ವಿಕ್ಷಿಪ್ತ ಚಿತ್ತಗಳ ವಿರಾಟ ಸ್ವರೂಪ
ಮನರೂಪ ಆಟ ಶುರು
Team Udayavani, Nov 22, 2019, 5:20 AM IST
ತನ್ನ ಟೈಟಲ್ ಮತ್ತು ಪೋಸ್ಟರ್‌ಗಳ ಮೂಲಕ ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿರುವ ಬಹುತೇಕ ಹೊಸ ಪ್ರತಿಭೆಗಳ ಸೈಕಲಾಜಿಕಲ್, ಸಸ್ಪೆನ್ಸ್-ಥ್ರಿಲ್ಲರ್ ಚಿತ್ರ “ಮನರೂಪ’ ಈ ವಾರ ತೆರೆಗೆ ಬರುತ್ತಿದೆ. ಸದ್ಯ ಕಳೆದ ಕೆಲ ದಿನಗಳಿಂದ ಭರ್ಜರಿಯಾಗಿ ಪ್ರಮೋಶನ್ ಕೆಲಸಗಳಲ್ಲಿ ನಿರತವಾಗಿದ್ದ ಚಿತ್ರತಂಡಕ್ಕೆ ಎಲ್ಲಾ ಕಡೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದೇ ಖುಷಿಯಲ್ಲಿರುವ ಚಿತ್ರತಂಡ, ಚಿತ್ರದ ಬಿಡುಗಡೆಗೂ ಮುನ್ನ ಮಾಧ್ಯಮಗಳ ಮುಂದೆ ಬಂದು, ಚಿತ್ರದ ಬಗ್ಗೆ ಒಂದಷ್ಟು ಮಾತನಾಡಿತು.
ಮೊದಲಿಗೆ ಚಿತ್ರದ ಬಗ್ಗೆ ಮಾತಿಗಿಳಿದ ನಿರ್ದೇಶಕ ಕಿರಣ್ ಹೆಗಡೆ, “ಇದು ಇಂದಿನ ಜನರೇಶನ್‌ನ ಚಿತ್ರ. ಇಂದಿನ ಯುವ ಪೀಳಿಗೆಯ ಹಿಂಸೆ, ವಿಕ್ಷಿಪ್ತ ಅಸಂಗತೆ ಮತ್ತು ಮನಸ್ಥಿತಿಗಳ ಸುತ್ತ ಚಿತ್ರದ ಕಥೆ ಸಾಗುತ್ತದೆ. ದಟ್ಟ ಕಾಡಿನಲ್ಲಿ ನಿಗೂಢವಾಗಿರುವ ಕರಡಿ ಗುಹೆಯನ್ನು ಹುಡುಕಿಕೊಂಡು ಹೊರಟಿರುವ ಐವರು ಸ್ನೇಹಿತರ ನಡುವಿನ ಕಥನವೇ ಮನರೂಪ ಸಿನಿಮಾದ ತಿರುಳು. ಅದರ ನಡುವೆ ಸಿಗುವ ಹಲವು ಅಚ್ಚರಿಗಳು, ತಿರುವುಗಳು, ಹಿಂಸೆ, ಕಾಡಿನ ಭಯ, ಕರಡಿ ಗುಹೆಯ ನಿಗೂಢತೆ ಮುಂತಾದ ಸಂಗತಿಗಳ ಜೊತೆಗೆ ಈ ಐವರ ನಡುವೆ ಏನು ವಿಷಮ ಸಂಗತಿ ನಡೆಯುತ್ತದೆ ಎಂಬದೇ ಚಿತ್ರದ ಸಸ್ಪೆನ್ಸ್ ಅಂಶ. ಅದನ್ನು ಚಿತ್ರದಲ್ಲೇ ನೋಡಬೇಕು’ ಎನ್ನುತ್ತಾರೆ.
