ಸ್ಪಷ್ಟತೆ ಇಲ್ಲದೆ ಹುಡುಕಾಟ

Team Udayavani, Dec 20, 2019, 12:08 PM IST

cinema-tdy-5

ಒಂದು ಚಿತ್ರಕ್ಕೆ ಒಬ್ಬನೇ ವ್ಯಕ್ತಿ ನಾಯಕ, ನಿರ್ದೇಶಕ, ನಿರ್ಮಾಪಕ, ಸಂಗೀತ ನಿರ್ದೇಶಕನಾಗಿ ಹೀಗೆ ತೆರೆಹಿಂದೆ ಹಲವು ರೋಲ್‌ಗ‌ಳಲ್ಲಿ ಕಾಣಿಸಿಕೊಳ್ಳುವ ಉದಾಹರಣೆಗಳನ್ನು ಆಗಾಗ್ಗೆ ಚಿತ್ರರಂಗದಲ್ಲಿ ನೋಡುತ್ತಿರುತ್ತೇವೆ. ಈಗ ಅಂಥದ್ದೇ ಮತ್ತೂಂದು ಚಿತ್ರ ಚಿತ್ರೀಕರಣಕ್ಕೆ ಅಣಿಯಾಗಿದೆ. ಅಂದಹಾಗೆ, ಆ ಚಿತ್ರದ ಹೆಸರು “ಹುಡುಕಾಟ’ “ವಸುಂಧರ ಕ್ರಿಯೇಶನ್ಸ್‌’ ಬ್ಯಾನರಿನಲ್ಲಿ ನಿರ್ಮಾಣವಾಗುತ್ತಿರುವ “ಹುಡುಕಾಟ’ ಚಿತ್ರಕ್ಕೆ ರವಿ ಮುಲಕಲಪಲ್ಲಿ ಕಥೆ, ಚಿತ್ರಕಥೆ ಬರೆದು, ಹಾಡುಗಳಿಗೆ ಸಂಗೀತ ಸಂಯೋಜಿಸಿ, ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಜೊತೆಗೆ ನಿರ್ಮಾಣದ ಹೊಣೆಯನ್ನೂ ತಾವೇ ಹೊತ್ತುಕೊಂಡಿರುವ ರವಿ, ಚಿತ್ರದಲ್ಲಿ ನಾಯಕನಾಗಿಯೂ ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನು ಬಹುತೇಕ “ಒನ್‌ ಮ್ಯಾನ್‌ ಶೋ’ ಥರ ಕಾಣುವ ಈ ಚಿತ್ರ, ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಏಕಕಾಲಕ್ಕೆನಿರ್ಮಾಣವಾಗುತ್ತಿದೆಯಂತೆ. ಇತ್ತೀಚೆಗೆ “ಹುಡುಕಾಟ’ ಚಿತ್ರ ಮುಹೂರ್ತವನ್ನು ಆಚರಿಸಿಕೊಂಡಿತು. ಹಿರಿಯ ನಿರ್ದೇಶಕ ಸಿ.ವಿ ಶಿವಶಂಕರ್‌, ಎಂ.ಡಿ ಕೌಶಿಕ್‌ ಮೊದಲಾದವರು ಕಾರ್ಯಕ್ರಮದಲ್ಲಿ ಹಾಜರಿದ್ದು, ಚಿತ್ರೀಕರಣಕ್ಕೆ ಚಾಲನೆ ನೀಡಿ, ಚಿತ್ರತಂಡಕ್ಕೆ ಶುಭ ಕೋರಿದರು. ಇದೇ ವೇಳೆ ಮಾತನಾಡಿದ ನಿರ್ದೇಶಕ, ನಿರ್ಮಾಪಕ ಕಂ ನಾಯಕ ರವಿ ಮುಲಕಲಪಲ್ಲಿ, “ಇತ್ತೀಚಿನ ದಿನಗಳಲ್ಲಿ ದೇಶದ ಹಲವೆಡೆ ಹೆಣ್ಣುಮಕ್ಕಳ ಅಪಹರಣ, ಅತ್ಯಾಚಾರ ಪ್ರಕರಣಗಳು ಸುದ್ದಿಯಾಗುತ್ತಿವೆ. ಈಗ ಇದೇ ವಿಷಯವನ್ನು ಆಧರಿಸಿ ಸಿನಿಮಾ ಮಾಡುತ್ತಿದ್ದೇವೆ. ಹಳ್ಳಿಯೊಂದರಲ್ಲಿ ಸೀತಾ ಮತ್ತು ಸಾವಿತ್ರಿ ಎಂಬ ಇಬ್ಬರು ಕುರಿ ಕಾಯುವ ಹುಡುಗಿಯರು ಇದ್ದಕ್ಕಿದ್ದಂತೆ ನಾಪತ್ತೆಯಾಗುತ್ತಾರೆ. ಆ ನಂತರ ಅವರ ಕಥೆ ಏನಾಗುತ್ತದೆ ಅನ್ನೋದೆ ಚಿತ್ರದ ಕಥೆಯ ಒಂದು ಎಳೆ’ ಎಂದು ಚಿತ್ರದ ಕಥಾಹಂದರ ತೆರೆದಿಟ್ಟರು.

