ಬರ್ತ್‌ಡೇ ಸಂಭ್ರಮದಲ್ಲಿ ಗಣೇಶ್ : ಟೀಸರ್, ಮೋಶನ್ ಪೋಸ್ಟರ್ ಗಿಫ್ಟ್
Team Udayavani, Jul 2, 2021, 7:56 AM IST
ಇಂದು ನಟ ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬ. ಪ್ರತಿವರ್ಷ ಗಣೇಶ್ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳು, ಸ್ನೇಹಿತರು ಮತ್ತುಕುಟುಂಬ ವರ್ಗದೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿದ್ದರು. ಆದರೆ ಕಳೆದ ವರ್ಷದಿಂದ ಕೊರೊನಾ ಮಹಾಮಾರಿ ಗೋಲ್ಡನ್ ಸ್ಟಾರ್ ಅದ್ಧೂರಿ ಬರ್ತ್‌ಡೇಗೆ ಬ್ರೇಕ್ ಹಾಕಿದೆ.ಕಳೆದ ವರ್ಷ ಕೊರೊನಾ ಆತಂಕದಿಂದ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಗಣೇಶ್, ಈ ಬಾರಿಯೂ ಹಾಗೇ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.
ಕೋವಿಡ್‌ನಿಂದಾಗಿ ಕಳೆದ ಒಂದು ವರ್ಷದಿಂದ ಎಲ್ಲ ಸ್ಟಾರ್ ನಟ-ನಟಿಯರ ಹುಟ್ಟುಹಬ್ಬ ಸೋಶಿಯಲ್ ಮೀಡಿಯಾ ವೇದಿಕೆಯಲ್ಲೇ ನಡೆಯುತ್ತಿದ್ದು, ಅಂತೆಯೇ ಗಣೇಶ್ ಬರ್ತ್‌ಡೇ ಕೂಡ ಸೋಶಿಯಲ್ ಮೀಡಿಯಾದಲ್ಲೇ ನಡೆಯುತ್ತಿದೆ.
ಹೌದು, ಈಗಷ್ಟೇ ಕೊರೊನಾ ಎರಡನೇ ಅಲೆಯಿಂದ ಸ್ವಲ್ಪ ಮಟ್ಟಿಗೆ ಎಲ್ಲರೂ ನಿಟ್ಟುಸಿರು ಬಿಡುತ್ತಿದ್ದು, ಈ ಸಂದರ್ಭದಲ್ಲಿ ತಮ್ಮ ಹುಟ್ಟುಹಬ್ಬ ಆಚರಿಸೋದು ಬೇಡ ಎಂದು ನಟ ಗಣೇಶ್ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಗಣೇಶ್, “ಪ್ರತಿ ವರ್ಷವೂ ನನ್ನ ಜನ್ಮದಿನವನ್ನು ಹಬ್ಬದಂತೆ ಆಚರಿಸಿ ಆಶೀರ್ವದಿಸುತ್ತಾ ಬಂದಿರುವಿರಿ. ಆದರೆ ಈ ವರ್ಷ ಕೊರೊನಾ ಮಹಾಮಾರಿಯ ಆರ್ಭಟಕ್ಕೆ ಸಿಕ್ಕು ನನ್ನ ಹಲವು ಸಿನಿಮಾ ಸಹೋದ್ಯೋಗಿಗಳು, ಆತ್ಮೀಯರು, ಗೆಳೆಯರು ಬಲಿಯಾದದ್ದು ನೋವು ತರಿಸಿದೆ. ಅದೆಷ್ಟೋ ಜನರ ಜೀವನಗಳು ನಲುಗಿ ಹೋಗಿವೆ. ಇಷ್ಟೆಲ್ಲ ನೋವುಗಳ ನಡುವೆ ಸಂಭ್ರಮಕ್ಕಿದು ಸರಿಹೊಂದುವ ಸಮಯವಲ್ಲ ಎಂದೆನಿಸಿ, ಈ ವರ್ಷದ ಜನ್ಮದಿನವನ್ನು ಆಚರಿಸಿಕೊಳ್ಳದಿರಲು ಇಚ್ಚಿಸಿರುತ್ತೇನೆ. ಅಲ್ಲದೇ, ಜನ್ಮದಿನದಂದು ನಾನು ಹೊರಾಂಗಣ ಚಿತ್ರೀಕರಣದಲಿ ತೊಡಗಿರುತ್ತೇನೆ. ಪ್ರತಿ ವರ್ಷವೂ ಪ್ರೀತಿಯಿಂದ ಹುಟ್ಟುಹಬ್ಬ ಆಚರಣೆಗೆ ನೀವುಗಳು ಪ್ರೀತಿಯಿಂದ ತರುವ ಕೇಕ್, ಹಾರ, ಉಡುಗೊರೆ ಮುಂತಾದವುಗಳಿಗಾಗಿ ಈ ವರ್ಷ ಹಣ ವ್ಯಯಿಸದೇ, ಅದೇ ಖರ್ಚಿನ ಮೊತ್ತವನ್ನು ಕೊರೊನಾ ಸಂಕಷ್ಟದಲ್ಲಿರುವ ಮತ್ತಷ್ಟು ಜೀವಗಳಿಗೆ ಸಹಾಯ ಮಾಡಿ ಎಂದು ಕೇಳಿಕೊಳ್ಳುತ್ತೇನೆ… ಅದೇ ನನಗೆ ಶ್ರೀರಕ್ಷೆ’ ಎಂದಿದ್ದಾರೆ.
ಇನ್ನು, ಗಣೇಶ್ ಅವರ ಹುಟ್ಟುಹಬ್ಬಕ್ಕೆ ಯೋಗರಾಜ್ ಭಟ್ ನಿರ್ದೇಶನ “ಗಾಳಿಪಟ-2′ ಚಿತ್ರತಂಡ ಮೋಶನ್ ಪೋಸ್ಟರ್ ಬಿಡುಗಡೆ ಮಾಡಿದರೆ, “ತ್ರಿಬಲ್ ರೈಡಿಂಗ್’ ಚಿತ್ರತಂಡ ಟೀಸರ್ ಬಿಡುಗಡೆ ಮಾಡಲು ಪ್ಲಾನ್ ಹಾಕಿಕೊಂಡಿದೆ. ಸದ್ಯ ಗಣೇಶ್ “ಸಖತ್’ ಶೂಟಿಂಗ್‌ನಲ್ಲಿ ಬಿಝಿ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.