ಕೃಷ್ಣನ ಸಂಗಕ್ಕೆ ಸೈ ಎಂದ ಭಾವನಾ

ಶ್ರೀಕೃಷ್ಣ ಆ್ಯಟ್‌ ಜಿ ಮೇಲ್‌ಡಾಟ್‌ ಕಾಂ ನಾಯಕಿ

Team Udayavani, Aug 7, 2020, 3:32 PM IST

ಕೃಷ್ಣನ ಸಂಗಕ್ಕೆ ಸೈ ಎಂದ ಭಾವನಾ

ಈ ವರ್ಷದ ಆರಂಭದಲ್ಲಿಯೇ, “ಲವ್‌ ಮಾಕ್ಟೇಲ್‌’ ಚಿತ್ರದ ಮೂಲಕ ಭರ್ಜರಿ ಇನ್ನಿಂಗ್ಸ್‌ ಶುರು ಮಾಡಿರುವ ನಟ ಮದರಂಗಿ ಕೃಷ್ಣ , ಸದ್ಯ “ಶ್ರೀಕೃಷ್ಣ ಆ್ಯಟ್‌ ಜಿಮೇಲ್‌ ಡಾಟ್‌ ಕಾಂ’ ಎನ್ನುವ ಹೊಸಚಿತ್ರಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಸಂದೇಶ್‌ ನಾಗರಾಜ್‌ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ, ನಾಗಶೇಖರ್‌ ಆ್ಯಕ್ಷನ್‌-ಕಟ್‌ ಹೇಳುತ್ತಿದ್ದಾರೆ.

ಅಂದಹಾಗೆ, ರೊಮ್ಯಾಂಟಿಕ್‌ ಕಾಮಿಡಿ ಕಥಾಹಂದರ ಹೊಂದಿರುವ “ಶ್ರೀಕೃಷ್ಣ ಆ್ಯಟ್‌ ಜಿ ಮೇಲ್‌ ಡಾಟ್‌ ಕಾಮ…’ ಚಿತ್ರದ ಮೂಲಕ ನಟಿ ರಾಧಿಕಾ ಕುಮಾರಸ್ವಾಮಿ, ಮತ್ತೆ ಸ್ಯಾಂಡಲ್‌ವುಡ್‌ಗೆ ಕಂ ಬ್ಯಾಕ್‌ ಮಾಡುತ್ತಿದ್ದಾರೆ ಎಂಬ ಸುದ್ದಿ ಕಳೆದ ಕೆಲ ದಿನಗಳಿಂದ ಹರಿದಾಡುತಿತ್ತು. ಆದರೆ ಇದೀಗ ಆ ಸುದ್ದಿ ಹುಸಿಯಾಗಿದೆ. “ಶ್ರೀಕೃಷ್ಣ ಆ್ಯಟ್‌ ಜಿ ಮೇಲ್‌ ಡಾಟ್‌ ಕಾಂ’ ಚಿತ್ರಕ್ಕೆ ಸಂಬಂಧಿಸಿದಂತೆ ಗಾಂಧಿನಗರದಲ್ಲಿ ಹರಿದಾಡುತ್ತಿದ್ದ ಸಾಕಷ್ಟು ಅಂತೆ-ಕಂತೆಗಳಿಗೆ ಈಗ ತೆರೆ ಬಿದ್ದಿದೆ. ಈ ಬಗ್ಗೆ ಒಂದಷ್ಟು ಸ್ಪಷ್ಟನೆ ನೀಡಿರುವ ನಿರ್ದೆಶಕ ನಾಗಶೇಖರ್‌, ತಮ್ಮ ಚಿತ್ರದಲ್ಲಿ ಡಾರ್ಲಿಂಗ್‌ ಕೃಷ್ಣಗೆ ಜೋಡಿ ಆಗುವ ನಾಯಕಿ ಯಾರು ಎಂಬುದನ್ನು ಬಹಿರಂಗಪಡಿಸಿದ್ದಾರೆ.

ಹೌದು, “ಶ್ರೀಕೃಷ್ಣ ಆ್ಯಟ್‌ ಜಿ ಮೇಲ್‌ ಡಾಟ್‌ ಕಾಂ’ ಚಿತ್ರಕ್ಕೆ “ಜಾಕಿ’ ಖ್ಯಾತಿಯ ಮಲೆಯಾಳಂ ಚೆಲುವೆ ಭಾವನಾ ಮೆನನ್‌ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಡಾರ್ಲಿಂಗ್‌ ಕೃಷ್ಣ ಅವರಿಗೆ ಭಾವನಾ ಮೆನನ್‌ ಜೋಡಿಯಾಗುತ್ತಿರುವುದನ್ನು ನಿರ್ದೇಶಕ ನಾಗಶೇಖರ್‌ ಖಚಿತಪಡಿಸಿದ್ದಾರೆ. ಇನ್ನು ಚಿತ್ರತಂಡದ ಮೂಲಗಳ ಪ್ರಕಾರ, ಇದೇ ಸೆಪ್ಟೆಂಬರ್‌ 1ರಿಂದ ಚಿತ್ರದ ಚಿತ್ರೀಕರಣ ಆರಂಭಿಸಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆಯಂತೆ. ಮೊದಲ ಹಂತದಲ್ಲಿ ಸುಮಾರು 14 ದಿನಗಳ ಕಾಲ ಚಿತ್ರೀಕರಣ ನಡೆಯಲಿದ್ದು, ಚಿತ್ರಕ್ಕೆ ಸತ್ಯ ಹೆಗಡೆ ಛಾಯಾಗ್ರಹಣ ಮಾಡುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಜೆಸ್ಸಿ ಗಿಫ್ಟ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಮದರಂಗಿ ಕೃಷ್ಣ, ಭಾವನಾ ಮೆನನ್‌ ಅವರೊಂದಿಗೆ ದತ್ತಣ್ಣ, ಸುಹಾಸಿನಿ, ಅರುಣ್‌ ಸಾಗರ್‌, ರಂಗಾಯಣ ರಘು ಮುಂತಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಲಿದ್ದಾರೆ.

ರವಿ ಪ್ರಕಾಶ್‌ ರೈ

ಟಾಪ್ ನ್ಯೂಸ್

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.