ಸಿಟಿ ಹುಡುಗ ಹಳ್ಳಿ ಲೈಫ್

ಎಸ್‌. ನಾರಾಯಣ್‌ ಪುತ್ರನ ಸಿನಿ ಎಂಟ್ರಿ

Team Udayavani, Dec 6, 2019, 6:00 AM IST

ws-32

ಹಿರಿಯ ನಿರ್ದೇಶಕ, ನಿರ್ಮಾಪಕ ಕಂ ನಟ ಎಸ್‌.ನಾರಾಯಣ್‌ ಪುತ್ರ ಪಂಕಜ್‌ ಈಗಾಗಲೇ ಹಲವು ಚಿತ್ರಗಳಲ್ಲಿ ಅಭಿನಯಿಸಿ ನಾಯಕ ನಟನಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಎಸ್‌. ನಾರಾಯಣ್‌ ಮತ್ತೂಬ್ಬ ಪುತ್ರ ಪವನ್‌ ನಾರಾಯಣ್‌ ಕೂಡ ನಾಯಕ ನಟನಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಕಳೆದ ಕೆಲ ವರ್ಷಗಳಿಂದ ರಂಗಭೂಮಿ ಕಲಾವಿದನಾಗಿ ಮತ್ತು ಚಿತ್ರರಂಗದಲ್ಲಿ ಪರದೆಯ ಹಿಂದಿನ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಪವನ್‌ ನಾರಾಯಣ್‌, ಒಂದಷ್ಟು ಅನುಭವ ಪಡೆದುಕೊಂಡು, ನಟನಾಗಲು ಒಂದಷ್ಟು ಸಿದ್ಧತೆ ಮಾಡಿಕೊಂಡು ಈಗ “ಚಿ.ರಾ. ಮುತ್ತು ಚಿ.ಸೌ.ರತ್ನ’ ಎಂಬ ಚಿತ್ರದ ಮೂಲಕ ಬೆಳ್ಳಿ ತೆರೆಗೆ ಅಡಿಯಿಡುತ್ತಿದ್ದಾರೆ. ನಿರ್ದೇಶಕ ಪ್ರೇಮ್‌ ಅವರೊಂದಿಗೆ ಮತ್ತು ಹಲವು ಧಾರಾವಾಹಿಗಳಿಗೆ ಕೆಲಸ ಮಾಡಿದ ಅನುಭವವಿರುವ ಶ್ರೀಕಾಂತ್‌ ಹುಣಸೂರು ಮೊದಲ ಬಾರಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇತ್ತೀಚೆಗೆ ಪವನ್‌ ನಾರಾಯಣ್‌ ಅಭಿನಯಿಸುತ್ತಿರುವ ಚೊಚ್ಚಲ ಚಿತ್ರದ ಮುಹೂರ್ತ ಅದ್ಧೂರಿಯಾಗಿ ನೆರವೇರಿತು. ನಟಿ, ಸಂಸದೆ ಸುಮಲತಾ ಅಂಬರೀಶ್‌, ನಟ ಶ್ರೀಮುರಳಿ, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌, ಎಸ್‌.ಎ ಚಿನ್ನೇಗೌಡ ಮೊದಲಾದವರು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

ಇದೇ ವೇಳೆ ಮಾತನಾಡಿದ ನವ ನಟ ಪವನ್‌, “ಹಳ್ಳಿಯಲ್ಲಿರುವ ನನಗೇ ಎಲ್ಲ ಗೊತ್ತಿದೆ ಅಂಥ ಅಂದುಕೊಂಡಿರುವ ಹುಡುಗನ ಪಾತ್ರ ನನ್ನದು. ಚಿತ್ರದ ಪಾತ್ರ ನೈಜವಾಗಿರುವುದರಿಂದ, ಪ್ರೇಕ್ಷಕರಿಗೆ ಹತ್ತಿರವಾಗುವುದೆಂಬ ನಂಬಿಕೆ ಇದೆ. ಚಿತ್ರದ ಪಾತ್ರಕ್ಕಾಗಿ ಒಂದಷ್ಟು ತಯಾರಿ ಮಾಡಿಕೊಂಡಿದ್ದೇನೆ. ಇದೊಂದು ಹೊಸಥರದ ಚಿತ್ರವಾಗಲಿದೆ’ ಎಂದರು.

