ಸ್ಯಾಂಡಲ್ ವುಡ್ ನಲ್ಲಿ ಈ ವಾರ ತೆರೆಗೆ 4 ಚಿತ್ರಗಳು
Team Udayavani, Jun 24, 2022, 9:14 AM IST
ವಿಭಿನ್ನ ಕಥೆಯ ನಿರ್ಗಮನ
ಈಗಾಗಲೇ ತನ್ನ ಟೈಟಲ್, ಟ್ರೇಲರ್ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಕುತೂಹಲ ಮೂಡಿಸಿರುವ ಸೈಂಟಿಫಿಕ್ ಫಿಕ್ಷನ್ ಥ್ರಿಲ್ಲರ್ ಶೈಲಿಯ “ತುರ್ತು ನಿರ್ಗಮನ’ ಈ ವಾರ ತೆರೆಗೆ ಬರುತ್ತಿದೆ. ಸುನೀಲ್ ರಾವ್ ನಾಯಕನಾಗಿ ಅಭಿನಯಿಸಿರುವ “ತುರ್ತು ನಿರ್ಗಮನ’ ಚಿತ್ರದಲ್ಲಿ ಸುಧಾರಾಣಿ, ರಾಜ್ ಬಿ ಶೆಟ್ಟಿ, ಅಚ್ಯುತ ಕುಮಾರ್, ಹಿತಾ ಚಂದ್ರಶೇಖರ್, ಸಂಯುಕ್ತಾ ಹೆಗ್ಡೆ, ಅಮೃತಾ ರಾಮಮೂರ್ತಿ, ಅರುಣಾ ಬಾಲರಾಜ್, ನಾಗೇಂದ್ರ ಶಾ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
“ಸದಾ ಸೋಂಬೇರಿಯಾಗಿರುವ, ಉಡಾಫೆಯಾಗಿರುವ, ತಾನೇ ತುಂಬ ಶ್ರೇಷ್ಟ ಎಂಬ ಭ್ರಮೆಯಲ್ಲಿರುವಂಥ ಹುಡುಗನೊಬ್ಬನಿಗೆ ಇದ್ದಕ್ಕಿದ್ದಂತೆ ಲೈಫ್ನ ಎಂಡ್ ಸ್ಟೇಜ್ ಬಂದಾಗ ಹೇಗೆ ರಿಯಾಕ್ಟ್ ಮಾಡುತ್ತಾನೆ ಅನ್ನೋದು ಸಿನಿಮಾದ ಕಥೆಯ ಒಂದು ಎಳೆ. ಹುಟ್ಟು-ಸಾವು ಎರಡರ ನಡುವಿನ ಲೈಫ್ನಲ್ಲಿ ಎಮರ್ಜೆನ್ಸಿ ಎಕ್ಸಿಟ್ ಹೇಗಿರುತ್ತದೆ ಅನ್ನೋದನ್ನ ಸಸ್ಪೆನ್ಸ್-ಥ್ರಿಲ್ಲಿಂಗ್ ಆಗಿ ಸ್ಕ್ರೀನ್ ಮೇಲೆ ಹೇಳಿದ್ದೇವೆ. ಕನ್ನಡದಲ್ಲಿ ಇದೊಂದು ಅಪರೂಪದ ಟೈಮ್‌ಲೂಪ್ ಶೈಲಿಯ ಸಿನಿಮಾ’ ಎನ್ನುತ್ತದೆ ಚಿತ್ರತಂಡ.
“ಕುಮಾರ್ ಆ್ಯಂಡ್ ಕುಮಾರ್ ಫಿಲಂಸ್’ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ “ತುರ್ತು ನಿರ್ಗಮನ’ ಚಿತ್ರಕ್ಕೆ ಹೇಮಂತ್ ಕುಮಾರ್ ನಿರ್ದೇಶನವಿದೆ. ಚಿತ್ರಕ್ಕೆ ಪ್ರಯಾಗ್ ಮುಕುಂದನ್ ಛಾಯಾಗ್ರಹಣ, ಬಿ. ಅಜಿತ್ ಕುಮಾರ್ ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ದಾಸ್ ಮೋಡ್ ಸಂಗೀತ ಸಂಯೋಜಿಸಿದ್ದಾರೆ.
