ಯಾವುದಾದ್ರೂ ಕೆಲ್ಸ ಖಾಲಿ ಇದ್ಯಾ…? ಪುಟ್ಟಗೌರಿಯ ಕೆಲಸದ ಬೇಡಿಕೆ
ಪುಟ್ಟಗೌರಿಯ ಕೆಲಸದ ಬೇಡಿಕೆ
Team Udayavani, May 1, 2020, 9:22 AM IST
ಕಿರುತೆರೆಯ ಪುಟ್ಟಗೌರಿ ಮದುವೆ ಧಾರಾವಾಹಿ ಖ್ಯಾತಿಯ ನಟಿ ರಂಜನಿ ರಾಘವನ್ ಬಳಿಕ ರಾಜಹಂಸ ಚಿತ್ರದ ಮೂಲಕ ಹಿರಿತೆರೆಗೂ ನಾಯಕ ನಟಿಯಾಗಿ ಪರಿಚಯವಾಗಿದ್ದರು. ಈಗ ಹಿರಿತೆರೆ ಮತ್ತು ಕಿರುತೆರೆ ಎರಡರಲ್ಲೂ ಸಕ್ರಿಯವಾಗಿರುವ ರಂಜನಿ ರಾಘವನ್, ಟಕ್ಕರ್ ಚಿತ್ರದ ಮೂಲಕ ಹಿರಿತೆಯಲ್ಲಿ ಬರೋದಕ್ಕೆ ಸಿದ್ದವಾದರೆ, ಮತ್ತೂಂದೆಡೆ, ಕನ್ನಡತಿ ಅನ್ನೊ ಧಾರಾವಾಹಿ ಮೂಲಕ ಪ್ರತಿದಿನ ಕಿರುತೆರೆಯ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದರು. ಆದರೆ ಸದ್ಯ ಕೋವಿಡ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಿನಿಮಾ ಮತ್ತು ಧಾರಾವಾಹಿಗಳ ಚಿತ್ರೀಕರಣಕ್ಕೆ ಸಂಪೂರ್ಣ ಬ್ರೇಕ್ ಬಿದ್ದಿದೆ. ಥಿಯೇಟರ್ ಗಳಲ್ಲಿ ಸಿನಿಮಾ ಪ್ರದರ್ಶನಗಳು ಬಂದ್ ಆಗಿದ್ದು, ಇನ್ನು ಎಲ್ಲ ವಾಹಿನಿಗಳು ತಮ್ಮ ಹಿಂದಿನ ಧಾರಾವಾಹಿಗಳ ಸಂಚಿಕೆಗಳನ್ನು ಮರು ಪ್ರಸಾರ ಮಾಡುತ್ತಿವೆ.
ಇದರಿಂದಾಗಿ ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಬ್ಯುಸಿಯಾಗಿರುತ್ತಿದ್ದ ನಟಿ ರಂಜನಿ ರಾಘವನ್ ಇದೀಗ ಮೆನಯಲ್ಲೇ ಕಾಲ ಕಳೆಯುವಂತಾಗಿದೆ. ಇದರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಅಕ್ಟಿಟಿವ್ ಆಗಿರುವ ರಂಜನಿ, ಆಗಾಗ ಪೋಸ್ಟ್ ಹಾಕುತ್ತಿರುತ್ತಾರೆ. ಇದೀಗ ರಂಜನಿ ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿರುವ ಪೋಸ್ಟ್ ಒಂದಷ್ಟು ಸದ್ದು ಮಾಡುತ್ತಿದೆ. ಹೌದು, ರಂಜನಿ ಇದ್ದಕ್ಕಿದ್ದಂತೆ ಕೆಲಸ ಕೇಳಿಕೊಂಡು ಪೋಸ್ಟ್ ಮಾಡಿದ್ದಾರೆ.
ಈ ಹಿಂದೆ ಪದವಿ ಮುಗಿಯುತ್ತಿದ್ದಂತೆ ರಂಜನಿ ರಾಘವನ್ ಅವರು ತಮ್ಮ ಪದವಿ ಪ್ರಮಾಣ ಪತ್ರವನ್ನು ಫೇಸ್ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ್ದರಂತೆ. ಇದೀಗ ಅದನ್ನು ಎಫ್‌ಬಿ ನೆನಪಿಸಿದೆ. ಮೂರು ವರ್ಷಗಳ ಹಿಂದಿನ ಪೋಸ್ಟ್ ನ್ನು ಎಫ್‌ಬಿ ನೆನಪಿಸಿತು. ನಾನು ಕಾನ್ವಕೇಶನ್ ಪಡೆದು ಮೂರು ವರ್ಷಗಳಾಯಿತು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ ಕನ್ನಡದಲ್ಲಿ ಯಾವ್ದಾದ್ರೂ ಕೆಲಸ ಖಾಲಿ ಇದ್ಯಾ? ಎಂದು ಕೇಳಿದ್ದಾರೆ. ಸದ್ಯ ರಂಜನಿ ಹಾಕಿರುವ ಪೋಸ್ಟ್‌ಗೆ ಅಭಿಮಾನಿಗಳು ಹತ್ತಾರು ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.