ಇನ್ನು ಚಿತ್ರದ ಶೀರ್ಷಿಕೆ ಹೇಳುವಂತೆ, ಇದೊಂದು ಲವ್‌ ಕಮ್‌ ಅರೇಂಜ್‌ ಮ್ಯಾರೇಜ್‌ ಸ್ಟೋರಿ. ಚಿತ್ರದ ಬಗ್ಗೆ ಮಾತನಾಡುವ ನವ ನಿರ್ದೇಶಕ ಶ್ರೀಕಾಂತ್‌ ಹುಣಸೂರು, “ಕೆಲ ವರ್ಷಗಳ ಹಿಂದೆ ಮುತ್ತತ್ತಿ ಸಮೀಪ ನಡೆದ ನೈಜ ಘಟನೆಯ ಎಳೆಯನ್ನ ಇಟ್ಟುಕೊಂಡು ಈ ಚಿತ್ರ ಮಾಡುತ್ತಿದ್ದೇವೆ. ಇದೊಂದು ಹಳ್ಳಿ ಹಿನ್ನೆಲೆಯಲ್ಲಿ ಸಾಗುವ ಚಿತ್ರ. ಇದರಲ್ಲಿ ಲವ್‌, ಸೆಂಟಿಮೆಂಟ್‌, ಕಾಮಿಡಿ ಎಲ್ಲವೂ ಇದೆ. ಗೊತ್ತು ಗುರಿ ಇಲ್ಲದ, ಬದುಕಿನ ಬಗ್ಗೆ ಚಿಂತೆ ಇರದ ಅವಿದ್ಯಾವಂತ ಹುಡುಗನೊಬ್ಬನ ಜೀವನದಲ್ಲಿ ಹುಡುಗಿಯೊಬ್ಬಳು ಪ್ರವೇಶವಾದಾಗ ಏನೆಲ್ಲ ನಡೆಯುತ್ತದೆ ಅನ್ನೋದು ಚಿತ್ರದ ಕಥೆ. ಮೇಲ್ನೋಟಕ್ಕೆ ಸಾಮಾನ್ಯ ಕಥೆಯಂತೆ ಕಂಡರೂ, ತೆರೆಮೇಲೆ ಅದನ್ನು ಬೇರೆ ರೀತಿಯಲ್ಲಿ ಪ್ರಸೆಂಟ್‌ ಮಾಡುತ್ತೇವೆ. ನೋಡುಗರಿಗೆ ಹೊಸಥರದಲ್ಲಿ ಚಿತ್ರ ಕಾಣುತ್ತದೆ’ ಎಂದು ವಿವರಣೆ ನೀಡಿದರು.

“ಚಿ.ರಾ. ಮುತ್ತು ಚಿ.ಸೌ.ರತ್ನ’ ಚಿತ್ರದಲ್ಲಿ ಚಿಕ್ಕಮಗಳೂರು ಮೂಲದ ಅಂಜನಾ ಗೌಡ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಇಲ್ಲಿಯವರೆಗೆ ಕಿರುತೆರೆಯ ಧಾರಾವಾಹಿಗಳಲ್ಲಿ ಅಭಿನಯಿಸಿರುವ ಅಂಜನಾಗೆ ಇದು ಮೊದಲ ಚಿತ್ರ. ಇಲ್ಲಿ ಅವರು ರತ್ನ ಎನ್ನುವ ಹೆಸರಿನ ಹಳ್ಳಿಯ ಸಾಹುಕಾರನ ಮುದ್ದಿನ ಮಗಳಾಗಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಹಿರಿಯ ನಟ ಚರಣ್‌ ರಾಜ್‌ ಚಿತ್ರದಲ್ಲಿ ನಾಯಕಿಯ ತಂದೆ ಪಾತ್ರ ನಿರ್ವಹಿಸುತ್ತಿದ್ದಾರೆ. ಉಳಿದಂತೆ ನಾಗಾಭರಣ, ಸುಚೇಂದ್ರ ಪ್ರಸಾದ್‌, ರವಿಶಂಕರ್‌ಗೌಡ, ರಾಜೇಶ್‌ ನಟರಂಗ, ಗಿರಿ, ವೀಣಾ ಸುಂದರ್‌ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಶ್ರೀಮತಿ ದೇವಕಿ “ಚಿ.ರಾ. ಮುತ್ತು ಚಿ.ಸೌ.ರತ್ನ’ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸುತ್ತಿದ್ದು, ಚಿತ್ರಕ್ಕೆ ಕೃಷ್ಣ ಮಂಡ್ಯ ಛಾಯಾಗ್ರಹಣ, ರಘು ನಿಡುವಳ್ಳಿ ಸಂಭಾಷಣೆಯಿದೆ. ಚಿತ್ರದ ಹಾಡುಗಳಿಗೆ ಲೋಕೇಶ್‌ ಸಂಗೀತವಿದ್ದು, ಚೇತನ್‌ ಕುಮಾರ್‌, ಅರಸು ಅಂತಾರೆ, ಸಂತೊಷ್‌ ನಾಯಕ್‌ ಸಾಹಿತ್ಯವಿದೆ. ಚಿತ್ರಕ್ಕಿದೆ. ಸುಮಾರು 45 ದಿನಗಳ ಕಾಲ ಕೊಳ್ಳೆಗಾಲ, ಚಾಮರಾಜನಗರ, ತಿಪಟೂರು ಸುತ್ತಮುತ್ತ ಚಿತ್ರೀಕರಣ ನಡೆಸಲು ಚಿತ್ರತಂಡ ಪ್ಲಾನ್‌ ಹಾಕಿಕೊಂಡಿದೆ.

ಟಾಪ್ ನ್ಯೂಸ್

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.