ಚಾಣಾಕ್ಷನ ಹಾಡಿಗೆ ದರ್ಶನ್ ಸಾಥ್
Team Udayavani, Nov 30, 2018, 6:00 AM IST
ನಟ ದರ್ಶನ್ ಹೊಸಬರ ಚಿತ್ರಗಳಿಗೆ ಸದಾ ಬೆಂಬಲ ಕೊಡುತ್ತಲೇ ಬಂದಿದ್ದಾರೆ. ಅದರಲ್ಲೂ ಯುವ ನಟ ಧರ್ಮ ಕೀರ್ತಿರಾಜ್ ಅಭಿನಯದ ಎಲ್ಲಾ ಚಿತ್ರಗಳಿಗೂ ಪ್ರೋತ್ಸಾಹ ಕೊಡುತ್ತಲೇ ಬಂದಿದ್ದಾರೆ. ಆ ಸಾಲಿಗೆ “ಚಾಣಾಕ್ಷ’ ಚಿತ್ರವೂ ಸೇರಿದೆ. ಇತ್ತೀಚೆಗೆ ದರ್ಶನ್ ಅವರು ಲಹರಿ ಆಡಿಯೋ ಸಂಸ್ಥೆ ಮೂಲಕ ಹೊರಬಂದ “ಚಾಣಾಕ್ಷ’ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಅಂದಿನ ಆಡಿಯೋ ಬಿಡುಗಡೆ ಸಮಾರಂಭಕ್ಕೆ ನಟ ವಿನೋದ್ ಪ್ರಭಾಕರ್, ತರುಣ್ ಸುಧೀರ್, ಸೇರಿದಂತೆ ಹಲವು ಕಲಾವಿದರು ಸಾಕ್ಷಿಯಾದರು.
ಅಂದು ವೇದಿಕೆ ಮುಂಭಾಗದಲ್ಲಿದ್ದ ಪುಟ್ಟ ಬಾಲಕಿಯೊಬ್ಬಳನ್ನು ವೇದಿಕೆಗೆ ಆಹ್ವಾನಿಸಿದ ದರ್ಶನ್, ಆ ಹುಡುಗಿ ಕೈಯಿಂದ ಆಡಿಯೋ ಬಿಡುಗಡೆ ಮಾಡಿಸಿದರು. ಇನ್ನು, ನಿರ್ದೇಶಕ ಮಹೇಶ್ ಚಿನ್ಮಯ್ ಅವರು ಹೇಳಿದ ಕಥೆ ಇಷ್ಟವಾಗಿದ್ದರಿಂದ ನಿರ್ಮಾಪಕ ವೆಂಕಟೇಶ್ ಅವರು, ಚಿತ್ರಕ್ಕೆ ಎಲ್ಲವನ್ನೂ ಒದಗಿಸಿ, ಒಂದೊಳ್ಳೆಯ ಚಿತ್ರ ಮಾಡಿರುವ ಖುಷಿಯನ್ನು ವ್ಯಕ್ತಪಡಿಸಿದರೆ, ನಿರ್ದೇಶಕ ಮಹೇಶ್ ಚಿನ್ಮಯ್ ಅವರಿಗೆ, ಅಂದುಕೊಂಡಿದ್ದಕ್ಕಿಂತಲೂ ಚೆನ್ನಾಗಿ ಚಿತ್ರ ಮೂಡಿಬಂದಿದೆ ಎಂಬ ನೆಮ್ಮದಿ. ಅವರಿಗೆ ಇದು ಮೂರನೇ ಚಿತ್ರ. ಈ ಚಿತ್ರದ ಮೂಲಕ ಧರ್ಮಕೀರ್ತಿರಾಜ್ ಆವರಿಗೊಂದು ಹೊಸ ಇಮೇಜ್ ಸಿಗುತ್ತದೆ ಎಂಬ ವಿಶ್ವಾಸ ನಿರ್ದೇಶಕರದ್ದು. ಇದೊಂದು ಲವ್ ಜೊತೆಗೆ ಕಾಮಿಡಿ ಹಾಗು ಆ್ಯಕ್ಷನ್ ಅಂಶಗಳನ್ನು ಹೊಂದಿದೆ ಎಂಬ ವಿವರ ಕೊಡುತ್ತಾರೆ ಮಹೇಶ್ ಚಿನ್ಮಯ್.
ಸಂಗೀತ ನಿರ್ದೇಶಕ ಅಭಿಮನ್ ರಾಯ್ ಅವರು ಈ ಚಿತ್ರಕ್ಕೆ ಐದು ಹಾಡುಗಳನ್ನು ನೀಡಿದ್ದಾರಂತೆ. ಅವರ ಹದಿನೆಂಟು ವರ್ಷಗಳ ಸಿನಿಪಯಣವನ್ನು ಮೆಲುಕು ಹಾಕಿದರಲ್ಲದೆ, ಮೊದಲ ಸಲ ಅವಕಾಶ ಕೊಟ್ಟ ವೇಲು ಅವರನ್ನು ನೆನಪಿಸಿಕೊಂಡರು. ಚಿತ್ರದಲ್ಲಿ ಧರ್ಮಕೀರ್ತಿರಾಜ್ ಅವರಿಗೆ ವಿಶೇಷ ಪಾತ್ರ ಸಿಕ್ಕ ಖುಷಿ ಇದೆ. ಇನ್ನುಳಿದಂತೆ, ಅಭಯ್ ಎಂಬ ಹೊಸ ಹುಡುಗ ಚಿತ್ರದಲ್ಲಿ ಇನ್ಸ್‌ಪೆಕ್ಟರ್ ಪಾತ್ರ ಮಾಡಿದ್ದಾರೆ. ಅರ್ಚನಾ, ನಿಮಿಕಾ, ಸಿಂಧುಲೋಕನಾಥ್, ಕೃಷಿ ತಪಂಡ, ಕೀರ್ತಿರಾಜ್ ದಂಪತಿ, ಸೇರಿದಂತೆ ಹಲವರು ಆಡಿಯೋ ಬಿಡುಗಡೆ ಸಮಾರಂಭಕ್ಕೆ ಸಾಕ್ಷಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.