ರುದ್ರಿ ರಮಣೀಯ ಮತ್ತೆ ಮೂರು ಪ್ರಶಸ್ತಿ ಗರಿ
Team Udayavani, Jul 24, 2020, 9:04 AM IST
ನಟಿ ಪಾವನಾ ಅಭಿನಯದ ಮಹಿಳಾ ಪ್ರಧಾನ ಚಿತ್ರ “ರುದ್ರಿ’ ಈಗ ಮತ್ತೂಂದು ಪ್ರತಿಷ್ಠಿತ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಬಡಿಗೇರ್ ದೇವೇಂದ್ರ ಚೊಚ್ಚಲ ನಿರ್ದೇಶನದಲ್ಲಿ ಮೂಡಿಬಂದ “ರುದ್ರಿ’ ಒಂದರ ಹಿಂದೊಂದು ಚಲನಚಿತ್ರೋತ್ಸವದಲ್ಲಿ ಭಾಗಿಯಾಗುತ್ತಿದ್ದು, ರಾಷ್ಟ್ರೀಯ – ಅಂತರಾಷ್ಟ್ರೀಯ ವೇದಿಕೆಯಲ್ಲಿ ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ಕೆಲ ತಿಂಗಳ ಹಿಂದೆ ಇಟಲಿಯ ಓನಿರೋಸ್ ಚಿತ್ರೋತ್ಸವದಲ್ಲಿ “ರುದ್ರಿ’ ಭಾಗಿಯಾಗಿತ್ತು. ಅಲ್ಲಿ “ರುದ್ರಿ’ ಚಿತ್ರದ ಅಭಿನಯಕ್ಕಾಗಿ ನಟಿ ಪಾವನಾ ಗೌಡ ಅವರಿಗೆ “ಅತ್ಯುತ್ತಮ ನಟಿ ಪ್ರಶಸ್ತಿ’ ಒಲಿದು ಬಂದಿತ್ತು.
ಜತೆಗೆ ಅತ್ಯುತ್ತಮ ಪೋಸ್ಟರ್ ವಿಭಾಗದಲ್ಲಿಯೂ “ರುದ್ರಿ’ ಪ್ರಶಸ್ತಿ ಪಡೆದುಕೊಂಡಿತ್ತು. ಈಗ ಅಂಥದ್ದೇ ಮತ್ತೂಂದು ಪ್ರತಿಷ್ಠಿತ ಸಿನಿಮೋತ್ಸವದಲ್ಲಿ ಈಮೂರು ಪ್ರಶಸ್ತಿಗಳು
“ರುದ್ರಿ’ಯ ಮುಡಿಗೇರಿದೆ.
ಹೌದು, ಇತ್ತೀಚೆಗೆ ನಡೆದ ಟ್ಯಾಗೋರ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಭಾಗಿಯಾಗಿದ್ದ “ರುದ್ರಿ’ ಮೂರು ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ನಟಿ ಪಾವನಾ ಅತ್ಯುತ್ತಮ ನಟಿ ಪ್ರಶಸ್ತಿ ಗೌರವ ಪಡೆದುಕೊಂಡಿದ್ದರೆ, ಬಡಿಗೇರ್ ದೇವೇಂದ್ರ ಅವರಿಗೆ ಅತ್ಯುತ್ತಮ ಚೊಚ್ಚಲ ನಿರ್ದೇಶನ ಹಾಗೂ ಅತ್ಯುತ್ತಮ ನರೇಟಿವ್ ಫಿಚರ್ ವಿಭಾಗದಲ್ಲಿ ಪ್ರಶಸ್ತಿಗಳು ಬಂದಿವೆ. ಈ ಬಗ್ಗೆ ಮಾತನಾಡಿರುವ ಚಿತ್ರತಂಡ, ಟ್ಯಾಗೋರ್ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ತನ್ನದೇಯಾದ ಪರಂಪರೆ ಮತ್ತು ಮಹತ್ವವಿದೆ. ಇಲ್ಲಿ ಚಿತ್ರಗಳು ಭಾಗವಹಿಸುವುದೇ ಒಂದು ಹೆಮ್ಮೆಯ ವಿಷಯ. ಇಲ್ಲಿ ಪ್ರದರ್ಶನವಾಗುವ ಚಿತ್ರಗಳನ್ನು ದೇಶದ ಸಿನಿಮಾರಂಗದ ಅನೇಕ ಮಹಾನ್ ದಿಗ್ಗಜರು ವೀಕ್ಷಿಸುತ್ತಾರೆ. ಇಂಥ ಕಡೆ ನಮ್ಮ ಸಿನಿಮಾ ಪ್ರದರ್ಶನವಾಗಿದೆ’ ಎಂದು ಹೇಳಿಕೊಂಡಿದೆ.
ಇನ್ನು ಟ್ಯಾಗೋರ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಸುಮಾರು 400ಕ್ಕೂ ಅಧಿಕ ಜಾಗತಿಕ ಸಿನಿಮಾಗಳು ಸ್ಪರ್ಧಿಸಿದ್ದು, ನಮಗೆ ಈ ಪ್ರಶಸ್ತಿಗಳು ದೊರಕಿದೆ. ಈಗಾಗಲೇ ಅನೇಕ
“ರುದ್ರಿ’ ಅನೇಕ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡು ಮೆಚ್ಚುಗೆಗೆ ಪಾತ್ರವಾಗಿದೆ. ಆದರೆ ಇನ್ನೂ ಚಿತ್ರಮಂದಿರಗಳಲ್ಲಿ ತೆರೆ ಕಾಣುವ ಭಾಗ್ಯ ಸಿಕ್ಕಿಲ್ಲ. ಎಲ್ಲ ಅಂದುಕೊಂಡಂತೆ ಆಗಿದ್ದರೆ,
ಇದೇ ಏಪ್ರಿಲ್ ತಿಂಗಳಿನಲ್ಲಿ ಚಿತ್ರ ತೆರೆಗೆ ಬರಬೇಕಿತ್ತು. ಆದರೆ ಕೊರೊನಾ ಲಾಕ್‌ಡೌನ್ ಕಾರಣದಿಂದ ಚಿತ್ರವನ್ನು ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Bengaluru: ಮನೆಯ ಬಾಲ್ಕನಿಯಲ್ಲಿ ಗಿಡಗಳ ಮಧ್ಯೆ ಗಾಂಜಾ ಬೆಳೆದಿದ್ದ ದಂಪತಿ ಬಂಧನ
Karkala: ಸೆಲ್ಫಿ ಕಾರ್ನರ್ ಮಾಡಿದರೂ ತ್ಯಾಜ್ಯ ಎಸೆತ ನಿಂತಿಲ್ಲ!
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.