ಮತ್ತೆ ಮಾಲ್ಗುಡಿ ಡೇಸ್
Team Udayavani, Mar 1, 2019, 12:30 AM IST
“ಮಾಲ್ಗುಡಿ ಡೇಸ್’ ಅಂದ್ರೆ ಇಂದಿಗೂ ಅದೆಷ್ಟೋ ಜನರ ಕಣ್ಣು-ಕಿವಿ ಅರಳುತ್ತದೆ. 1980ರ ದಶಕದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡು ನಂತರ ಕಿರುತೆರೆಯ ಧಾರಾವಾಹಿಯಾಗಿ ಅಸಂಖ್ಯಾತ ಪ್ರೇಕ್ಷಕರ ಗಮನ ಸೆಳೆದಿದ್ದ ಆರ್.ಕೆ ನಾರಾಯಣ್ ಅವರ “ಮಾಲ್ಗುಡಿ ಡೇಸ್’ ಕಾದಂಬರಿ ನಿಮಗೆ ಗೊತ್ತಲ್ಲ, ಈಗ ಅದೇ ಹೆಸರು ಹಿರಿತೆರೆ ಮೇಲೂ ಬರುತ್ತಿದೆ.
ಹೌದು, “ಮಾಲ್ಗುಡಿ ಡೇಸ್’ ಎನ್ನುವ ಹೆಸರಿನಲ್ಲಿ ಕನ್ನಡದಲ್ಲಿ ಚಿತ್ರವೊಂದು ತಯಾರಾಗುತ್ತಿದೆ. ಅಂದಹಾಗೆ, ಈ ಚಿತ್ರದ ಹೆಸರು “ಮಾಲ್ಗುಡಿ ಡೇಸ್’ ಅಂತಿದ್ದರೂ, ಇದು ಶಂಕರ್ ನಾಗ್ ನಿರ್ದೇಶನದ ಧಾರಾವಾಹಿಗಾಗಲಿ, ಆರ್.ಕೆ ನಾರಾಯಣ್ ಅವರ ಕಾದಂಬರಿಗಾಗಲಿ ಸಂಬಂಧಿಸಿದ್ದಲ್ಲ. ಇದೊಂದು ಇಂದಿನ ಜನರೇಷನ್ ಕಥೆಯಾಧಾರಿತ ಚಿತ್ರವಾಗಿದ್ದು, ಚಿತ್ರದ ಸಬ್ಜೆಕ್ಟ್ಗೆ ಹೊಂದಾಣಿಕೆಯಾಗುತ್ತದೆ ಎಂಬ ಕಾರಣಕ್ಕೆ ಚಿತ್ರತಂಡ ತಮ್ಮ ಚಿತ್ರಕ್ಕೆ “ಮಾಲ್ಗುಡಿ ಡೇಸ್’ ಅಂತ ಹೆಸರಿಟ್ಟುಕೊಂಡಿದೆ.
ಇತ್ತೀಚೆಗೆ “ಮಾಲ್ಗುಡಿ ಡೇಸ್’ ಚಿತ್ರದ ಮುಹೂರ್ತ ಸಮಾರಂಭ ಅದ್ದೂರಿಯಾಗಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್.ಎ ಚಿನ್ನೇಗೌಡ, ನಿರ್ಮಾಪಕ ಕರಿಸುಬ್ಬು ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಸಮಾರಂಭದಲ್ಲಿ ಹಾಜರಿದ್ದು, ಚಿತ್ರಕ್ಕೆ ಚಾಲನೆ ನೀಡಿದರು.
“ಮಾಲ್ಗುಡಿ ಡೇಸ್’ ಚಿತ್ರದಲ್ಲಿ ವಿಜಯ ರಾಘವೇಂದ್ರ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ನವ ಪ್ರತಿಭೆ ಕಿಶೋರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು ಗಗನ್ ಬಡೇರಿಯಾ ಸಂಗೀತ ಸಂಯೋಜಿಸುತ್ತಿದ್ದಾರೆ. “ಮಾಲ್ಗುಡಿ ಡೇಸ್’ ಚಿತ್ರದ ದೃಶ್ಯಗಳನ್ನು ಉದಯ್ ಲೀಲಾ ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿಯಲಿದ್ದಾರೆ. ಚಿತ್ರಕ್ಕೆ ಪ್ರದೀಪ್ ನಾಯಕ್ ಸಂಕಲನ ಕಾರ್ಯವಿದೆ. ರತ್ನಾಕರ್ ಕಾಮತ್ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಬೆಂಗಳೂರು, ಮೈಸೂರು, ತೀರ್ಥಹಳ್ಳಿ, ಕಳಸ ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಸಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ. ಒಟ್ಟಾರೆ ಕಿರುತೆರೆಯಲ್ಲಿ ಮೋಡಿ ಮಾಡಿದ್ದ “ಮಾಲ್ಗುಡಿ ಡೇಸ್’ ಎಂಬ ಹೆಸರು ಈಗ ಹಿರಿತೆರೆಯಲ್ಲಿ ಎಷ್ಟರ ಮಟ್ಟಿಗೆ ಕಮಾಲ್ ಮಾಡಲಿದೆ ಅನ್ನೋದು ಚಿತ್ರ ತೆರೆಗೆ ಬಂದ ಮೇಲಷ್ಟೇ ಗೊತ್ತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rey Mysterio Sr: ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.