ಸಿನಿಮಾದ ಫೀಲ್‌ ಸದಾ ಕಾಡಬೇಕು: ರಾಜ್‌ ಶೆಟ್ಟಿ ಡ್ರೀಮ್‌ ಪ್ರಾಜೆಕ್ಟ್

ನಿಮ್ಮ ‘ಗಮನ’ಕ್ಕೆ… ಇಂದಿನಿಂದ ‘ಗರುಡ’ ಹಾರಾಟ

Team Udayavani, Nov 19, 2021, 9:58 AM IST

ಗರುಡ ಗಮನ ವೃಷಭ ವಾಹನ

“ಒಂದು ಮೊಟ್ಟೆಯ ಕಥೆ’ ಸಿನಿಮಾ ನಿರ್ದೇಶನ ಮಾಡಿದ್ದ ರಾಜ್‌ ಬಿ ಶೆಟ್ಟಿ ಅವರ ನಿರ್ದೇಶನದ ಎರಡನೇ ಚಿತ್ರ “ಗರುಡ ಗಮನ ವೃಷಭ ವಾಹನ’ ಇಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಪ್ರೀಮಿಯರ್‌ ಶೋನಲ್ಲಿ ಸಿನಿಮಾ ನೋಡಿದವರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಚಿತ್ರಕ್ಕೆ ರಕ್ಷಿತ್‌ ಶೆಟ್ಟಿಯವರ ಪರಂವಾ ಪಿಕ್ಚರ್ ಸಾಥ್‌ ನೀಡುತ್ತಿದೆ.

ತಮ್ಮ ಸಿನಿಮಾದ ಬಗ್ಗೆ ಮಾತನಾಡುವ ರಾಜ್‌ ಶೆಟ್ಟಿ, “ಸಾಮಾನ್ಯವಾಗಿ ಒಂದು ಸಿನಿಮಾ ಎಂದರೆ ಅನೇಕರಲ್ಲಿ ಒಂದು ಭಾವನೆ ಇದೆ. ಅದೇನೆಂದರೆ ಕೆಲವು ದೃಶ್ಯಗಳು ನಾವು ಅಂದುಕೊಂಡಂತೆಯೇ ಆಗುತ್ತದೆ ಎಂಬುದು. ಆ ತರಹದ ಒಂದು ನಿರ್ಧಾರಕ್ಕೆ ಬಂದು ಬಿಡುತ್ತೇವೆ. ನಾವು ಅದರಾಚೆ ಯೋಚನೆ ಮಾಡಿದ್ದೇವೆ. ಅದೇ ಕಾರಣದಿಂದ ನಿಮಗೆ ಟ್ರೇಲರ್‌ನಲ್ಲಿ ವಿಭಿನ್ನವಾದ ಹಿನ್ನೆಲೆ ಸಂಗೀತವಿದೆ.  ಒಂದಷ್ಟು ವರ್ಷಗಳ ನಂತರ ಸಿನಿಮಾ ಮರೆತು ಹೋಗಬಹುದು, ಅದರ ಕಥೆ, ಸಂಗೀತವೂ ನೆನಪಿಗೆ ಬಾರದೇ ಇರಬಹುದು. ಆದರೆ, ಆ ಸಿನಿಮಾ ಕೊಟ್ಟ ಅನುಭವ ಮಾತ್ರ ಸದಾ ನೆನಪಿನಲ್ಲಿರುತ್ತದೆ. ನಮ್ಮ ಸಿನಿಮಾವೂ ಈ ತರಹದ ಒಂದು ಫೀಲ್‌ ಕೊಡಬೇಕು ಎಂಬ ಆಶಯದೊಂದಿಗೆ ಕಟ್ಟಿಕೊಟ್ಟಿದ್ದೇವೆ. ಇಷ್ಟೇ ಸಾಕು ಎಂದು ಮಾಡಿಲ್ಲ, ನಮ್ಮ ಕೈಯಲ್ಲಿ ಏನೆಲ್ಲಾ ಹೊಸದು ಮಾಡಬಹುದೋ ಅದನ್ನು ಮಾಡಿದ್ದೇವೆ. ನನ್ನ ಪ್ರಕಾರ, ಸಿನಿಮಾದ ಅದರ ಆಶಯದಲ್ಲಿ ಗ್ಲೋಬಲ್‌ ಆಗಿರಬೇಕು, ಥೀಮ್‌ನಲ್ಲಿ ಲೋಕಲ್‌ ಆಗಿರಬೇಕು. ನಾವು ಮಾಡೋದು ಒಂದು ಗ್ಯಾಂಗ್‌ಸ್ಟಾರ್‌ ಸಿನಿಮಾ. ಅದನ್ನು ಮತ್ತೆ ಮತ್ತೆ ಮಾಡುವ ಉದ್ದೇಶವಿಲ್ಲ. ಒಮ್ಮೆ ಮಾಡುವ ಎಷ್ಟು ಚೆನ್ನಾಗಿ ಮಾಡಬಹುದೋ, ಅಷ್ಟು ಚೆನ್ನಾಗಿ ಕಟ್ಟಿಕೊಡಲು ಪ್ರಯತ್ನ ಪಡಬೇಕು. ಅದನ್ನಿಲ್ಲಿ ಪಟ್ಟಿದ್ದೇವೆ. ಇದು ಫ್ರೆಂಡ್‌ಶಿಪ್‌ ಹಿನ್ನೆಲೆಯಲ್ಲಿ ಸಾಗುವ ಸಿನಿಮಾ. ಅದಕ್ಕೆ ಗ್ಯಾಂಗ್‌ಸ್ಟಾರ್‌ ಸೆಟಪ್‌ ಇದೆ’ ಎಂದು ತಮ್ಮ ಸಿನಿಮಾ ಬಗ್ಗೆ ಹೇಳುತ್ತಾರೆ ರಾಜ್‌ ಶೆಟ್ಟಿ.

