ಹಾಡಲ್ಲಿ ಗೋವಿಂದನ ಗುಣಗಾನ: ಸುಮಂತ್‌ ನಟನೆಯ ಹೊಸ ಚಿತ್ರ

Team Udayavani, Mar 26, 2021, 4:33 PM IST

ಹಾಡಲ್ಲಿ ಗೋವಿಂದನ ಗುಣಗಾನ: ಸುಮಂತ್‌ ನಟನೆಯ ಹೊಸ ಚಿತ್ರ

ಕಾಮಿಡಿ ಕಂ ಸಸ್ಪೆನ್ಸ್‌-ಥ್ರಿಲ್ಲರ್‌ ಕಥಾಹಂದರ ಹೊಂದಿರುವ “ಗೋವಿಂದ ಗೋವಿಂದ’ ಚಿತ್ರ ತೆರೆಗೆ ಬರಲು ತಯಾರಾಗಿದೆ ಸದ್ಯ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇತ್ತೀಚೆಗೆ ಚಿತ್ರದ ಆಡಿಯೋವನ್ನು ಬಿಡುಗಡೆ ಮಾಡಿದೆ. ಶಾಸಕ ಕೆ.ಎನ್‌ ರಾಜಣ್ಣ ಮತ್ತು ನಿರ್ದೇಶಕ ಲಿಂಗದೇವರು ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಹಾಜರಿದ್ದು, ಚಿತ್ರದ ಹಾಡುಗಳ ಅನಾವರಣ ಮಾಡಿದರು.

ಇದೇ ವೇಳೆ ಚಿತ್ರದ ಬಗ್ಗೆ ಮಾತನಾಡಿದ ನಿರ್ಮಾಪಕ ರವಿ ಆರ್‌. ಗರಣಿ, “ಈ ಸಿನಿಮಾ ಶುರುವಾಗಿದ್ದು ಒಂದು ಆಕಸ್ಮಿಕ. ಮೊದಲು ವಿಜಯ್‌ ಸೇತುಪತಿ ಸಿನಿಮಾ ಮಾಡುವ ಪ್ಲಾನ್‌ ಇತ್ತು. ಕೊನೆಗೆ ಕೊರೊನಾದಿಂದ ಎಲ್ಲವೂ ಬದಲಾಯಿತು. ಆಗ ಶುರುವಾಗಿದ್ದೇ ಈ ಸಿನಿಮಾ, ತುಂಬ ಅಚ್ಚುಕಟ್ಟಾಗಿ ಚೆನ್ನಾಗಿ ಮೂಡಿಬಂದಿದೆ’ ಎಂದರು.

ಚಿತ್ರದ ಬಗ್ಗೆ ಮಾತನಾಡಿ ನಿರ್ದೇಶಕ ತಿಲಕ್‌, “ಇದೊಂದು ಪಕ್ಕಾ ಕೌಟುಂಬಿಕ ಕಥಾ ಹಂದರ ಹೊಂದಿರುವ ಸಿನಿಮಾ. ಕಾಮಿಡಿ, ಸಸ್ಪೆನ್ಸ್‌-ಥ್ರಿಲ್ಲರ್‌ ಶೈಲಿಯಲ್ಲಿ ಸಿನಿಮಾ ಮೂಡಿಬಂದಿದೆ. ಸಿನಿಮಾದಲ್ಲಿ ಒಟ್ಟು ಆರು ಹಾಡುಗಳಿವೆ. ಪ್ರೇಕ್ಷಕರಿಗೆ ಸಿನಿಮಾ ಸಂಪೂರ್ಣ ಮನರಂಜನೆ ನೀಡಲಿದೆ’ ಎಂದರು.

ನಾಯಕ ನಟರಾದ ಸುಮಂತ್‌ ಶೈಲೇಂದ್ರ, ರೂಪೇಶ್‌ ಶೆಟ್ಟಿ, ನಾಯಕಿ ಕವಿತಾ ಗೌಡ, ಸಂಗೀತ ನಿರ್ದೇಶಕ ಹಿತನ್‌ ಹಾಸನ್‌ ಚಿತ್ರದ ಬಗ್ಗೆ ತಮ್ಮ ಅನುಭವ ಮತ್ತು ಅನಿಸಿಕೆ ಹಂಚಿಕೊಂಡರು. “ಗೋವಿಂದ ಗೋವಿಂದ’ ಚಿತ್ರದಲ್ಲಿ ಸುಮಂತ್‌ ಶೈಲೇಂದ್ರ ಹಾಗೂ ರೂಪೇಶ್‌ ಶೆಟ್ಟಿ ನಾಯಕ ನಟರಾಗಿ ಕಾಣಿಸಿಕೊಂಡಿದ್ದು, ಕವಿತಾ ಗೌಡ, ಭಾವನಾ ಮೆನನ್‌ ನಾಯಕಿಯರಾಗಿ ಅಭಿನಯಿಸಿದ್ದಾರೆ. ಉಳಿದಂತೆ ಪವನ್‌ ಕುಮಾರ್‌, ವಿಜಯ್‌ ಚೆಂಡೂರ್‌, ಅಚ್ಯುತ ಕುಮಾರ್‌, ವಿ. ಮನೋಹರ್‌, ಕೆ. ಮಂಜು, ಕಡ್ಡಿಪುಡಿ ಚಂದ್ರು, ಪದ್ಮಾ ವಾಸಂತಿ, ಶ್ರೀನಿವಾಸ ಪ್ರಭು, ಸುನೇತ್ರಾ ಪಂಡಿತ್‌, ಗೋವಿಂದೇ ಗೌಡ, ಯಮುನಾ ಶ್ರೀನಿಧಿ ಮುಂತಾದವರು “ಗೋವಿಂದ ಗೋವಿಂದ’ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಚಿತ್ರಕ್ಕೆ ಕೆ.ಎಸ್‌ ಚಂದ್ರಶೇಖರ್‌ ಛಾಯಾಗ್ರಹಣ, ರವಿಚಂದ್ರನ್‌ ಸಂಕಲನವಿದೆ. ಪ್ರದೀಪ್‌ ವರ್ಮಾ ಚಿತ್ರಕ್ಕೆ ಹಿನ್ನೆಲೆ ಸಂಗೀತ ನೀಡಿದ್ದಾರೆ. “ಶೈಲೇಂದ್ರ ಪ್ರೊಡಕ್ಷನ್ಸ್‌’, “ಎಲ್.ಜಿ. ಕ್ರಿಯೇಷನ್ಸ್‌’, “ರವಿ ಗರಣಿ ಪ್ರೊಡಕ್ಷನ್ಸ್‌’ ಸಹಯೋಗ ದೊಂದಿಗೆ ನಿರ್ಮಾಣವಾಗಿರುವ “ಗೋವಿಂದ ಗೋವಿಂದ’ ಚಿತ್ರಕ್ಕೆ ಶೈಲೇಂದ್ರ ಬಾಬು, ಕಿಶೋರ್‌ ಎಂ.ಕೆ ಮಧುಗಿರಿ ಹಾಗೂ ರವಿ ಆರ್‌. ಗರಣಿ ಈ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. ಅಂದಹಾಗೆ, “ಗೋವಿಂದ ಗೋವಿಂದ’ ಚಿತ್ರ ಇದೇ ಏ. 16ರಂದು ಬಿಡುಗಡೆ ಆಗಲಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.