ಗಡಿನಾಡು ಹಾಡು
ಕನ್ನಡದ ಹುಡುಗ, ಮರಾಠಿ ಹುಡುಗಿಯ ಪ್ರೇಮ್ ಕಹಾನಿ
Team Udayavani, Nov 22, 2019, 5:01 AM IST
ಬೆಳಗಾವಿ ಎಂದರೆ ಹೆಚ್ಚಾಗಿ ನೆನಪಿಗೆ ಬರುವುದು ಕರ್ನಾಟಕ-ಮಹಾರಾಷ್ಟ್ರ ಗಡಿ ಸಮಸ್ಯೆ, ಕನ್ನಡ ಮತ್ತು ಮರಾಠಿ ಭಾಷಾ ಹೋರಾಟ, ಉತ್ತರ ಕರ್ನಾಟಕದ ರಾಜಕೀಯ ಇತರೆ ಸಂಗತಿಗಳು. ಈಗ ಇದೇ ಸಂಗತಿಗಳನ್ನು ಇಟ್ಟುಕೊಂಡು ಚಿತ್ರವೊಂದು ತೆರೆಗೆ ಬರುತ್ತಿದೆ. ಅಂದಹಾಗೆ, ಆ ಚಿತ್ರದ ಹೆಸರೇ
“ಗಡಿನಾಡು’ ಬೆಳಗಾವಿಯಲ್ಲಿ ಯಾವಾಗಲೂ ತಾರಕಕ್ಕೇರುವ, ಇದ್ದಕ್ಕಿದ್ದಂತೆ ಕಿಚ್ಚು ಹೊತ್ತಿಸಿ ಕಾವು ಪಡೆದುಕೊಳ್ಳುವ ಕರ್ನಾಟಕ-ಮಹಾರಾಷ್ಟ್ರ ಗಡಿ ಸಮಸ್ಯೆ, ಚಳುವಳಿ-ಹೋರಾಟಗಳೆ ಈ ಚಿತ್ರದ ಹೈಲೈಟ್. ಇದರ ಜೊತೆಗೊಂದು ನವಿರಾದ ಪ್ರೇಮಕಥೆ ಇದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ಸೌಹಾರ್ಧ ಭಾವನೆಯನ್ನು ಸಾರುವ ಸಂದೇಶ ಕೂಡ ಇರಲಿದೆಯಂತೆ.
ಇನ್ನು ಬೆಳಗಾವಿ ಮೂಲದ ನಿರ್ಮಾಪಕ ಮತ್ತು ಕನ್ನಡಪರ ಹೋರಾಟಗಾರ ವಸಂತ ಮುರಾರಿ ದಳವಾಯಿ “ಅಕ್ಷಯ ಫಿಲಂ ಮೇಕರ್’ ಬ್ಯಾನರ್‌ನಲ್ಲಿ “ಗಡಿನಾಡು’ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರಕ್ಕೆ ನಾಗ್ ಹುಣಸೋಡ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.
“ಗಡಿನಾಡು’ ಚಿತ್ರದಲ್ಲಿ ಪ್ರಭುಸೂರ್ಯ ನಾಯಕನಾಗಿ, ಸಂಚಿತಾ ಪಡುಕೋಣೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಹಿರಿಯ ನಟ ಚರಣ್ ರಾಜ್, ಶೋಭರಾಜ್, ದೀಪಕ್ ಶೆಟ್ಟಿ, ರಘು ರಾಜ್, ರಘು ಸೀರುಂಡೆ, ಮಮತಾ, ಪುಷ್ಪಾ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಗೌರಿ ವೆಂಕಟೇಶ್ ಮತ್ತು ರವಿ ಸುವರ್ಣ ಛಾಯಾಗ್ರಹಣ, ವೆಂಕಿ ಸಂಕಲನ ಕಾರ್ಯವಿದೆ.
ಸದ್ಯ “ಗಡಿನಾಡು’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ,
ಇತ್ತೀಚೆಗೆ ಚಿತ್ರದ ಕಲಾವಿದರು, ತಂತ್ರಜ್ಞರು ಮತ್ತು ಕನ್ನಡಪರ ಹೋರಾಟಗಾರರ ಸಮ್ಮುಖದಲ್ಲಿ ತನ್ನ
ಹಾಡುಗಳನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಮೋಶನ್ ಕೆಲಸಗಳಿಗೆ ಚಾಲನೆ ನೀಡಿದೆ.
ಇದೇ ವೇಳೆ ಚಿತ್ರದ ಬಗ್ಗೆ ಮಾತನಾಡಿದ ಚಿತ್ರತಂಡ, “ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿಕೊಂಡು
ಬೆಳಗಾವಿಗೆ ಬರುವ ನಾಯಕ ಅಲ್ಲಿನ ಗಡಿ ಸಮಸ್ಯೆಯನ್ನು ಕಂಡು, ತಾನೇ ಒಂದು ಗಡಿನಾಡು ಸೇನೆಯನ್ನು ಪ್ರಾರಂಭಿಸುತ್ತಾನೆ. ನಂತರ ಅವರ ಕಾರ್ಯಕ್ಕೆ ಹಲವು ಅಡ್ಡಿಯಾಗುತ್ತಾರೆ. ಇದರ ನಡುವೆ ಮರಾಠಿ ಹುಡುಗಿಯೊಬ್ಬಳ ಜೊತೆ ನಾಯಕನಿಗೆ ಪ್ರೀತಿ ಮೂಡುತ್ತದೆ.
ಇವೆಲ್ಲವನ್ನು ನಾಯಕ ಹೇಗೆ ಗೆದ್ದು ತನ್ನ ಗುರಿಯನ್ನು ಸಾಗಿಸುತ್ತಾನೆ ಅನ್ನೋದು ಚಿತ್ರ’ ಎಂದು ಚಿತ್ರದ
ಕಥೆಯ ಎಳೆಯನ್ನು ಬಿಚ್ಚಿಟ್ಟಿತು. “ಗಡಿನಾಡು’ ಚಿತ್ರದ ಹಾಡುಗಳಿಗೆ ಎಲ್ವಿನ್ ಜೋಶ್ವಾ ಸಂಗೀತ
ಸಂಯೋಜಿಸಿದ್ದು, ಸಂತೋಷ್ ನಾಯಕ್ ಮತ್ತು ನಾಗ್ ಹುಣಸೋಡ್ ಸಾಹಿತ್ಯ ರಚಿಸಿದ್ದಾರೆ. ಧನಂಜಯ್ ಹರಿಕೃಷ್ಣ ಹಾಡುಗಳಿಗೆ ನೃತ್ಯ ಸಂಯೋಜಿಸಿದ್ದಾರೆ.
ಸದ್ಯ ಬಿಡುಗಡೆಯಾಗಿರುವ “ಗಡಿನಾಡು’ ಚಿತ್ರದ ಹಾಡುಗಳು ನಿಧಾನವಾಗಿ ಕೇಳುಗರ ಗಮನ ಸೆಳೆಯುತ್ತಿದ್ದು, ಇದೇ ವರ್ಷದ ಕೊನೆಗೆ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ ಚಿತ್ರತಂಡ.
– ಜಿ. ಎಸ್. ಕಾರ್ತಿಕ ಸುಧನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.