ಬೆದರಿಸಲು ಬಂದಳು ದೇವಯಾನಿ

Team Udayavani, Jun 14, 2019, 5:00 AM IST

u-13

ಕನ್ನಡ ಚಿತ್ರರಂಗಕ್ಕೂ ಹಾರರ್‌ ಚಿತ್ರಗಳಿಗೂ ಅದೇನೋ ಒಂಥರಾ ಬಿಡಿಸಲಾಗದ ನಂಟು. ಅದರಲ್ಲೂ ಕಳೆದ ಮೂರ್‍ನಾಲ್ಕು ವರ್ಷಗಳಲ್ಲಿ ಹಿಂದೆಂದಿಗಿಂತಲೂ ಹೆಚ್ಚಾಗಿ ಸಾಲು ಸಾಲು ಹಾರರ್‌ ಚಿತ್ರಗಳು ಪ್ರೇಕ್ಷಕರನ್ನು ಬೆಚ್ಚಿ ಬೀಳಿಸಲು ಬರುತ್ತಿವೆ. ಈಗ ಅಂಥದ್ದೇ ಮತ್ತೂಂದು ಚಿತ್ರ ಪ್ರೇಕ್ಷಕರ ಮುಂದೆ ಬರೋದಕ್ಕೆ ರೆಡಿಯಾಗಿದೆ. ಅಂದಹಾಗೆ, ಆ ಚಿತ್ರದ ಹೆಸರು “ದೇವಯಾನಿ’. ತೆರೆಯ ಹಿಂದೆ ಮತ್ತು ತೆರೆಯ ಮುಂದೆ ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸಿರುವ “ದೇವಯಾನಿ’ ಸದ್ಯ ತೆರೆಗೆ ಬರಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಇನ್ನು “ದೇವಯಾನಿ’ಚಿತ್ರದಲ್ಲಿ ದೆವ್ವ, ದೇವರು ಮತ್ತು ವಿಜ್ಞಾನ ಈ ಮೂರರ ಸಂಗಮವಿದೆ. ಆತ್ಮಗಳ ಬಗ್ಗೆ ಅಧ್ಯಯನ ನಡೆಸುವ ಪ್ರೊಫೇಸರ್‌ ಒಬ್ಬರು ಪರಕಾಯ ಪ್ರವೇಶ ಮಾಡಲು ಮುಂದಾಗುತ್ತಾರೆ. ಆನಂತರ ಅಲ್ಲಿ ಏನೇನು ಘಟನೆಗಳು ನಡೆಯುತ್ತವೆ ಅನ್ನೋದೆ “ದೇವಯಾನಿ’ ಚಿತ್ರದ ಕಥೆಯ ಒಂದು ಎಳೆ.

ಭಾರತದ ಅನೇಕ ಪುರಾಣ ಮತ್ತು ಪುಣ್ಯ ಕಥೆಗಳಲ್ಲಿ ಪರಕಾಯ ಪ್ರವೇಶದ ಬಗ್ಗೆ ಅನೇಕ ಉದಾಹರಣೆಗಳಿದ್ದು, ಆದಿಗುರು ಶಂಕರಾಚಾರ್ಯರು ಮತ್ತು ವಿಕ್ರಮಾದಿತ್ಯ ಪರಕಾಯ ಪ್ರವೇಶ ಸಿದ್ಧಾಂತವನ್ನು ಪ್ರೇರಣೆಯಾಗಿ ಇಟ್ಟುಕೊಂಡು ಈ ಚಿತ್ರವನ್ನು ಮಾಡಲಾಗಿದೆ ಎನ್ನುವುದು ಚಿತ್ರತಂಡದ ಮಾತು. ಇನ್ನು ಚಿತ್ರದಲ್ಲಿ ಸುಮಾರು ಮೂವತ್ತು ನಿಮಿಷಗಳಷ್ಟು ಸ್ಪೆಷಲ್‌ ಗ್ರಾಫಿಕ್ಸ್‌ ಕೂಡ ಬಳಸಿಕೊಳ್ಳಲಾಗಿದ್ದು, ಇಲ್ಲಿಯವರೆಗೆ ಬಂದ ಹಾರರ್‌-ಥ್ರಿಲ್ಲರ್‌ ಚಿತ್ರಗಳಿಗಿಂತ “ದೇವಯಾನಿ’ ಪ್ರೇಕ್ಷಕರಿಗೆ ಹೊಸ ಅನುಭವ ನೀಡಲಿದೆ ಎನ್ನುತ್ತದೆ ಚಿತ್ರತಂಡ. “ದೇವಯಾನಿ’ ಚಿತ್ರದಲ್ಲಿ ಎರಡು ಹಾಡುಗಳಿದ್ದು, ಕುಮಾರ್‌ ಈಶ್ವರ್‌ ಚಿತ್ರದ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಸಾಫ್ಟ್

ವೇರ್‌ ಇಂಜಿನಿಯರ್‌ ಹರೀಶ್‌ ಎರಡೂ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದಾರೆ. ಚಿತ್ರದಲ್ಲಿ “ದೇವಯಾನಿ’ಯ ಪಾತ್ರದಲ್ಲಿ ನಾಯಕಿಯಾಗಿ ಅರ್ಚನಾ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ರಾಗ, ಗೋಪಿಕೃಷ್ಣ, ಜನಾರ್ಧನ್‌ ಮೊದಲಾದವರು ಚಿತ್ರದ ಇತರೆ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಸುಮಾರು ಎರಡೂವರೆ ದಶಕಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಟಿ. ಸುಲ್ತಾನ್‌ ಮತ್ತು ಕೆ. ಸುಬ್ಬಿರಾಮಿ ರೆಡ್ಡಿ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಬೆಂಗಳೂರು ನಗರ, ದೇವನಹಳ್ಳಿಯ ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಕಸ್ತೂರಿ ಜಗನ್ನಾಥ್‌ ಚಿತ್ರವನ್ನು ನಿರ್ದೇ­ಶಿಸಿದ್ದಾರೆ. ಇತ್ತೀಚೆಗೆ ಮಾಧ್ಯಮಗಳ ಮುಂದೆ ಬಂದಿದ್ದ “ದೇವಯಾನಿ’ ಚಿತ್ರತಂಡ ಚಿತ್ರದ ಬಗ್ಗೆ ಕೆಲ ಮಾಹಿತಿಗಳನ್ನು ಹಂಚಿಕೊಂಡಿತು. ಸದ್ಯ ಚಿತ್ರದ ಪ್ರಮೋಶನ್‌ ಕೆಲಸಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇದೇ ಜುಲೈ ವೇಳೆಗೆ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದೆ.

ಟಾಪ್ ನ್ಯೂಸ್

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

1-neemo

ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.