ಬಿಡುಗಡೆಯತ್ತ ಗರುಡಾಕ್ಷ
Team Udayavani, Mar 20, 2020, 10:42 AM IST
ಸುಮಾರು ಎರಡು ವರ್ಷಗಳ ಹಿಂದೆ ಸೆಟ್ಟೇರಿದ್ದ, ಬಹುತೇಕ ಹೊಸ ಪ್ರತಿಭೆಗಳ “ಗರುಡಾಕ್ಷ’ ಚಿತ್ರ ಅಂತೂ ತನ್ನೆಲ್ಲ ಕೆಲಸಗಳನ್ನು ಪೂರ್ಣಗೊಳಿಸಿ ತೆರೆಗೆ ಬರುವ ಹಂತಕ್ಕೆ ಬಂದಿದೆ. ಇತ್ತೀಚೆಗೆ ಫಸ್ಟ್‌ಕಾಪಿಯೊಂದಿಗೆ ಹೊರಬಂದಿರುವ “ಗರುಡಾಕ್ಷ’ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಚಿತ್ರಕ್ಕೆ “ಯು/ಎ’ ಸರ್ಟಿಫಿಕೆಟ್ ಕೊಟ್ಟು ಬಿಡುಗಡೆಗೆ ಅಸ್ತು ಎಂದಿದೆ. ಈ ಹಿಂದೆ “ಉಡುಂಬ’ ಚಿತ್ರದಲ್ಲಿ ದ್ವಿತೀಯ ನಾಯಕನಾಗಿ ಚಿತ್ರರಂಗಕ್ಕೆ ಪರಿಚಯವಾಗಿದ್ದ ಯದು ಈ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ. ನಾಯಕಿಯಾಗಿ ನವನಟಿ ರಕ್ಷಾ ಕಾಣಿಸಿಕೊಂಡಿದ್ದಾರೆ. ಉಳಿದಂತೆ ವಸಂತ ಕುಮಾರ್, ಕುಮುದಾ, ರಫೀಕ್, ಶ್ರೀಧರ್ ವೈಷ್ಣವ್, ಸತ್ಯಾರ್ಜುನ, ವಿಶ್ರುತ್ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
“ಕ್ಷಿರಪಥ ಮೂವೀಸ್’ ಬ್ಯಾನರ್ ಅಡಿಯಲ್ಲಿ ನರಸಿಂಹ ಮೂರ್ತಿ. ಎಸ್ ಬಂಡವಾಳ ಹೂಡಿ ನಿರ್ಮಿಸಿರುವ “ಗರುಡಾಕ್ಷ’ ಚಿತ್ರಕ್ಕೆ ಶ್ರೀಧರ್ ವೈಷ್ಣವ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. “ತನ್ನ ತಂದೆಯ ಸಾವು ಆಕಸ್ಮಿಕವಲ್ಲ ಅದು ಕೊಲೆ ಎಂದು ತಿಳಿದ ಮಗ, ಆ ರಹಸ್ಯವನ್ನು ಹೇಗೆ ಭೇದಿಸುತ್ತಾನೆ ಅನ್ನೋದು ಚಿತ್ರದ ಕಥೆಯ ಒಂದು ಎಳೆ. “ಗರುಡಾಕ್ಷ’ ಚಿತ್ರದಲ್ಲಿ ಪ್ರೀತಿ, ವಿಶ್ವಾಸ, ನಂಬಿಕೆ, ಬಾಂಧವ್ಯ, ಜೊತೆಗೆ ಹಣ, ಸ್ವಾರ್ಥ, ದುರಾಸೆ ಹೀಗೆ ಹಲವು ಅಂಶಗಳನ್ನು ಹೇಳಲಾಗಿದೆ. ಸಂಬಂಧಗಳ ಮೌಲ್ಯದ ಜೊತೆಗೆ ಒಂದು ಸಂದೇಶ ಕೂಡ ಇದೆ’ ಎನ್ನುತ್ತದೆ ಚಿತ್ರತಂಡ. ಸೆಂಟಿಮೆಂಟ್ ಕಂ ಆ್ಯಕ್ಷನ್-ಕ್ರೈಂ ಕಥಾ ಹಂದರ ಈ ಚಿತ್ರವನ್ನು ಸುಮಾರು 35 ದಿನಗಳ ಕಾಲ ಬೆಂಗಳೂರು, ಚಿಕ್ಕಮಗಳೂರು ಸುತ್ತಮುತ್ತ ಚಿತ್ರೀಕರಿಸಲಾಗಿದೆ. ಚಿತ್ರದ ಹಾಡುಗಳಿಗೆ ಶ್ರೀವತ್ಸ ಸಂಗೀತ ಸಂಯೋಜನೆಯಿದ್ದು, ಅನುರಾಧ ಭಟ್, ಸಂತೋಷ್ ವೆಂಕಿ, ಅಪೂರ್ವ ಶ್ರೀಧರ್, ನೇಹಾ ವೇಣುಗೋಪಾಲ್ ಮೊದಲಾದವರು ಹಾಡಿಗೆ ಧ್ವನಿಯಾಗಿದ್ದಾರೆ. ಅರಸು ಅಂತಾರೆ, ರಾಜು ಭಾಯಿ ಚಿತ್ರದ ಗೀತೆಗಳಿಗೆ ಸಾಹಿತ್ಯ ರಚಿಸಿದ್ದಾರೆ. ಚಿತ್ರಕ್ಕೆ ಎನ್.ಟಿ. ಎ ವೀರೇಶ್ ಛಾಯಾಗ್ರಹಣ, ಎನ್.ಎಂ ವಿಶ್ವ ಸಂಕಲನ ಕಾರ್ಯವಿದೆ. ಸದ್ಯ ಸೆನ್ಸಾರ್‌ನಿಂದ ಗ್ರೀನ್ ಸಿಗ್ನಲ್ ಪಡೆದುಕೊಂಡಿರುವ “ಗರುಡಾಕ್ಷ’ ಏಪ್ರಿಲ್ ಕೊನೆ ಅಥವಾ ಮೇ ವೇಳೆಗೆ ತೆರೆಗೆ ಬರುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
Formula E race; ಫಾರ್ಮುಲಾ-ಇ ರೇಸ್ ಪ್ರಕರಣ: ಕೆಟಿಆರ್ ಮೇಲೆ ಎಸಿಬಿ ಎಫ್ಐಆರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.