿಕನ ಪ್ರೇಮಕಥೆ ಹೇಳಿದ್ದೇನೆ. ಸ್ವಿಟ್ಜರ್‌ಲ್ಯಾಂಡ್‌ನ‌ ಸೈನಿಕನೊಬ್ಬ, ರಾಣಿ ಸೆಲ್ವಿಕ್‌ಳನ್ನು ಪ್ರೀತಿಸುತ್ತಿರುತ್ತಾನೆ. ಆದರೆ, ಪ್ರೀತಿ ವ್ಯಕ್ತಪಡಿಸಲು ಆಗುವುದಿಲ್ಲ, ಕಾರಣ ಆಕೆ ಮಹಾರಾಣಿ. ಆತನದ್ದು ಒನ್‌ ವೇ ಲವ್‌. ಜರ್ಮನ್‌ ಸೈನಿಕರು ಸ್ವಿಟ್ಜರ್‌ಲ್ಯಾಂಡ್‌ ಮೇಲೆ ದಾಳಿ ಮಾಡುತ್ತಾರೆ. ಆಗ ವೀರಾವೇಶದಿಂದ ಹೋರಾಡಿ, ಯುದ್ಧದಲ್ಲಿ ವೀರಮರಣ ಹೊಂದುತ್ತಾನೆ. ಯುದ್ಧ ಗೆದ್ದು ರಾಣಿಗೆ ಆಕೆಯ ಕಿರೀಟಿ ಮರಳಿಸಿ, ಸಾಯುವ ಸಮಯದಲ್ಲಿ ರಕ್ತದ್ಲಲಿ “ಐ ಲವ್‌ ಯು ಫಾರೆವರ್‌’ ಎಂದು ಪತ್ರ ಬರೆಯುತ್ತಾನೆ. ಇದು ಈ ಹಾಡಿನ ಕಥೆ. ಮೊದಲ ಬಾರಿ ಹಾಡೊಂದರಲ್ಲಿ ಆ್ಯಕ್ಷನ್‌ ಇಟ್ಟಿದ್ದೇವೆ’ ಎಂದರು.

ಚಿತ್ರದಲ್ಲಿ ರೇಶ್ಮೆ ರೈತನಾಗಿ ಶ್ರೀನಗರ ಕಿಟ್ಟಿ ನಟಿಸಿದ್ದಾರೆ. ರಚಿತಾ ರಾಮ್‌ ಚಿತ್ರದ ನಾಯಕಿ. ಉಳಿದಂತೆ ತಾರಾ ಬಳಗದಲ್ಲಿ ರಂಗಾಯಣ ರಘು, ಸಾಧುಕೋಕಿಲ, ತಬಲಾ ನಾಣಿ ಮುಂತಾದ ಕಲಾವಿದರಿದ್ದಾರೆ. ವಿಶೇಷ ಪಾತ್ರದಲ್ಲಿ ನಟ ಚೇತನ್‌ ಚಂದ್ರ, ರಾಗಿಣಿ ದ್ವಿವೇದಿ ಕಾಣಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-126: ವಾರ್ಧಕ್ಯಕ್ಕಾಗಿ ದುಃಖವಲ್ಲ, ಸಾಧನಾಚ್ಯುತಿಗಾಗಿ…