“ಮನರೂಪ’ ಚಿತ್ರದ ಶೇಕಡಾ ಎಂಬತ್ತರಷ್ಟು ಚಿತ್ರೀಕರಣವನ್ನು ದಟ್ಟ ಕಾಡಿನಲ್ಲೇ ನಡೆಸಲಾಗಿದೆಯಂತೆ. ಹಾಗಾಗಿ ಕಾಡಿನಲ್ಲಿ ಓಟ, ಬೀಳುವುದು, ಭಯದ ಛಾಯೆ, ಹುಡುಕಾಟ, ಅಪನಂಬಿಕೆ, ಪ್ರೇಮ ವೈಫಲ್ಯ, ಪಯಣ; ಈ ಎಲ್ಲಾ ಅಂಶಗಳನ್ನೂ ನೋಡುಗರಿಗೆ ಹೊಸ ಅನುಭವ ನೀಡಲಿದೆ ಅನ್ನೋದು ಚಿತ್ರತಂಡದ ಮಾತು. ಈಗಾಗಲೇ ಬಿಡುಗಡೆಯಾಗಿರುವ “ಮನರೂಪ’ ಚಿತ್ರದ ಟ್ರೇಲರ್‌ಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆಯಂತೆ. ಅದರ ಬಗ್ಗೆ ಮಾತನಾಡುವ ಚಿತ್ರತಂಡ, “ಚಿತ್ರ ಪ್ರೇಕ್ಷಕರಿಗೆ ಥ್ರಿಲ್ಲಿಂಗ್ ಅನುಭವ ನೀಡುತ್ತದೆ. ಚಿತ್ರದಲ್ಲಿ ಅನೇಕ ಅಚ್ಚರಿ ಮೂಡಿಸುವ ಸಂಗತಿಗಳಿವೆ. ಕೆಲ ದೃಶ್ಯಗಳು ತನ್ನ
ಕಂಟೆಂಟ್ ಮತ್ತು ಯೋಚನೆಗಳಿಂದ ಬೆಚ್ಚಿಬೀಳಿಸುತ್ತವೆ.
ಕುಟುಂಬ ವ್ಯವಸ್ಥೆ, ವ್ಯಕ್ತಿತ್ವ, ಅಸ್ತಿತ್ವ ಮತ್ತು ಇರುವಿಕೆಯ ವಿವಿಧ ಮಜಲನ್ನು ಚಿತ್ರದಲ್ಲಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಕಾಡು ಮತ್ತು ಕಾಡುವ ಪಾತ್ರಗಳು ಪ್ರೇಕ್ಷಕನನ್ನು ಹಿಡಿದಿಡುತ್ತವೆ. ಮನರೂಪ ಚಿತ್ರವನ್ನು ಪ್ರೇಕ್ಷಕ ಕಡೆಗಣಿಸಲಾರ. ಹೊಸ ಬಗೆಯ ಕಥೆ, ನಿರೂಪಣೆ ಮತ್ತು ಮನಸನ್ನು ನಾಟುವಂತಹ ವಿಷಯವೇ “ಮನರೂಪ’ದ ಶಕ್ತಿ. ವಿಕ್ಷಿಪ್ತ ಸಂಭಾಷಣೆ, ಅಸಂಗತ ಪರಿಕಲ್ಪನೆಯೇ “ಮನರೂಪ’ ಚಿತ್ರದ ಅಂದವನ್ನು ಹೆಚ್ಚಿಸಿದೆ. ಈಗಾಗಲೇ ಪ್ರೇಕ್ಷಕರಿಂದ ಸಿಗುವ ಪ್ರತಿಕ್ರಿಯೆ ನೋಡಿದರೆ, ಪ್ರೇಕ್ಷಕರು “ಮನರೂಪ’ವನ್ನು ಬೇರೆಯದೇ ಆಯಾಮದಲ್ಲಿ ನೋಡುತ್ತಾರೆಂಬ ನಂಬಿಕೆ ಇದೆ’ ಎಂಬ ಭರವಸೆಯ ಮಾತುಗಳನ್ನಾಡುತ್ತದೆ.
ಇನ್ನು “ಮನರೂಪ’ ಚಿತ್ರದಲ್ಲಿ ದಿಲೀಪ್ ಕುಮಾರ್, ಅನೂಷಾ ರಾವ್, ನಿಶಾ ಬಿ.ಆರ್, ಆರ್ಯನ್,
ಶಿವಪ್ರಸಾದ್, ಅಮೋಘ… ಸಿದ್ದಾರ್ಥ್, ಗಜಾ ನೀನಾಸಂ, ಪ್ರಜ್ವಲ್ ಗೌಡ, ರಮಾನಂದ ಐನಕೈ,
ಸತೀಶ್ ಗೋಳಿಕೊಪ್ಪ ಹಾಗೂ ವಿಶೇಷ ಪಾತ್ರದಲ್ಲಿ ಬಿ. ಸುರೇಶ್ ಅಭಿನಯಿಸಿದ್ದಾರೆ. “ಸಿಎಂಸಿಆರ್ ಮೂವೀಸ್’ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಚಿತ್ರಕ್ಕೆ ಗೋವಿಂದರಾಜ್ ಛಾಯಾಗ್ರಹಣ,
ಸೂರಿ ಮತ್ತು ಲೋಕಿ ಸಂಕಲನ ಕಾರ್ಯವಿದೆ. ಚಿತ್ರಕ್ಕೆ ಸರವಣ ಸಂಗೀತ ಸಂಯೋಜಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.