ಗುಬ್ಬಿ ಮೇಲೆ ಕಾಮಿಡಿ ಅಸ್ತ್ರ

ಆಗಸ್ಟ್‌ 15 ರಿಂದ ಹಾರಾಟ

Team Udayavani, Aug 9, 2019, 5:13 AM IST

e-22

ನಿರ್ಮಾಪಕ ಟಿ.ಆರ್‌.ಚಂದ್ರಶೇಖರ್‌ ಸಿಕ್ಕಾಪಟ್ಟೆ ನಿರೀಕ್ಷೆಯೊಂದಿಗೆ ಆಗಸ್ಟ್‌ 15 ರತ್ತ ನೋಡುತ್ತಿದ್ದಾರೆ. ಅದಕ್ಕೆ ಕಾರಣ “ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’. ಹೀಗೊಂದು ಸಿನಿಮಾ ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈ ಚಿತ್ರದ ನಿರ್ಮಾಪಕರು ಚಂದ್ರಶೇಖರ್‌. ಈ ಹಿಂದೆ ತಮ್ಮ ಕ್ರಿಸ್ಟಲ್‌ ಪಾರ್ಕ್‌ ಬ್ಯಾನರ್‌ನಲ್ಲಿ “ಚಮಕ್‌’, “ಅಯೋಗ್ಯ’ ಹಾಗೂ “ಬೀರ್‌ಬಲ’ ಸಿನಿಮಾಗಳನ್ನು ನೀಡಿದ್ದ ಚಂದ್ರಶೇಖರ್‌ ಈಗ “ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’ ನೀಡಲು ರೆಡಿಯಾಗಿದ್ದಾರೆ. ಈ ಬಗ್ಗೆ ಮಾತನಾಡುವ ಅವರು, “ನನ್ನ ಬ್ಯಾನರ್‌ನಲ್ಲಿ ಇಲ್ಲಿವರೆಗೆ ಬಂದ ಸಿನಿಮಾಗಳು ಒಂದಕ್ಕಿಂತ ಒಂದು ಭಿನ್ನವಾಗಿತ್ತು. ಈಗ ಗುಬ್ಬಿ ಕೂಡಾ ಬೇರೆ ಜಾನರ್‌. ಔಟ್‌ ಅಂಡ್‌ ಔಟ್‌ ಕಾಮಿಡಿ ಸಿನಿಮಾವಾಗಿ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ ಎಂಬ ವಿಶ್ವಾಸವಿದೆ’ ಎಂದರು.

ಈ ಚಿತ್ರವನ್ನು ಸುಜಯ್‌ ಶಾಸ್ತ್ರಿ ನಿರ್ದೇಶಿಸಿದ್ದಾರೆ. ಈ ಹಿಂದೆ ಅನೇಕ ಸಿನಿಮಾಗಳಲ್ಲಿ ಕಾಮಿಡಿ ನಟನಾಗಿ ಕಾಣಿಸಿಕೊಂಡಿರುವ ಸುಜಯ್‌ ಅವರ ಮೊದಲ ನಿರ್ದೇಶನದ ಚಿತ್ರವಿದು. “ಚಿತ್ರ ನಿಮ್ಮನ್ನು ತುಂಬಾನೇ ನಗಿಸುತ್ತದೆ. ಸಣ್ಣ ಸಣ್ಣ ಅಂಶಗಳನ್ನಿಟ್ಟುಕೊಂಡು ಕಾಮಿಡಿ ಮಾಡಿದ್ದೇವೆ. ಸಾಫ್ಟ್ವೇರ್‌ ಯುವಕನಾಗಿ ರಾಜ್‌ ಬಿ.ಶೆಟ್ಟಿ ನಟಿಸಿದ್ದು, ನಾಲ್ವರು ಸ್ನೇಹಿತರ ಸ್ಟೋರಿ ಚಿತ್ರದಲ್ಲಿದೆ’ ಎನ್ನುವುದು ಸುಜಯ್‌ ಮಾತು. ಚಿತ್ರದಲ್ಲಿ ಪ್ರಮೋದ್‌ ಶೆಟ್ಟಿ ವಿಲನ್‌ ಆಗಿ ನಟಿಸಿದ್ದಾರೆ. ಹಾಗಂತ ಸೀರಿಯಸ್‌ ವಿಲನ್‌ ಅಲ್ಲ, ಕಾಮಿಡಿ ವಿಲನ್‌. ಅವರು ರಾಬಿನ್‌ ಹುಡ್‌ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರಂತೆ.

ಚಿತ್ರದ ಬಗ್ಗೆ ಮಾತನಾಡುವ ರಾಜ್‌ ಬಿ ಶೆಟ್ಟಿ, “ಈ ಚಿತ್ರದ ಉದ್ದೇಶ ಪ್ರೇಕ್ಷಕರನ್ನು ನಗಿಸೋದಷ್ಟೇ. ಆ ಕೆಲಸವನ್ನು ನಿರ್ದೇಶಕರು ಚೆನ್ನಾಗಿ ಮಾಡಿದ್ದಾರೆ. ಅವರಿಗೆ ಏನು ಬೇಕು ಎಂಬುದರ ಬಗ್ಗೆ ಕ್ಲಾರಿಟಿ ಇತ್ತು. ಚಿತ್ರದಲ್ಲಿ ನಾನು ಗುಬ್ಬಿಯಾದರೆ, ಪ್ರಮೋದ್‌ ಶೆಟ್ಟಿ ಕಡೆಯಿಂದ ಬ್ರಹ್ಮಾಸ್ತ್ರ ಬರುತ್ತದೆ’ ಎಂದರು. ಪ್ರಮೋದ್‌ ಶೆಟ್ಟಿ, ಕವಿತಾ ಗೌಡ ಸೇರಿದಂತೆ ಚಿತ್ರತಂಡದ ಸದಸ್ಯರು ಮಾತನಾಡಿದರು. ಚಿತ್ರ ಆಗಸ್ಟ್‌ 15 ರಂದು ಬಿಡುಗಡೆ­ಯಾಗುತ್ತಿದ್ದು, ಒಂದು ವಾರ ಬಿಟ್ಟು ವಿದೇಶದಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ ಟ್ರೇಲರ್‌ಗೆ ಮೆಚ್ಚುಗೆ ವ್ಯಕ್ತವಾಗಿರು­ವುದರಿಂದ ಚಿತ್ರತಂಡ ಖುಷಿ­ ಯಾಗಿದೆ.

ಟಾಪ್ ನ್ಯೂಸ್

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

6(1

Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

5

Kundapura: ಬಸ್‌ ತಂಗುದಾಣಗಳೇ ಮಾಯ; ಜನರು ಅಯೋಮಯ!

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.