Udupi: ಗೀತಾರ್ಥ ಚಿಂತನೆ-126: ವಾರ್ಧಕ್ಯಕ್ಕಾಗಿ ದುಃಖವಲ್ಲ, ಸಾಧನಾಚ್ಯುತಿಗಾಗಿ…

Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ

Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ

1-hck

Hockey; ವನಿತಾ ಜೂನಿಯರ್‌ ವಿಶ್ವಕಪ್‌ : ಭಾರತ ಆಯ್ಕೆ

ಇದು 0 ಪರ್ಸೆಂಟ್‌ ಅಭಿವೃದ್ಧಿ,100 ಪರ್ಸೆಂಟ್‌ ಭ್ರಷ್ಟಾಚಾರದ ಸರಕಾರ: ಸುನಿಲ್‌

ಇದು 0 ಪರ್ಸೆಂಟ್‌ ಅಭಿವೃದ್ಧಿ,100 ಪರ್ಸೆಂಟ್‌ ಭ್ರಷ್ಟಾಚಾರದ ಸರಕಾರ: ಸುನಿಲ್‌

ಠೇವಣಿದಾರರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ ಕೃಷ್ಣ ಬೈರೇಗೌಡ

ಠೇವಣಿದಾರರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ ಕೃಷ್ಣ ಬೈರೇಗೌಡ

Belagavi, ಮಂಡ್ಯ, ಶಿವಮೊಗ್ಗ ಸೇರಿ 6 ಕಡೆ ಕ್ಯಾನ್ಸರ್‌ ಆಸ್ಪತ್ರೆ: ಶರಣಪ್ರಕಾಶ್‌ ಪಾಟೀಲ್‌

Belagavi, ಮಂಡ್ಯ, ಶಿವಮೊಗ್ಗ ಸೇರಿ 6 ಕಡೆ ಕ್ಯಾನ್ಸರ್‌ ಆಸ್ಪತ್ರೆ: ಶರಣಪ್ರಕಾಶ್‌ ಪಾಟೀಲ್‌

Council session ಲಾಠಿ ಜಾರ್ಜ್‌: ಮೇಲ್ಮನೆಯಲ್ಲಿ ಪ್ರತಿಪಕ್ಷ ಸಭಾತ್ಯಾಗ

Council session ಲಾಠಿ ಜಾರ್ಜ್‌: ಮೇಲ್ಮನೆಯಲ್ಲಿ ಪ್ರತಿಪಕ್ಷ ಸಭಾತ್ಯಾಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayogya 2: ಇಲ್ಲಿ ಎಲ್ಲವೂ ಡಬಲ್‌ ಆಗಿರುತ್ತದೆ…ಇದು ʼಅಯೋಗ್ಯʼನ ಭರವಸೆ

Ayogya 2: ಇಲ್ಲಿ ಎಲ್ಲವೂ ಡಬಲ್‌ ಆಗಿರುತ್ತದೆ…ಇದು ʼಅಯೋಗ್ಯʼನ ಭರವಸೆ

Sandalwood: ರಂಗೇರಲಿದೆ ಜನವರಿ; ಹೊಸ ವರ್ಷದ ಮೊದಲ ತಿಂಗಳಲ್ಲಿ ಸಿನಿ ಮಿಂಚು

Sandalwood: ರಂಗೇರಲಿದೆ ಜನವರಿ; ಹೊಸ ವರ್ಷದ ಮೊದಲ ತಿಂಗಳಲ್ಲಿ ಸಿನಿ ಮಿಂಚು

Pushpa-2; Bollywood withered in Pushpa fire

Pushpa-2; ಪುಷ್ಪ ಫೈರ್‌ ನಲ್ಲಿ ಬಾಡಿದ ಬಾಲಿವುಡ್

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-126: ವಾರ್ಧಕ್ಯಕ್ಕಾಗಿ ದುಃಖವಲ್ಲ, ಸಾಧನಾಚ್ಯುತಿಗಾಗಿ…

Udupi: ಗೀತಾರ್ಥ ಚಿಂತನೆ-126: ವಾರ್ಧಕ್ಯಕ್ಕಾಗಿ ದುಃಖವಲ್ಲ, ಸಾಧನಾಚ್ಯುತಿಗಾಗಿ…

1-ewqewq

T20; ವೆಸ್ಟ್‌ ಇಂಡೀಸ್‌ ಎದುರು ಬಾಂಗ್ಲಾದೇಶ ಗೆಲುವಿನ ಆರಂಭ

1-arg

T20I;ಡಬಲ್‌ ಹ್ಯಾಟ್ರಿಕ್‌ ಸಾಧನೆ ಮೆರೆದ ಆರ್ಜೆಂಟೀನಾದ ಫೆನೆಲ್‌

Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ

Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ

1-gukesh

Gukesh Dommaraju; ಚದುರಂಗ ಚಾಂಪಿಯನ್‌ ಗೆ ತವರೂರು ಚೆನ್ನೈಯಲ್ಲಿ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.