ಕಿರಣ್ ರಾಜ್ ‘ಬಡ್ಡೀಸ್’ ಕನಸು
ಕಿರಣ್ ರಾಜ್ ನಾಯಕರಾಗಿರುವ “ಬಡ್ಡೀಸ್’ ಚಿತ್ರ ಇಂದು ತೆರೆಕಾಣುತ್ತಿದೆ. ಈ ಚಿತ್ರವನ್ನು ಗುರುವೇಂದ್ರ ಶೆಟ್ಟಿ ನಿರ್ದೇಶಿಸಿದ್ದು, ಭಾರತಿ ಶೆಟ್ಟಿ ನಿರ್ಮಿಸಿದ್ದಾರೆ. “ಈ ಹಿಂದೆ ಸಾಕಷ್ಟು ಧಾರಾವಾಹಿಗಳಲ್ಲಿ ಅಭಿನಯಿಸಿದ್ದರೂ, ನನಗೆ ಸಾಕಷ್ಟು ಹೆಸರು ತಂದುಕೊಟ್ಟದ್ದು “ಕನ್ನಡತಿ’ ಧಾರಾವಾಹಿ ಪಾತ್ರ. ಆನಂತರ ಒಳ್ಳೆಯ ಸಿನಿಮಾದಲ್ಲಿ ನಟಿಸಬೇಕೆಂಬ ಆಸೆಯಿದ್ದ ನನಗೆ ಗುರುತೇಜ್ ಶೆಟ್ಟಿ ಅವರು ಹೇಳಿದ್ದ ಕಥೆ ಹಿಡಿಸಿತು. ಹಿಂದೆ “ಮಾರ್ಚ್ 22′ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ಅಭಿನಯಿಸಿ ದ್ದೇನೆ. ಆದರೆ ನಾಯಕನಾಗಿ ಇದು ಮೊದಲ ಚಿತ್ರ. ಸ್ನೇಹದ ಮಹತ್ವ ಸಾರುವ ಈ ಚಿತ್ರದಲ್ಲಿ ಮನೋರಂಜನೆಗೆ ಬೇಕಾದ ಎಲ್ಲಾ ಅಂಶಗಳು ಇದೆ’ ಎನ್ನುವುದು ನಾಯಕ ಕಿರಣ್ ರಾಜ್ ಮಾತು. ನಾಯಕಿ ಸಿರಿ ಪ್ರಹ್ಲಾದ್, ನಟ ಗೋಪಾಲ್ ದೇಶಪಾಂಡೆ ಸೇರಿದಂತೆ ಅನೇಕರು ನಟಿಸಿದ್ದಾರೆ.
‘ತ್ರಿವಿಕ್ರಮ’ನ ಮೂಲಕ ವಿಕ್ಕಿ ಎಂಟಿ
ಕ್ರೇಜಿಸ್ಟಾರ್ ರವಿಚಂದ್ರನ್ ದ್ವಿತೀಯ ಪುತ್ರ ವಿಕ್ರಂ ಇಂದು ಹೀರೋ ಆಗಿ ಎಂಟ್ರಿಕೊಡುತ್ತಿದ್ದಾರೆ. ಅವರ ನಟನೆಯ ಚೊಚ್ಚಲ ಚಿತ್ರ “ತ್ರಿವಿಕ್ರಮ’ ಇಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡು, ಟೀಸರ್‌ಗಳು ದೊಡ್ಡ ಮಟ್ಟದಲ್ಲಿ ಹಿಟ್ ಆಗುವ ಮೂಲಕ ಚಿತ್ರತಂಡ ಖುಷಿಯಾಗಿದೆ. ಪಕ್ಕಾ ಯೂತ್‌ಫುಲ್ ಕಥೆಯನ್ನು ಹೊಂದಿರುವ “ತ್ರಿವಿಕ್ರಮ’ ಚಿತ್ರವನ್ನು ಪ್ರೇಕ್ಷಕರು ಇಷ್ಟಪಡುತ್ತಾರೆಂಬ ವಿಶ್ವಾಸ ಚಿತ್ರತಂಡಕ್ಕಿದೆ
ಈ ಹಿಂದೆ “ರೋಸ್’, “ಮಾಸ್ ಲೀಡರ್’ ಸಿನಿಮಾಗಳನ್ನು ನಿರ್ದೇಶಿಸಿದ್ದ ಸಹನಾ ಮೂರ್ತಿ “ತ್ರಿವಿಕ್ರಮ’ನಿಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. “ಸೋಮಣ್ಣ ಟಾಕೀಸ್’ ಬ್ಯಾನರ್‌ನಲ್ಲಿ ರಾಮ್ಕೋ ಸೋಮಣ್ಣ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. ತುಳಸಿ ಶಿವಮಣಿ, ಸುಚೇಂದ್ರ ಪ್ರಸಾದ್, ಸಾಧುಕೋಕಿಲ, ರೋಹಿತ್ ರಾಯ್, ಜಯಪ್ರಕಾಶ್, ಶಿವಮಣಿ, ಆದಿ ಲೋಕೇಶ್, ನಾಗೇಂದ್ರ ಶಾ, ಚಿಕ್ಕಣ್ಣ ಮೊದಲಾದ ವರು “ತ್ರಿವಿಕ್ರಮ’ನ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
“ಹರಿಕಥೆಯಲ್ಲ, ಗಿರಿಕಥೆ: ಇದಲ್ಲದೇ ರಿಷಭ್ ಶೆಟ್ಟಿ ನಟನೆಯ “ಹರಿಕಥೆಯಲ್ಲ, ಗಿರಿಕಥೆ’ ಚಿತ್ರ ಗುರುವಾರ ಬಿಡುಗಡೆಯಾಗಿದೆ. ಈ ಚಿತ್ರವನ್ನು ಸಂದೇಶ್ ಪ್ರೊಡಕ್ಷನ್ಸ್‌ನಡಿ ಸಂದೇಶ್ ನಿರ್ಮಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.