![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 4, 2020, 4:30 PM IST
ಸುನಿ ನಿರ್ದೇಶನದ “ಬಜಾರ್’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಯಾದ ಯುವನಟ ಧನ್ವೀರ್, ಈಗ “ಬಂಪರ್’ ಚಿತ್ರದ ಮೂಲಕ ಮತ್ತೆ ಪ್ರೇಕ್ಷಕರ ಮುಂದೆ ಬರಲು ರೆಡಿಯಾಗುತ್ತಿದ್ದಾರೆ.
ಈ ಹಿಂದೆ ಶ್ರೀಮುರಳಿ ಅಭಿನಯದ “ಭರಾಟೆ’ ಚಿತ್ರವನ್ನು ನಿರ್ಮಿಸಿದ್ದ ಸುಪ್ರೀತ್ ಮತ್ತು ನಿಶಾ ವೆಂಕಟ್ ಈ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಾಣ ಮಾಡುತ್ತಿದ್ದಾರೆ. ಇನ್ನು “ಬಂಪರ್’ ಚಿತ್ರಕ್ಕೆ “ಬಹದ್ದೂರ್’ ಚೇತನ್ ಕುಮಾರ್ ಕಥೆ, ಚಿತ್ರಕಥೆ, ಸಂಭಾಷಣೆ ಹಾಗು ಸಾಹಿತ್ಯದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಹರಿ ಸಂತೋಷ್ ಈ ಚಿತ್ರದ ನಿರ್ದೇಶನದ ಹೊಣೆ ವಹಿಸಿಕೊಂಡಿದ್ದಾರೆ.
ಈಗಾಗಲೇ “ಬಂಪರ್’ ಚಿತ್ರದ ಬಹುತೇಕ ಪ್ರೀ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇದೇ ಸೆ. 8ರಂದು ನಾಯಕ ಧನ್ವೀರ್ ಬರ್ತ್‌ಡೇ ಗೆ ಚಿತ್ರದ ಟೀಸರ್ ಬಿಡುಗಡೆ ಮಾಡಲು ಪ್ಲಾನ್ ಹಾಕಿಕೊಂಡಿದೆ. ಉಳಿದಂತೆ ಇದೇ ತಿಂಗಳಾಂತ್ಯಕ್ಕೆ ಬೆಂಗಳೂರು, ಮೈಸೂರು ಸುತ್ತಮುತ್ತ ಚಿತ್ರದ ಮೊದಲ ಹಂತದ ಚಿತ್ರೀಕರಣಕ್ಕೆ ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ. “ಬಂಪರ್’ ಚಿತ್ರದ ಹಾಡುಗಳಿಗೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸುತ್ತಿದ್ದು, ನವೀನ್ ಛಾಯಾಗ್ರಹಣ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆ.ಜಿ.ಎಫ್ ಖ್ಯಾತಿಯ ಫೈಟ್ ಮಾಸ್ಟರ್ ವಿಕ್ರಂ ಚಿತ್ರದ ಸಾಹಸ ದೃಶ್ಯಗಳನ್ನು ಸಂಯೋಜಿಸುತ್ತಿದ್ದಾರೆ. ಒಟ್ಟಾರೆ ತನ್ನ ಟೈಟಲ್ ಮೂಲಕ ಒಂದಷ್ಟು ಸಿನಿಪ್ರಿಯರ ಗಮನ ಸೆಳೆದಿರುವ “ಬಂಪರ್’ ಟೀಸರ್ ಹೇಗಿರಲಿದೆ ಅನ್ನೋದು ಇನ್ನೇನು ಕೆಲ ದಿನಗಳಲ್ಲಿ ಗೊತ್ತಾಗಲಿದೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.