ಬಜಾರ್ ನಿರೀಕ್ಷೆಯಲ್ಲಿ ಧನ್ವೀರ್
Team Udayavani, Jan 11, 2019, 12:30 AM IST
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಸುನಿ ನಿರ್ದೇಶನದ “ಬಜಾರ್’ ಚಿತ್ರ ಇಂದು ತೆರೆಕಾಣಬೇಕಿತ್ತು. ಚಿತ್ರತಂಡ ಎಲ್ಲಾ ತಯಾರಿ ಮಾಡಿಕೊಂಡಿತ್ತು. ಆದರೆ, ಚಿತ್ರದ ಬಿಡುಗಡೆ ಕಾರಣಾಂತರಗಳಿಂದ ಮುಂದಕ್ಕೆ ಹೋಗಿದೆ. ಬಿಡುಗಡೆಗೂ ಮುನ್ನ ಚಿತ್ರತಂಡ ಟ್ರೇಲರ್‌ವೊಂದನ್ನು ಬಿಡುಗಡೆ ಮಾಡಿದ್ದು, ಟ್ರೇಲರ್ ನೋಡಿದವರು ಈ ಚಿತ್ರದ ಮೂಲಕ ಹೊಸ ಹುಡುಗ ಧನ್ವೀರ್ ಚಿತ್ರರಂಗದಲ್ಲಿ ನೆಲೆನಿಲ್ಲುವ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ನಾಯಕ ಧನ್ವೀರ್‌ಗೂ ಈ ಚಿತ್ರದ ಮೂಲಕ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುವ ವಿಶ್ವಾಸವಿದೆ. ಚಿತ್ರದ ಬಗ್ಗೆ ಮಾತನಾಡುವ ಧನ್ವೀರ್, ‘ತುಂಬಾ ಎಕ್ಸೆ„ಟ್ ಆಗಿದ್ದೇನೆ. ಮೊದಲ ಸಿನಿಮಾನಾ ಜನ ಹೇಗೆ ತಗೋತ್ತಾರೆ ಎಂಬ ಕುತೂಹಲ ಇದೆ. ಈಗಾಗಲೇ ಟೀಸರ್, ಟ್ರೇಲರ್ ಬಿಡುಗಡೆಯಾಗಿದೆ. ನೋಡಿದವರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಚಿತ್ರದ ಮೂಲಕ ಆ್ಯಕ್ಷನ್ ಹೀರೋ ಆಗುತ್ತಿದ್ದೇನೆ. ಅದಕ್ಕೆ ಕಾರಣ ಚಿತ್ರದ ಕಥೆ. ಕಥೆಯಲ್ಲಿ ರೌಡಿಸಂ ಅಂಶ ಅಡವಾಗಿರುವುದರಿಂದ ಅದಕ್ಕೆ ತಕ್ಕಂತಹ ಪಾತ್ರ ಸಿಕ್ಕಿದೆ. ಹೊಸ ತರಹದ ಕಥೆ ಪಾತ್ರ ಈ ಚಿತ್ರದಲ್ಲಿದೆ’ ಎನ್ನುವುದು ಧನ್ವೀರ್ ಮಾತು. ಚಿತ್ರವನ್ನು ಭಾರತಿ ಫಿಲಂಸ್‌ನಡಿ ತಿಮ್ಮೇಗೌಡ ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ಅದಿತಿ ನಾಯಕಿ. ಚಿತ್ರಕ್ಕೆ ರವಿ ಬಸ್ರೂರು ಸಂಗೀತ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.