ಯೋಗಿಯ ಪ್ರೇಮಪ್ರಸಂಗ

Team Udayavani, Apr 6, 2018, 4:10 PM IST

priya-praka.jpg

ನಿರ್ದೇಶಕ ಯೋಗಿ, ಕಣ್ಸನ್ನೆ ಮೂಲಕ ರಾತ್ರೋರಾತ್ರಿ ಜನಪ್ರಿಯಳಾದ ಪ್ರಿಯಾ ಪ್ರಕಾಶ್‌ ವಾರಿಯರ್‌ ಅವರನ್ನು ಭೇಟಿಯಾಗಿ ಬಂದು, ಆ ಫೋಟೋಗಳನ್ನು ಮಾಧ್ಯಮಕ್ಕೆ ಬಿಡುಗಡೆ ಮಾಡಿ, ತಮ್ಮ ಹೊಸ ಚಿತ್ರ “ಯೋಗಿ ಲವ್ಸ್‌ ಸುಪ್ರಿಯಾ’ ಚಿತ್ರಕ್ಕೆ ಪ್ರಿಯಾ ಪ್ರಕಾಶ್‌ ನಾಯಕಿಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದರು. ಅದು ದೊಡ್ಡ ಸುದ್ದಿಯೂ ಆಗಿತ್ತು. ಈಗ “ಯೋಗಿ ಲವ್ಸ್‌ ಸುಪ್ರಿಯಾ’ ಚಿತ್ರದ ಮುಹೂರ್ತವಾಗಿದೆ. ಅದೂ ಚಿತ್ರದ ನಾಯಕಿ ಇಲ್ಲದೇ …

ಹಾಗಾದರೆ, ಪ್ರಿಯಾ ಪ್ರಕಾಶ್‌ ಬರಲ್ವಾ ಎಂದರೆ, “ಮಾತುಕತೆ ಮಾಡಿದ್ದೇವೆ. ಈಗ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ಮೂರ್‍ನಾಲ್ಕು ತಿಂಗಳು ಅವರು ಬಿಝಿ ಇದ್ದಾರೆ. ಅವರು ಬಂದರೂ ಬರಬಹುದು, ಬರದೇನೂ ಇರಬಹುದು. ಹಾಗಾಗಿ, ನಾವು ಚಿತ್ರದ ಮತ್ತೂಬ್ಬ ನಾಯಕಿ ಇರುವ ದೃಶ್ಯಗಳ ಚಿತ್ರೀಕರಣ ಮಾಡುತ್ತೇವೆ. ಪ್ರಿಯಾ ಪ್ರಕಾಶ್‌ ಬಾರದಿದ್ದರೆ ಬೇರೆ ನಾಯಕಿಯನ್ನು ಆಯ್ಕೆ ಮಾಡುತ್ತೇವೆ’ ಎನ್ನುವುದು ಚಿತ್ರದ ನಿರ್ದೇಶಕ ಕಂ ನಾಯಕ ಯೋಗಿ ಅವರ ಮಾತು. 

ಅಂದಹಾಗೆ, “ಯೋಗಿ ಲವ್ಸ್‌ ಸುಪ್ರಿಯಾ’ ಎರಡು ಶೇಡ್‌ನ‌ಲ್ಲಿ ಹೋಗುವ ಕಥೆಯಾಗಿದ್ದು, ಸ್ಕೂಲ್‌ ಲವ್‌ಸ್ಟೋರಿ ಜೊತೆಗೆ ಕಾಲೇಜ್‌ ಲವ್‌ಸ್ಟೋರಿಯೂ ಸೇರಿಕೊಳ್ಳುತ್ತದೆಯಂತೆ. ಲವ್‌ ಜೊತೆಗೆ ಜೀವನದಲ್ಲಿ ಗುರಿ, ಸಾಧನೆ ಮುಖ್ಯ ಎಂಬ ಅಂಶವನ್ನು ಈ ಚಿತ್ರದಲ್ಲಿ ಹೇಳಲಿದ್ದಾರಂತೆ. ಈಗಾಗಲೇ ಚಿತ್ರಕ್ಕೆ ಹೈದರಾಬಾದ್‌ನ ನಕ್ಷತ್ರ ಎನ್ನುವವರು ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಆದರೆ, ಮುಹೂರ್ತದ ದಿನ ಮಾತ್ರ ಯೋಗಿಗೆ ಯಾವ ನಾಯಕಿಯೂ ಇರಲಿಲ್ಲ. ಚಿತ್ರದ ಬಗ್ಗೆ ಹೆಚ್ಚೇನು ಮಾತನಾಡಲು ಯೋಗಿ ಬಳಿ ವಿಷಯವಿರಲಿಲ್ಲ.

ಚಿತ್ರದ ಮುಹೂರ್ತಕ್ಕೆ ನಟಿ ಪ್ರಣೀತಾ ಬಂದು ಕ್ಲಾಪ್‌ ಮಾಡಿದ ಖುಷಿಯಷ್ಟೇ ಎದ್ದು ಕಾಣುತ್ತಿತ್ತು. ಚಿತ್ರಕ್ಕೆ ವೀರ್‌ಸಮರ್ಥ್ ಸಂಗೀತ ನೀಡುತ್ತಿದ್ದು, ರಾಜಶೇಖರ್‌ ಛಾಯಾಗ್ರಹಣವಿದೆ. ಚಿತ್ರವನ್ನು ಮಂಜುನಾಥ್‌ ನಿರ್ಮಿಸುತ್ತಿದ್ದಾರೆ. ನಿರ್ದೇಶಕರು ಆಗಾಗ ಬಂದು ಸಿನಿಮಾ ಮಾಡುವ ಎಂದು ಕೇಳಿಕೊಳ್ಳುತ್ತಿದ್ದರಂತೆ. ಆ ಕಾರಣದಿಂದ ಸಿನಿಮಾ ಮಾಡುತ್ತಿರುವುದಾಗಿ ಹೇಳಿದರು ಮಂಜು.

ಟಾಪ್ ನ್ಯೂಸ್

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

ulock

Sandalwood: ಅನ್‌ಲಾಕ್‌ ರಾಘವದಿಂದ ಲಾಕ್‌ ಸಾಂಗ್‌ ಬಂತು

yogaraj bhat song in Manada kadalu movie

Manada Kadalu: ಭಟ್ರು ಬರೆದ ಅನರ್ಥ ಹಾಡು: ಮನದ ಕಡಲಿನಲ್ಲಿ ತುರ್ರಾ…

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

sharan starer chu mantar movie

Choo Mantar: ಕೊನೆಗೂ ಅಖಾಡಕ್ಕೆ ಶರಣ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

1-sn

Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.