ಚಿತ್ರದ ಟೈಟಲ್‌ನ ವಿಶೇಷತೆ ಏನು, ಚಿತ್ರದ ಕಥೆ ಏನು ಎಂದು ನೀವು ಕೇಳಬಹುದು. ಅದಕ್ಕೆ ಉತ್ತರ ಗ್ಯಾಂಗ್‌ಸ್ಟಾರ್‌ ಕಥೆ. ತಮ್ಮ ಹೊಸ ಚಿತ್ರದ ಬಗ್ಗೆ ಮಾತನಾಡುವ ರಾಜ್‌ ಶೆಟ್ಟಿ, “ಇದುಮಂಗಳೂರು ಹಿನ್ನೆಲೆಯಲ್ಲಿ ನಡೆಯುವ ಗ್ಯಾಂಗ್‌ ಸ್ಟಾರ್‌ ಕಥೆ. ಆರಂಭದಲ್ಲಿ ನಾವು “ಹರಿಹರ’ ಎಂಬ ಟೈಟಲ್‌ ಅಂದುಕೊಂಡಿದ್ದೆವು. ಅದಕ್ಕೆ ಕಾರಣ ವಿಷ್ಣು ಹಾಗೂ ಶಿವ ಅವರ ಗುಣ. ಅವರ ಗುಣವನ್ನು ಇಬ್ಬರು ಹೀರೋಗಳಿಗೆ ಅನ್ವಯಿಸಿದರೆ ಹೇಗಿರುತ್ತದೆ ಎಂದುಕೊಂಡು ಆ ಟೈಟಲ್‌ ಇಟ್ಟೆವು. ಆದರೆ, ಸಿನಿಮಾ ಮಾಡುತ್ತಾ, ಟೈಟಲ್‌ ಸಿಂಪಲ್‌ ಅನಿಸಿತು. ಹಾಗಾಗಿ “ಗರುಡ ಗಮನ ವೃಷಭ ವಾಹನ’ ಇಟ್ಟೆವು. ಇದು ಎರಡು ಪಾತ್ರಗಳನ್ನು ಸೂಚಿಸುತ್ತದೆ’ ಎನ್ನುವುದು ರಾಜ್‌ ಶೆಟ್ಟಿ ಮಾತು.

ಹೊರದೇಶದಲ್ಲೂ ಪ್ರದರ್ಶನ: ಅಮೆರಿಕಾದ ಪ್ರಮುಖ ನಗರಗಳಲ್ಲಿ “ಗರುಡ ಗಮನ ವೃಷಭ ವಾಹನ’ ಪ್ರೀಮಿಯರ್‌ ಶೋ ನ.18ರಂದು ನಡೆದಿದೆ. ಯುಎಸ್‌ಎ ನಲ್ಲಿ ಆರಿಜೋನಾ, ಕ್ಯಾಲಿಪೋರ್ನಿಯಾ, ಪ್ಲೋರಿಡಾ, ಜಾರ್ಜಿಯಾ, ನಾರ್ಥ್ ಕ್ಯಾಲಿಪೋರ್ನಿಯಾ, ನ್ಯೂಜೆರ್ಸಿ, ನಾರ್ಥ್ ಕ್ಯಾರೋಲಿನಾ, ಟೆಕ್ಸಾಸ್‌, ವರ್ಜಿನಿಯಾ ಸೇರಿದಂತೆ ಪ್ರಮುಖ ಸ್ಟೇಟ್‌ಗಳ ಸುಮಾರು 30ಕ್ಕೂ ಹೆಚ್ಚು ಮೆಟ್ರೋ ಏರಿಯಾಗಳಲ್ಲಿ “ಗರುಡ ಗಮನ ವೃಷಭ ವಾಹನ’ ಅದ್ಧೂರಿಯಾಗಿ ಪ್ರೀಮಿಯರ್‌ ಆಗಿದೆ. ಕರ್ನಾಟಕದಲ್ಲಿ ಮಾತ್ರವಲ್ಲದೆ ಹೊರ ರಾಜ್ಯಗಳು ಮತ್ತು ಹೊರದೇಶಗಳಲ್ಲೂ ಭರ್ಜರಿಯಾಗಿ “ಗರುಡ ಗಮನ ವೃಷಭ ವಾಹನ’ ಚಿತ್ರದ ಪ್ರಚಾರ ನಡೆಸುತ್ತಿರುವ ಚಿತ್ರತಂಡ, ಹೊರನಾಡು ಮತ್ತು ಹೊರದೇಶದ ಕನ್ನಡಿಗ ಸಿನಿಪ್ರಿಯರನ್ನು ಸೆಳೆಯುವ ಕೆಲಸದಲ್ಲಿ ನಿರತವಾಗಿದೆ. ಈಗಾಗಲೇ ಹೊರನಾಡು ಮತ್ತು ವಿದೇಶದಲ್ಲಿರುವ ಕನ್ನಡಿಗ ಪ್ರೇಕ್ಷಕರು ಮತ್ತು ವಿದೇಶಿ ಪ್ರೇಕ್ಷಕರು ಕೂಡ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.