ಗಾಂಧಿ ಮತ್ತು ನೋಟು ಟ್ರೇಲರ್ ಬಂತು
ಚಿಕ್ಕ ಹುಡುಗಿ ಬಾಯಲ್ಲಿ ದೊಡ್ಡ ಸಂದೇಶ
Team Udayavani, Sep 11, 2021, 3:30 PM IST
“ಗಾಂಧಿ ಮತ್ತು ನೋಟು’ ಚಿತ್ರದ ಟ್ರೇಲರ್ ಅನ್ನು ನಟ ಶಿವರಾಜ ಕುಮಾರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಸಾಹಿತಿ ವಿ.ನಾಗೇಂದ್ರಪ್ರಸಾದ್ ಪುತ್ರಿ ದಿವಿಜಾ ನಾಗೇಂದ್ರ ಪ್ರಸಾದ್ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.ಲೋಕೇಶ್ ಡಿ.ಕೆ,
ಮುರುಧ್ಯ, ಪ್ರಜ್ಞಾ ಬ್ರಹ್ಮಾವರ್, ಕೆ.ಬಿ.ರವಿ, ರಂಗಸ್ವಾಮಿ, ನವೀನ್, ವಿಶಾಲ್ ಮುಂತಾದವರು ತಾರಾ ಬಳಗದಲ್ಲಿದ್ದಾರೆ.
ಭಾವನಕಂಬೈನ್ಸ್ ಲಾಂಛನದಲ್ಲಿ ಸುಧಾರಾಣಿ ಹೆಚ್.ಆರ್, ವೀಣಾ ಪದ್ಮನಾಭ, ಮಂಜುನಾಥ್ ಬಿ.ಎನ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಈ ಹಿಂದೆ ಪ್ರಿಯಾಂಕ ಉಪೇಂದ್ರ ಅಭಿನಯದ ಸೆಕೆಂಡ್ ಆಫ್ ಚಿತ್ರ ನಿರ್ದೇಶಿಸಿದ್ದ ಯೋಗಿ ದೇವಗಂಗೆ ಈ ಚಿತ್ರದ ನಿರ್ದೇಶಕರು.ಕಥೆ, ಚಿತ್ರಕಥೆಕೂಡ ಯೋಗಿ ಅವರದೆ.
ಇದನ್ನೂ ಓದಿ:ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಯಿ ಸಿಎಂ ಸ್ಥಾನಕ್ಕೆ ದಿಢೀರ್ ರಾಜೀನಾಮೆ
ಗಾಂಧಿ ತತ್ವಗಳನ್ನು ಹಾಗೂ ನೋಟನ್ನು ಈಗಿನ ಜನ ಯಾವ ರೀತಿ ಬಳಸಿಕೊಳ್ಳುತ್ತಿದ್ದಾರೆ ಎಂಬ ವಿಷಯವನ್ನು ಹಳ್ಳಿ ಹುಡುಗಿ ಪಾತ್ರದ ಮೂಲಕ ಹೇಳ ಹೊರಟಿದ್ದಾರೆ ನಿರ್ದೇಶಕರು. ಚಿಕ್ಕ ವಯಸ್ಸಿನ ಈ ಹುಡುಗಿ ಹೇಳುವ ಮಾತು ಎಲ್ಲಾ ವರ್ಗದ ಜನರ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದೇ ಇದರ ಕಥಾಸಾರಾಂಶ. ಸಾಗರದ ತುಂಬ್ರಿ ಎಂಬ ಸ್ಥಳದಲ್ಲೇ ಹೆಚ್ಚಿನ ಚಿತ್ರೀಕರಣ ನಡೆದಿದೆ. ಪ್ರಸ್ತುತ ಚಿತ್ರ ಡಿಐನಲ್ಲಿದೆ. ಅಕ್ಟೋಬರ್ ವೇಳೆಗೆ ತೆರೆಗೆ ಬರುವ ಸಾಧ್ಯತೆಯಿದೆ.ವಿ.ನಾಗೇಂದ್ರಪ್ರಸಾದ್ ಅವರು ಬರೆದಿರುವ ಹಾಡುಗಳಿಗೆ ವಾಣಿ ಹರಿಕೃಷ್ಣ ಸಂಗೀತ ನೀಡಿದ್ದಾರೆ. ಚಿತ್ರಕ್ಕೆ ಅಚ್ಚು ಸುರೇಶ್ ಛಾಯಾಗ್ರಹಣ, ವಸಂತಕುಮಾರ್ ಸಂಕಲನ ಹಾಗೂ ವಿ.ಎಲ್ ಸತೀಶ್ ಅವರ ಸಹ ನಿರ್ದೇಶನವಿದ್ದು, ಚಿತ್ರಕ್ಕೆ ಗುರುಪ್ರಸಾದ್ ಚಂದ್ರಶೇಖರ್ ಸಂಭಾಷಣೆ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.