ಕಲರ್‌ಫ‌ುಲ್‌ ಜರ್ನಿಯೊಂದಿಗೆ ಹುಡುಗ-ಹುಡುಗಿ

Team Udayavani, Dec 14, 2018, 6:00 AM IST

26.jpg

ಕನ್ನಡದಲ್ಲಿ “ಇಬ್ಬರು ಬಿ.ಟೆಕ್‌ ಸ್ಟೂಡೆಂಟ್‌ ಜರ್ನಿ’ ಎಂಬ ವಿಭಿನ್ನ ಶೀರ್ಷಿಕೆಯ ಚಿತ್ರವೊಂದು ತೆರೆಗೆ ಬರಲು ತಯಾರಾಗುತ್ತಿದೆ. ಸದ್ಯ ತನ್ನ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಪೂರ್ಣಗೊಳಿಸಿರುವ ಈ ಚಿತ್ರ ಇತ್ತೀಚೆಗೆ ತನ್ನ ಆಡಿಯೋ ಬಿಡುಗಡೆಗೊಳಿಸುವ ಮೂಲಕ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದೆ. ಚಾಮರಾಜಪೇಟೆಯಲ್ಲಿರುವ ಕನ್ನಡ ಚಲನಚಿತ್ರ ಕಲಾವಿದರ ಸಂಘದ ಆಡಿಟೋರಿಯಂನಲ್ಲಿ ನಡೆದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಹಿರಿಯ ನಿರ್ಮಾಪಕ ಕೆಸಿಎನ್‌ ಚಂದ್ರಶೇಖರ್‌ ಹಾಗೂ ಸಾಹಸ ನಿರ್ದೇಶಕ ಥ್ರಿಲ್ಲರ್‌ ಮಂಜು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರದ ಹಾಡುಗಳನ್ನು ಹೊರತಂದು, ಚಿತ್ರತಂಡಕ್ಕೆ ಶುಭ ಕೋರಿದರು.
ಚಿತ್ರದ ಶೀರ್ಷಿಕೆಯೇ ಹೇಳುವಂತೆ, “ಇಬ್ಬರು ಬಿ.ಟೆಕ್‌ ಸ್ಟೂಡೆಂಟ್‌ ಜರ್ನಿ’ ಚಿತ್ರವು ಇಬ್ಬರೂ ಬಿ.ಟೆಕ್‌ ಹುಡುಗ ಹುಡುಗಿಯ ಕಾಲೇಜ್‌ ಜರ್ನಿಯ ಸ್ಟೋರಿಯಾಗಿದ್ದು, ತೆಲುಗಿನ ಪ್ರತಿಷ್ಠಿತ “ನಂದಿ ಅವಾರ್ಡ್‌’ ವಿಜೇತ ನಿರ್ದೇಶಕ ವೇಮು ಗಂಟಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ವೇಮು ಗಂಟಿ, “ಇಂದಿನ ಹುಡುಗ-ಹುಡುಗಿಯರ ಜೀವನ, ಯೋಜನೆಗಳನ್ನು ಚಿತ್ರದಲ್ಲಿ ಹೇಳಿದ್ದೇವೆ. ಇದರ ಜೊತೆಗೆ ಮದುವೆಯ ನಂತರದ ಸಮಸ್ಯೆಗಳು, ಸವಾಲುಗಳನ್ನೂ ಈ ಚಿತ್ರದಲ್ಲಿ ತೋರಿಸಲಾಗಿದೆ. ಚಿತ್ರ ತುಂಬಾ ಚೆನ್ನಾಗಿ ಮೂಡಿಬಂದಿದ್ದು, ಕನ್ನಡ ಪ್ರೇಕ್ಷಕರಿಗೆ ಇಷ್ಟವಾಗುವುದು’ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು.

ಆಂಧ್ರ ಮೂಲದ ಹುಡಗ ಕೃಷ್ಣ ಈ ಚಿತ್ರದ ಮೂಲಕ ನಾಯಕ ನಟನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ನವನಟಿ ಕಿರಣ್‌ ಚೇತ್ವಾನಿ ಕೃಷ್ಣ ಅವರಿಗೆ ನಾಯಕಿಯಾಗಿ ಜೋಡಿಯಾಗಿದ್ದಾರೆ. ಉಳಿದಂತೆ ನಟ ಸಾಯಿಕುಮಾರ್‌, ಬುಲೆಟ್‌ ಪ್ರಕಾಶ್‌, ರವಿಕಿರಣ್‌ ,ವೀಣಾ ಸುಂದರ್‌, ವಿಜಯ್‌ ಚಂಡೂರ್‌ ಮೊದಲಾದ ಕಲಾವಿದರು ಚಿತ್ರದ ಇತರೆ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇನ್ನು ಈ ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಚಂದ್ರು ಮಹಾವೀರ್‌ ಚಿತ್ರದ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಮಾಜಿ ಸೈನಿಕರಾದ ಪ್ರಹ್ಲಾದ್‌ ಚಿತ್ರದಲ್ಲಿರುವ ಎಲ್ಲಾ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದಾರೆ. ಚಿತ್ರದ ಹಾಡುಗಳಿಗೆ ಅನಿರುಧ್‌ ಶಾಸ್ತ್ರಿ, ಸಂತೋಷ್‌ ,ಹೇಮಂತ್‌, ಚೇತನ್‌ ನಾಯಕ್‌, ಸುಪ್ರಿಯ, ಮೇಘನಾ ಜೋಷಿ ಮೊದಲಾದ ಗಾಯಕರು ಧ್ವನಿಯಾಗಿದ್ದಾರೆ. “ಶ್ರೀ ಶಾನ್ವಿ ಆಟ್ಸ್‌ ಆ್ಯಂಡ್‌ ಪಿಎಸ್‌ ಮೂವಿ ಮೇಕರ್ಸ್‌’ ಬ್ಯಾನರ್‌ನಲ್ಲಿ ಶ್ರೀನಿವಾಸ್‌ ಯಾದವ್‌, ವಿನಯ್‌ ಕುಮಾರ್‌ ಜಂಟಿಯಾಗಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಈಗಾಗಲೇ ಪ್ರಾದೇಶಿಕ ಚಿತ್ರಕ್ಕೆ ಸೆನ್ಸಾರ್‌ ಮಂಡಳಿಯಿಂದ “ಯು’ ಪ್ರಮಾಣಪತ್ರ ಪಡೆದುಕೊಂಡಿರುವ ಈ ಚಿತ್ರವನ್ನು ಇದೇ ಡಿಸೆಂಬರ್‌ ಅಂತ್ಯದಲ್ಲಿ ತೆರೆಗೆ ತರುವ ಯೋಜನೆಯಲ್ಲಿದೆ ಚಿತ್ರತಂಡ.

ಟಾಪ್ ನ್ಯೂಸ್

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

Mandya:ಹಲವು ರೋಗ ನಿವಾರಕ; ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Puttur: ಅತ್ಯಾ*ಚಾರ ಪ್ರಕರಣ: ಆರೋಪಿಗೆ ಜಾಮೀನು

Puttur: ಅತ್ಯಾ*ಚಾರ ಪ್ರಕರಣ: ಆರೋಪಿಗೆ ಜಾಮೀನು

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.