ಕೈ ಹಿಡಿಯೋ ನಿರೀಕ್ಷೆಯಲ್ಲಿ ಕಾಲಚಕ್ರ
ವಸಿಷ್ಠಗೆ ಸಿಕ್ಕ ವಿಶಿಷ್ಟ ಪಾತ್ರ
Team Udayavani, Oct 25, 2019, 5:31 AM IST
ಇಲ್ಲಿಯವರೆಗೆ ಕನ್ನಡ ಚಿತ್ರರಂಗದಲ್ಲಿ ಸಹ ನಟನಾಗಿ, ಖಳನಟನಾಗಿ ಗುರುತಿಸಿಕೊಂಡಿದ್ದ ವಸಿಷ್ಠ ಸಿಂಹ ಈಗ ಪೂರ್ಣ ಪ್ರಮಾಣದ ನಾಯಕ ನಟನಾಗಿ ಒಂದರ ಹಿಂದೊಂದು ಚಿತ್ರಗಳಲ್ಲಿ ಬ್ಯುಸಿಯಾಗುತ್ತಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ವಸಿಷ್ಟ ಅಭಿನಯಿಸುತ್ತಿರುವ “ಇಂಡಿಯಾ ವರ್ಸಸ್ ಇಂಗ್ಲೆಂಡ್’ ಚಿತ್ರದ ಟೈಟಲ್ ಮತ್ತು ಫಸ್ಟ್
ಲುಕ್ ಅದ್ಧೂರಿಯಾಗಿ ಹೊರಬಿದ್ದಿತ್ತು. ಈಗ ವಸಿಷ್ಠ ಅಭಿನಯಿಸುತ್ತಿರುವ ಮತ್ತೂಂದು ಚಿತ್ರ “ಕಾಲಚಕ್ರ’ದ ಟೀಸರ್ ಹೊರಬಂದಿದೆ. ಈಗಾಗಲೇ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ “ಕಾಲಚಕ್ರ’ ಚಿತ್ರತಂಡ ಸದ್ಯ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದ್ದು, ಇದರ ಮೊದಲ ಹಂತವಾಗಿ ನಟ ವಸಿಷ್ಠ ಸಿಂಹ ಬರ್ತ್‌ಡೇ ಸಂದರ್ಭದಲ್ಲಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ.
ನಟ ಸುದೀಪ್ ಮುಖ್ಯ ಅತಿಥಿಯಾಗಿ ಆಗಮಿಸಿ “ಕಾಲಚಕ್ರ’ ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಇದೇ ವೇಳೆ ಮಾತನಾಡಿದ ಸುದೀಪ್, “ಒಬ್ಬ ಕಲಾವಿದನನ್ನು ನೋಡಿದಾಗ ಸಿಗುವ ಹೆಮ್ಮೆ ಏನನ್ನು ನೋಡಿದರೂ ಸಿಗೋದಿಲ್ಲ. ವಸಿಷ್ಠ ಸಿಂಹ ಬುದ್ಧಿವಂತ ನಟ. ಕಮರ್ಷಿಯಲ್ ಅಂಶಗಳನ್ನು ಇಟ್ಟುಕೊಂಡು ಗೆಲ್ಲುವ ಚಿತ್ರ ಕೊಡಬೇಕು. ಇದರ ಮಧ್ಯೆ ಕಲಾವಿದ ಅಂತ ಉಳಿಸಿಕೊಳ್ಳುವ ಪ್ರಯತ್ನ ಕೂಡ ಮಾಡಬೇಕು. “ಕಾಲಚಕ್ರ’ ಅನ್ನೋದು ಎಲ್ಲರ ಜೀವನದಲ್ಲೂ ಇರುತ್ತದೆ. ಈ ಚಿತ್ರ ನೋಡಲು ನಾನು ಕಾತುರನಾಗಿದ್ದೇನೆ’ ಎಂದರು.
ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಕಂ ನಿರ್ಮಾಪಕ ಸುಮಂತ್ ಕ್ರಾಂತಿ, “ಇದೊಂದು ನೈಜ ಘಟನೆ ಆಧಾರಿತ ಚಿತ್ರವಾಗಿದ್ದು, ಪ್ರತಿಯೊಬ್ಬ ನೋಡುಗನಿಗೂ ಪ್ರತಿಯೊಂದು ಪಾತ್ರವು ತನಗೆ ಸಂಬಂಧಿಸಿದ್ದು ಅನಿಸುತ್ತದೆ. ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ಘಟನೆಗಳು ನಡೆಯುತ್ತವೆ. ಅದೆಲ್ಲವನ್ನು ಎದುರಿಸಿ ಬರುವಷ್ಟರಲ್ಲಿ ಅವನ ಪ್ರಾಣಪಕ್ಷಿ ಹಾರಿ ಹೋಗಿರುತ್ತೆ. ಅಂತಹ ಘಟನೆ ನಡೆದಾಗ ಮನುಷ್ಯನಾದವನು ಹೇಗೆ ಸ್ಪಂದಿಸುತ್ತಾನೆ. ಆ ಸಂದರ್ಭದಲ್ಲಿ ಯಾವ ರೀತಿ ಎದುರಿಸುತ್ತಾನೆ. ಇದೆಲ್ಲವನ್ನು ಪ್ರಸಕ್ತ ಕಾಲಘಟ್ಟದಲ್ಲಿ ಹೇಳುವ ಪ್ರಯತ್ನ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.
ಇನ್ನು “ಕಾಲಚಕ್ರ’ ಚಿತ್ರದಲ್ಲಿ ಮೂವತ್ತೈದು ಮತ್ತು ಅರವತ್ತು ದಾಟಿದ ವಯಸ್ಸಿನ ಎರಡು ಬೇರೆ ಬೇರೆ ಆಯಾಮದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂಬ ಮಾಹಿತಿ ನೀಡಿದರು ನಟ ವಸಿಷ್ಟ ಸಿಂಹ. ಟೀಸರ್ ಬಿಡುಗಡೆ ಸಮಾರಂಭದಲ್ಲಿ ನಾಯಕಿ ರಕ್ಷಾ, ಸಂಗೀತ ನಿರ್ದೇಶಕ ಗುರುಕಿರಣ್, ಚಿತ್ರ ಸಾಹಿತಿ ಡಾ. ನಾಗೇಂದ್ರ ಪ್ರಸಾದ್, ಸಂತೋಷ್ ನಾಯಕ್ ಮುಂತಾದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.