ಇನ್ನು “ಹುಡುಕಾಟ’ ಚಿತ್ರಕ್ಕೆ “ಪ್ರತಿ ಕ್ಷಣವೂ ಹೋರಾಟ’ ಎಂಬ ಟ್ಯಾಗ್‌ ಲೈನ್‌ ಇದ್ದು, ಚಿತ್ರದಲ್ಲಿ ರವಿ ಮುಲಕಲಪಲ್ಲಿ ಅವರೊಂದಿಗೆ ಅಭಿಷೇಕ್‌ ಕನ್ನೆಲೂರಿ, ಪ್ರಜ್ವಲ್‌ ಕುಮಾರ್‌ ಎಸ್‌, ಶ್ರೀಧರ ಕುಮಾರ್‌, ಮಧುಪ್ರಿಯಾ, ಪೂಜಿತಾ, ದಿವ್ಯಾ ಭಾರ್ಗವಿ, ಲಲಿತಾ, ನಾಗೇಶ್ವರ ರಾವ್‌, ಸುಜಾತ, ಸಂತೋಷ್‌, ಮಂಜುನಾಥ್‌, ರಮಣ, ಭಾಸ್ಕರ್‌, ಚರಣ್‌, ರಾಕ್‌ ವೇಣು, ಟೈಗರ್‌ ಬಾಬು, ಧನಂಜಯ್‌, ಗಿರಿ ಸೇರಿದಂತೆ ಕನ್ನಡ ಮತ್ತು ತೆಲುಗಿನ ಹಲವು ಕಲಾವಿದರು ಇತರ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಚಿತ್ರಕ್ಕೆ ಆರ್ಯನ್‌ ಛಾಯಾಗ್ರಹಣ, ಎಂ.ಎನ್‌.ಆರ್‌ ಸಂಕಲನವಿದೆ. ಡಿ.ಎಸ್‌.ಬಿ ಉಪ್ಪಾರ್‌ ಚಿತ್ರದ ಹಾಡುಗಳಿಗೆ ಸಾಹಿತ್ಯ ಮತ್ತು ದೃಶ್ಯಗಳಿಗೆ ಸಂಭಾಷಣೆ ಬರೆಯುತ್ತಿದ್ದಾರೆ. ಮೈಸೂರು, ಮಡಿಕೇರಿ, ಮಂಡ್ಯ, ಬೆಂಗಳೂರು ಸುತ್ತಮುತ್ತ “ಹುಡುಕಾಟ’ ಚಿತ್ರದ ಚಿತ್ರೀಕರಣಕ್ಕೆ ಚಿತ್ರತಂಡ ಪ್ಲಾನ್‌ ಹಾಕಿಕೊಂಡಿದೆ.

ಒಟ್ಟಾರೆ ಬಹುತೇಕ ಹೊಸಬರೆ ಸೇರಿ ನಿರ್ಮಿಸುತ್ತಿರುವ “ಹುಡುಕಾಟ’ ತೆರೆಗೆ ಯಾವಾಗ ಮುಗಿಯುತ್ತದೆ ಅನ್ನೋದರ ಬಗ್ಗೆ ಚಿತ್ರತಂಡಕ್ಕೇ ಸ್ಪಷ್ಟತೆ ಇಲ್ಲದಿರುವುದರಿಂದ, ಚಿತ್ರ ಯಾವಾಗ ತೆರೆಗೆ ಬರಬಹುದು ಅನ್ನೋದರ ಬಗ್ಗೆ ಸದ್ಯಕ್ಕೆ ಏನೂ ಹೇಳುವಂತಿಲ್ಲ.

ಟಾಪ್ ನ್ಯೂಸ್

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.