ಫ್ಯಾಮಿಲಿ ಪ್ಯಾಕ್ ಜೋಡಿಯ ‘ಅಬ್ಬಬ್ಬ’ ಸ್ಟೋರಿ!
Team Udayavani, Jun 10, 2022, 2:16 PM IST
“ಫ್ಯಾಮಿಲಿ ಪ್ಯಾಕ್’ ಜೋಡಿ ಲಿಖೀತ್ ಶೆಟ್ಟಿ ಹಾಗೂ ಅಮೃತಾ ಅಯ್ಯಂಗಾರ್ ಜೊತೆಯಾಗಿ ನಟಿಸಿರುವ “ಅಬ್ಬಬ್ಬ’ ಚಿತ್ರ ಜುಲೈ 1 ರಂದು ಬಿಡುಗಡೆಯಾಗಲಿದೆ. “ಆ ದಿನಗಳು’ ಚಿತ್ರದ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಕೆ.ಎಂ.ಚೈತನ್ಯ ನಿರ್ದೇಶನದ ಈ ಚಿತ್ರ ಸಂಪೂರ್ಣ ಹಾಸ್ಯಮಯವಾಗಿದೆ.
ಬೆಂಗಳೂರಿನಲ್ಲಿ ಮೀರಾಮಾರ್ ಎಂಬ ಜಾಹೀರಾತು ನಿರ್ಮಾಣ ಸಂಸ್ಥೆ ನಡೆಸುತ್ತಿರುವ ಆನ್ ಆಗಸ್ಟೇನ್ ಹಾಗೂ ವಿವೇಕ್ ಥಾಮಸ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಆನ್ ಆಗಸ್ಟೇನ್ ಮಲಯಾಳಂ ನಟಿ ಕೂಡ. ಸಾಕಷ್ಟು ಮಲೆಯಾಳಂ ಚಿತ್ರಗಳಲ್ಲಿ ಇವರು ನಟಿಸಿದ್ದಾರೆ. ಇವರಿಬ್ಬರ ನಿರ್ಮಾಣದಲ್ಲಿ ಮೂಡಿಬಂದಿರುವ ಮೊದಲ ಚಿತ್ರ ಅಬ್ಬಬ್ಬ.
ಇದನ್ನೂ ಓದಿ:ಶೇ.20 ಭೂಮಿಯಲ್ಲಿ 800 ಕೋಟಿ ಜನರ ವಾಸ: ಪರಿಸರವಾದಿ, ನಟ ಸುರೇಶ ಹೆಬ್ಳೀಕರ್ ಅಭಿಮತ
ಚಿತ್ರದಲ್ಲಿ ಅಜಯ್ ರಾಜ್, ತಾಂಡವ್ ರಾಮ್, ಧನರಾಜ್ ಆಚಾರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಬೆಂಗಳೂರು ಹಾಗೂ ತುಮಕೂರಿನಲ್ಲಿ ಚಿತ್ರೀಕರಣ ನಡೆದಿದ್ದು, ಇದೇ ಆರರಂದು ಟ್ರೇಲರ್ ಬಿಡುಗಡೆಯಾ ಗಲಿದೆ. ಜುಲೈ ಒಂದರಂದು ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ಕೆ.ಎಂ. ಚೈತನ್ಯ ತಿಳಿಸಿದ್ದಾರೆ.
ಮನೋಹರ್ ಜೋಶಿ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ದೀಪಕ್ ಅಲೆಕ್ಸಾಂಡರ್ ಸಂಗೀತವಿದೆ. ಹರಿದಾಸ್ ಕೆ.ಜಿ.ಎಫ್ ಈ ಚಿತ್ರದ ಸಂಕಲನಕಾರರು. ಚಿತ್ರದಲ್ಲಿ ನಾಲ್ಕು ಹಾಡುಗಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.