ಬಣ್ಣದ ಬುಟ್ಟಿಯಲ್ಲಿ ಮದುಮಗಳು; ಗರ ಗರ ಮೇ…

Team Udayavani, Jul 28, 2017, 11:10 AM IST

28-SSCH-6.jpg

ಅದು ಗಣೇಶ ದೇವಾಲಯ. ಮದುಮಗಳೊಬ್ಬಳನ್ನು ಅಲಂಕರಿಸಿದ ಬಣ್ಣದ ಬುಟ್ಟಿಯೊಂದರಲ್ಲಿ ಕೂರಿಸಿ ಹೊತ್ತು ತರಲಾಯಿತು. ಅಲ್ಲಿ ಮದುವೆ ಶಾಸ್ತ್ರಕ್ಕೆ ತಯಾರಿ ನಡೆಯುತ್ತಿತ್ತು. ಗಂಡಿನ ಕಡೆಯವರು ರೆಡಿಯಾಗಿದ್ದರು. ಹೆಣ್ಣು ಬರುತ್ತಿದ್ದಂತೆಯೇ ಶಾಸ್ತ್ರಕ್ಕೆ ಅಣಿಯಾದರು. ಆ ಶಾಸ್ತ್ರ ಮುಗಿಯುತ್ತಿದ್ದಂತೆಯೇ ಅತ್ತ ನಿರ್ದೇಶಕರು ಕಟ್‌ ಇಟ್‌ ಅಂದರು. ಇತ್ತ ಪತ್ರಕರ್ತರು ಮಾತುಕತೆಗೆ ರೆಡಿಯಾದರು. 

ಇದು ಕಂಡು ಬಂದದ್ದು, “ಗರ’ ಚಿತ್ರದ ಚಿತ್ರೀಕರಣದಲ್ಲಿ. ಅಂದು ನಿರ್ದೇಶಕ ಮುರಳಿ ಕೃಷ್ಣ ಮದುವೆ ದೃಶ್ಯವನ್ನು ಸೆರೆಹಿಡಿಯುತ್ತಿದ್ದರು. ಆ ವೇಳೆ, ಪತ್ರಕರ್ತರು ಆ ಸೆಟ್‌ಗೆ ಭೇಟಿ ಕೊಟ್ಟಾಗ, ಆ ಸೀನ್‌ ಮುಗಿಸಿ, ಪತ್ರಕರ್ತರ ಮುಂದೆ ತಂಡದ ಜತೆ ಬಂದು ಕುಳಿತರು ಮುರಳಿಕೃಷ್ಣ.

ಮುರಳಿಕೃಷ್ಣ ಅವರು ಆರ್‌.ಕೆ. ನಾರಾಯಣ್‌ ಅವರ ಕಿರುಕತೆಯನ್ನು ತೆಗೆದುಕೊಂಡು “ಗರ’ ಚಿತ್ರ ಮಾಡುತ್ತಿದ್ದಾರೆ. ಈಗಾಗಲೇ ಸದ್ದಿಲ್ಲದೆಯೇ ಕೊಪ್ಪ, ಬೆಂಗಳೂರು ಸೇರಿದಂತೆ ಇತರೆಡೆ ಚಿತ್ರೀಕರಿಸಿದ್ದಾರೆ. ಈ ಸಿನಿಮಾವನ್ನು ನಿರ್ದೇಶಿಸುವುದರ ಜತೆಗೆ ನಿರ್ಮಾಣದಲ್ಲೂ ತೊಡಗಿರುವ ಮುರಳಿಕೃಷ್ಣ, ಚಿತ್ರದ ವಿಶೇಷ ಪಾತ್ರಕ್ಕಾಗಿ ಬಾಲಿವುಡ್‌ ನಟ ಜಾನಿ ಲಿವರ್‌ ಅವರನ್ನು ಕರೆತಂದಿದ್ದಾಗಿ ಹೇಳಿಕೊಂಡರು. ಕನ್ನಡದ ಹಾಸ್ಯ ನಟ ಸಾಧು ಕೋಕಿಲ ಅವರ ಸಹೋದರರಾಗಿ ಜಾನಿ ಲಿವರ್‌ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯಕ್ಕೆ ಆ ಭಾಗದ ಚಿತ್ರೀಕರಣ ಆಗಬೇಕಿದೆ. ಉಳಿದಂತೆ ಸ್ಟಾರ್‌ ನಟರನ್ನು ಬಳಸಿಕೊಂಡು ಒಂದು ಹಾಡನ್ನು ಚಿತ್ರೀಕರಿಸುವ ಯೋಚನೆಯೂ ಇದೆ. ಅಕ್ಟೋಬರ್‌ನಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ತಯಾರಿ ಮಾಡಿಕೊಳ್ಳುತ್ತಿರುವುದಾಗಿ ಹೇಳಿದರು ಅವರು.

ಇನ್ನು, ಅಂದಿನ ಹೈಲೆಟ್‌ ಹಿರಿಯ ಕಲಾವಿದೆ ರೂಪಾದೇವಿ. “ಈ ಹಿಂದೆ ಶಾಂತರಾಂರವರ ಸಾಕಷ್ಟು ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಇಂದು ಅವರ ಸಹೋದರ ಮುರಳಿಕೃಷ್ಣ ಅವರ ನಿರ್ದೇಶನದಲ್ಲಿ ನಟಿಸುತ್ತಿರುವುದು ಖುಷಿ ತಂದಿದೆ’ ಅಂತ ನೆನಪು ಮೆಲುಕು ಹಾಕಿದರು. ರಾಮಕೃಷ್ಣ ಅವರು ಈ ಚಿತ್ರದಲ್ಲಿ ಹೀರೋ ತಂದೆಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ನಿರ್ದೇಶಕರ ಕೆಲಸವನ್ನು ಗುಣಗಾನ ಮಾಡಿದ ರಾಮಕೃಷ್ಣ, ಇದೊಂದು ಹೊಸ ಬಗೆಯ ಕಥೆ ಅಂದರು. ರೆಹಮಾನ್‌ ಅವರಿಲ್ಲಿ ಮದುಮಗನ ಗೆಳೆಯರಾಗಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಆವಂತಿಕ ಮೋಹನ್‌ ಮತ್ತು ಆರ್ಯನ್‌ ಅಂದು ಒಳ್ಳೆಯ ಪಾತ್ರ ಸಿಕ್ಕಿದ್ದಕ್ಕೆ ಖುಷಿ ಹೊರಹಾಕಿದರು. ನಟಿ ನೇಹಾ ಪಾಟೀಲ್‌ ತಮ್ಮ ಪಾತ್ರದ ಗುಟ್ಟು ಬಿಟ್ಟುಕೊಡಲಿಲ್ಲ. ಉಳಿದಂತೆ ಅಂದು ಪದ್ಮಜಾ ರಾವ್‌, ಮಿಮಿಕ್ರಿ ದಯಾನಂದ್‌, ರಮೇಶ್‌ ಭಟ್‌, ಶ್ರೀಕಾಂತ್‌ ಹೆಬ್ಳೀಕರ್‌ ಇದ್ದರು.

ಟಾಪ್ ನ್ಯೂಸ್

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Kiccha Sudeep supports Sanju Weds Geetha 2 movie

Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್‌‌

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.