ಚೇಸ್‌ ಟೀಸರ್‌ ಬಂತು ಕನಸುಗಳ ಬೆನ್ನತ್ತಿದವರ ಥ್ರಿಲ್ಲರ್‌ ಜರ್ನಿ


Team Udayavani, Nov 22, 2019, 5:02 AM IST

pp-37

“ಚೇಸ್‌’ ಎಂಬ ಸಿನಿಮಾವೊಂದು ಆರಂಭವಾಗಿರುವ ಸುದ್ದಿಯನ್ನು ನೀವು ಕೇಳಿರಬಹುದು. ಆರಂಭವಾಗಿದ್ದು ಬಿಟ್ಟರೆ ಮಿಕ್ಕಂತೆ ಆ ಸಿನಿಮಾ ಏನಾಯಿತು, ಯಾವ ಹಂತದಲ್ಲಿದೆ ಎಂಬ ಮಾಹಿತಿ ಇರಲಿಲ್ಲ. ಆದರೆ, ಈಗ ಚಿತ್ರತಂಡ ಚಿತ್ರೀಕರಣ ಮುಗಿಸಿ ಬಿಡುಗಡೆಯ ಹಂತಕ್ಕೆ ಬಂದಿದೆ. ಮೊದಲ ಹಂತವಾಗಿ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ. ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕರಾದ ಭಗವಾನ್‌ ,ಬರಗೂರು ರಾಮಚಂದ್ರಪ್ಪ, ಸಾಯಿಪ್ರಕಾಶ್‌ ಚಿತ್ರದ ಟೀಸರ್‌ ರಿಲೀಸ್‌ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು.

ಈ ಚಿತ್ರವನ್ನು ವಿಲೋಕ್‌ ಶೆಟ್ಟಿ ನಿರ್ದೇಶಿಸಿದ್ದಾರೆ. ಇದೊಂದು ಕ್ರೈಮ್‌ ಥ್ರಿಲ್ಲರ್‌ ಸಿನಿಮಾವಾಗಿದ್ದು,
ಚಿತ್ರದಲ್ಲಿ ಸಾಕಷ್ಟು ಮಂದಿ ಕಲಾವಿದರು ನಟಿಸಿದ್ದಾರೆ. ಅವರೆಲ್ಲರ ಡೇಟ್ಸ್‌ ಹೊಂದಿಸಿ ಚಿತ್ರೀಕರಣ ಮಾಡಬೇಕಾಗಿದ್ದರಿಂದ ಚಿತ್ರ ಸ್ವಲ್ಪ ತಡವಾಯಿತು ಎಂದರು. ಮಹಿಳೆಯರು ರಾತ್ರಿ ಹೊತ್ತು ಕ್ಯಾಬ್‌ನಲ್ಲಿ ಪ್ರಯಾಣಿಸೋದು ಎಷ್ಟು ಸೇಫ್ ಎಂಬ ವಿಷಯವನ್ನಿಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಚಿತ್ರದಲ್ಲಿ ಥ್ರಿಲ್ಲರ್‌ ಅಂಶಗಳು ಹೆಚ್ಚಿರುವುದರಿಂದ ಪ್ರೇಕ್ಷಕ ಇಷ್ಟಪಡುತ್ತಾನೆ ಎಂಬ ವಿಶ್ವಾಸ ವಿಲೋಕ್‌ ಶೆಟ್ಟಿಯವರದು. ಈ ಚಿತ್ರವನ್ನು ಸಿಂಪ್ಲಿಫ‌ನ್‌ ಮೀಡಿಯಾ ನೆಟ್‌ವರ್ಕ್‌ ಮೂಲಕ ಮನೋಹರ್‌, ಪ್ರದೀಪ್‌ ಶೆಟ್ಟಿ, ಪ್ರಶಾಂತ್‌ ಶೆಟ್ಟಿ ನಿರ್ಮಿಸಿದ್ದಾರೆ.

ಚಿತ್ರದಲ್ಲಿ ರಾಧಿಕಾ ನಾರಾಯಣ್‌, ಅವಿನಾಶ್‌ ನರಸಿಂಹರಾಜು, ಶೀತಲ್‌ ಶೆಟ್ಟಿ, ಅರ್ಜುನ್‌ ಯೋಗಿ, ಅರವಿಂದ್‌ ರಾವ್‌ ಪ್ರಮೋದ್‌ ಶೆಟ್ಟಿ, ರಾಜೇಶ್‌ ನಟರಂಗ, ರೆಹಮಾನ್‌ ಹಾಗೂ ಬಾಲಿವುಡ್‌ನ‌ ಎಬಿಸಿಡಿ ಚಿತ್ರದಲ್ಲಿ ನಟಿಸಿದ ಸುಶಾಂತ್‌ ಪೂಜಾರಿ ನಟಿಸಿದ್ದಾರೆ. ರಾಧಿಕಾ ನಾರಾಯಣ್‌ ಅವರಿಗೆ ಈ ಚಿತ್ರದಲ್ಲಿ ಹೊಸ ಬಗೆಯ ಪಾತ್ರ ಸಿಕ್ಕಿದೆಯಂತೆ. ಪೊಲೀಸ್‌ ಇನ್ಸ್‌ಪೆಕ್ಟರ್‌ ತರಬೇತಿ ಪಡೆಯುತ್ತಿರುವ ಯುವತಿಯ ಪಾತ್ರದಲ್ಲಿ ರಾಧಿಕಾ  ಕಾಣಿಸಿಕೊಂಡಿದ್ದಾರಂತೆ. ಬಹುತೇಕ ಸಿನಿಮಾಗಳಲ್ಲಿ ಪೊಲೀಸ್‌ ಆಫಿಸರ್‌ ಆಗಿ ನಟಿಸಿರುವ ಅರವಿಂದ್‌ ರಾವ್‌ ಅವರಿಗೆ ಈ ಚಿತ್ರದಲ್ಲಿ ಡಾಕ್ಟರ್‌ ಪಾತ್ರ ಸಿಕ್ಕಿದೆಯಂತೆ. ಜೊತೆಗೆ ಚಿತ್ರದ ಕಥಾವಸ್ತು ಹಾಗೂ ನಿರೂಪಣೆ ಹೊಸ ಬಗೆಯಿಂದ ಕೂಡಿದೆ ಎಂಬುದು ಅವರ ಮಾತು. ರೆಹಮಾನ್‌ ಇಲ್ಲಿ ಪೊಲೀಸ್‌ ಆಫಿಸರ್‌ ಆಗಿ ಕಾಣಿಸಿಕೊಂಡಿದ್ದಾರೆ.ರಾಜೇಶ್‌ ನಟರಂಗ ಕೂಡಾ ಈ ಚಿತ್ರದಲ್ಲಿ ಒಂದು ಪಾತ್ರ ಮಾಡಿದ್ದು, ಚಿತ್ರದ ಮೇಲೆ ಅವರಿಗೆ ಭರವಸೆ ಇದೆಯಂತೆ.

ಟಾಪ್ ನ್ಯೂಸ್

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.