ಸೈಂಟಿಫಿಕ್ ಸಸ್ಪೆನ್ಸ್- ಥ್ರಿಲ್ಲರ್ ‘ಬೀಗ’ ಟ್ರೇಲರ್ ರಿಲೀಸ್
Team Udayavani, Feb 24, 2023, 2:47 PM IST
ಸೈಂಟಿಫಿಕ್ ಮಿಸ್ಟರಿ ಜೊತೆಗೆ ಸಸ್ಪೆನ್ಸ್-ಥ್ರಿಲ್ಲರ್ ಕಥಾಹಂದರ ಹೊಂದಿರುವ “ಬೀಗ’ ಸಿನಿಮಾದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಈ ಹಿಂದೆ “ಅಗ್ರಜ’ ಮತ್ತು “ಲೀ’ ಸಿನಿಮಾಗಳನ್ನು ನಿರ್ದೇಶಿಸಿದ್ದ ಹೆಚ್. ಎಂ ಶ್ರೀನಂದನ್ ನಿರ್ದೇಶನದ ಮೂರನೇ ಸಿನಿಮಾ ಇದಾಗಿದ್ದು, “ವಿಎಂಆರ್ ಪೊ›ಡಕ್ಷನ್’ ಬ್ಯಾನರ್ ನಲ್ಲಿ ರಮೇಶ್ ಮುನಿಹನುಮಪ್ಪ, ಹೆಚ್. ಎಂ ಶ್ರೀನಂದನ್ ಹಾಗೂ ಕೃಷ್ಣ ಎಲ್ ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಿಸಿದ್ದಾರೆ.
ಟ್ರೇಲರ್ ಬಿಡುಗಡೆ ಬಳಿಕ ಸಿನಿಮಾದ ಬಗ್ಗೆ ಮಾತನಾಡಿದ ನಿರ್ದೇಶಕ ಹೆಚ್. ಎಂ ಶ್ರೀನಂದನ್, “ಇದೊಂದು ವೈಜ್ಞಾನಿಕ ಹಿನ್ನೆಲೆ ಇಟ್ಟುಕೊಂಡು ಮಾಡಿರುವ ಸಿನಿಮಾ. ಯಾರೂ ವಾಸವಿರದ ಮನೆಯೊಂದರ “ಬೀಗ’ ತೆಗೆದ ನಂತರ ಅಲ್ಲಿ ಏನೇನು ನಡೆಯುತ್ತದೆ ಎಂಬುದು ಸಿನಿಮಾದ ಕಥೆಯ ಒಂದು ಎಳೆ. ಹೆಣ್ಣುಮಗುವೊಂದು ರಸ್ತೆಯಲ್ಲಿ ಬಂದಾಗ ಅದನ್ನು ಮಗು ಎಂದೂ ನೋಡದೆ ಕೆಲವರು ಹೇಗೆ ವರ್ತಿಸುತ್ತಾರೆ ಎನ್ನುವುದನ್ನೂ ಸಿನಿಮಾದಲ್ಲಿ ತೋರಿಸಿದ್ದೇವೆ. ಆ ಥರದ ಮನಸ್ಥಿತಿ ಇದ್ದವರು ಈ ಸಿನಿಮಾ ನೋಡಿ ಬದಲಾಗಬೇಕು ಎನ್ನುವುದು ನಮ್ಮ ಆಶಯ’ ಎಂದರು.
“ಬೀಗ’ ಸಿನಿಮಾದಲ್ಲಿ ನ ರವಿಶಂಕರ್ ಸಸ್ಪೆಂಡ್ ಆಗಿರುವ ಪೋಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ “ಮೊಗ್ಗಿನ ಮನಸು’ ಖ್ಯಾತಿಯ ಯುವನಟ ಜೆ. ಡಿ ಆಕಾಶ್, ಸೈಯದ್ ಇರ್ಫಾನ್, ಶ್ರೀನಂದನ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದು, ಉತ್ತರ ಭಾರತ ಮೂಲದ ಸಹಾರ ಸಿನಿಮಾದಲ್ಲಿ ನಾಯಕಿಯಾಗಿದ್ದಾರೆ. ಸುಮಿತಾ ಬಜಾಜ್, ಸುಚೇಂದ್ರ ಪ್ರಸಾದ್, ಕುಮಾರ್ ಅರಸೇಗೌಡ, ಮೈಸೂರು ರಮಾನಂದ, ಬೇಬಿ ಶರಣ್ಯ ಮೊದಲಾದವರು “ಬೀಗ’ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಬೆಂಗಳೂರು ಸುತ್ತಮುತ್ತ “ಬೀಗ’ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ. ಸಿನಿಮಾದಲ್ಲಿ ನಾಲ್ಕು ಸಾಹಸ ದೃಶ್ಯಗಳು ಹಾಗೂ ಐದು ಹಾಡುಗಳಿವೆ. ಚಿತ್ರಕ್ಕೆ ಎಂ.ಬಿ ಹಳ್ಳಿಕಟ್ಟೆ, ವೀನಸ್ ನಾಗರಾಜಮೂರ್ತಿ ಛಾಯಾಗ್ರಹಣ, ವೆಂಕಿ ಯುಡಿವಿ ಸಂಕಲನ, ಶ್ರೀಗುರು ಸಂಗೀತ ಸಂಯೋಜನೆಯಿದೆ. ಅಂದಹಾಗೆ ಈ ಸಿನಿಮಾ ತೆಲುಗಿನಲ್ಲಿ “ಕರಾಳ’ ಹೆಸರಲ್ಲಿ ತೆರೆ ಕಾಣುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.