ಎಂಆರ್‌ಪಿ ಅಂದ್ರೆ ಅದಲ್ಲ..: ಮೋಸ್ಟ್ ರೆಸ್ಪಾನ್ಸಿಬಲ್ ಪರ್ಸನ್ ಸ್ಟೋರಿ

Team Udayavani, Oct 14, 2022, 11:47 AM IST

MRP kannada movie

ಸ್ಥೂಲಕಾಯದ ವ್ಯಕ್ತಿಗಳು ಸಮಾಜದಲ್ಲಿ ಪ್ರತಿದಿನ ಹತ್ತಾರು ಸಮಸ್ಯೆಗಳನ್ನು ಎದುರಿಸುತ್ತಾರೆ. ಅದೆಷ್ಟೋ ಬಾರಿ ವರವಾಗಬೇಕಾದ ದೇಹವೇ ಸ್ಥೂಲ ಕಾಯದವರಿಗೆ ಶಾಪವಾಗಿ ಪರಿಣಮಿಸಿರುತ್ತದೆ. ಆದರೆ ಇಂಥ ಸ್ಥೂಲಕಾಯದವರು ಕೂಡ, ತಾವು ಎದುರಿಸುತ್ತಿರುವ ಸಮಸ್ಯೆಗಳನ್ನು ವರವೆಂದು ಭಾವಿಸಿ ಕೆಲಸದ ಕಡೆಗೆ ಗಮನ ಕೊಟ್ಟರೆ ಅವರು ಕೂಡ ಸಮಾಜದಲ್ಲಿ ಗುರುತಿಸುವಂತೆ ಬೆಳೆಯಬಹುದು. ಇಂಥದ್ದೊಂದು ಸಂದೇಶವನ್ನು ಇಟ್ಟುಕೊಂಡು ಮನರಂಜನಾತ್ಮಕವಾಗಿ ಈ ವಾರ ತೆರೆಗೆ ಬರುತ್ತಿರುವ ಸಿನಿಮಾ “ಎಂಆರ್‌ಪಿ’.

ಅಂದಹಾಗೆ, ಈ ಸಿನಿಮಾದ ಹೆಸರು “ಎಂಆರ್‌ಪಿ’ ಅಂತ ಇಟ್ಟಿರುವುದಕ್ಕೂ ಕಾರಣವಿದೆ. ಸಿನಿಮಾದಲ್ಲಿ “ಎಂಆರ್‌ಪಿ’ ಅಂದರೆ, “ಮೋಸ್ಟ್‌ ರೆಸ್ಪಾನ್ಸಿಬಲ್‌ ಪರ್ಸನ್‌’ ಎಂಬುದು ಅದರ ವಿಸ್ತೃತ ರೂಪ ಎಂಬುದು ಚಿತ್ರತಂಡದ ವಿವರಣೆ. ಈ ಹಿಂದೆ “ನನ್‌ ಮಗಳೇ ಹೀರೋಯಿನ್‌’ ಚಿತ್ರವನ್ನು ನಿರ್ದೇಶಿಸಿದ್ದ ಬಾಹುಬಲಿ “ಎಂಆರ್‌ಪಿ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಸುಮಾರು ಎರಡು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ, ಹಲವಾರು ಸಿನಿಮಾಗಳಲ್ಲಿ ಹಾಸ್ಯ ಪಾತ್ರಗಳಲ್ಲಿ ಮಿಂಚಿದ ಹರಿ, ಈ ಸಿನಿಮಾದಲ್ಲಿ ಪೂರ್ಣ ಪ್ರಮಾಣದ ನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಸಾಫ್ಟ್ವೇರ್‌ ಇಂಜಿನಿಯರ್‌ ಆಗಿ ವಾಸ್ತವಕ್ಕೆ ಕನ್ನಡಿ ಹಿಡಿಯುವ ಪಾತ್ರದಲ್ಲಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. “ಎಂಆರ್‌ಪಿ’ ಅಂದರೆ, ಎಲ್ಲರಿಗೂ ಬಾರ್‌ ನೆನಪಾಗುತ್ತೆ. ಆದರೆ ಇಲ್ಲಿ, “ಎಂಆರ್‌ಪಿ” ಅಂದರೆ ಮೋಸ್ಟ್‌ ರೆಸ್ಪಾನ್ಸಿಬಲ್‌ ಪರ್ಸನ್‌ ಎಂದರ್ಥ. ಇದೊಂದು ಪಕ್ಕಾ ಕಾಮಿಡಿ ಸಿನಿಮಾ. ಅವರ ಬಾಡಿಗೆ ಅವರವರೇ ಜವಾಬ್ದಾರಿ ಆಗುತ್ತಾರೆ ವಿನಃ, ಬೇರೆ ಯಾರೂ ಆಗಲ್ಲ. ತಮ್ಮ ಬಾಡಿಯ ಜವಾಬ್ದಾರಿ ಏನೆಂಬುದು ಅವರಿಗಷ್ಟೇ ಗೊತ್ತಿರುತ್ತೆ. ಇಲ್ಲಿರುವ ಹೀರೋ ಕೂಡ ತುಂಬಾ ಜವಾಬ್ದಾರಿ ಇರುವ ವ್ಯಕ್ತಿ. ಅದು ಹೇಗೆ ಎಂಬುದನ್ನು ಕಾಮಿಡಿ ರೂಪದಲ್ಲಿ ತೋರಿಸಲಾಗಿದೆ ಎಂಬುದು ಚಿತ್ರತಂಡದ ಮಾತು.

ಇನ್ನು “ಎಂಆರ್‌ಪಿ’ ಚಿತ್ರವನ್ನು ನಿರ್ದೇಶಕ ಎಂ. ಡಿ ಶ್ರೀಧರ್‌, ಛಾಯಾಗ್ರಹಕ ಕೃಷ್ಣ ಕುಮಾರ್‌ (ಕೆ.ಕೆ), ಮೋಹನ್‌ ಕುಮಾರ್‌ ಹಾಗೂ ರಂಗಸ್ವಾಮಿ ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ. ಚಿತ್ರದ ಹಾಡುಗಳಿಗೆ ಹರ್ಷವರ್ಧನ ಸಂಗೀತ ಸಂಯೋಜಿಸುತ್ತಿದ್ದು, ಗುಂಡ್ಲುಪೇಟೆ ಸುರೇಶ್‌ ಛಾಯಾಗ್ರಹಣ, ಕೆ. ಎಂ ಪ್ರಕಾಶ್‌ ಸಂಕಲನವಿದೆ. ಸಂಪೂರ್ಣ ಹಾಸ್ಯಮಯ ಕಥಾಹಂದರ ಹೊಂದಿರುವ “ಎಂಆರ್‌ಪಿ’ ಚಿತ್ರದಲ್ಲಿ ಹರಿ ಅವರಿಗೆ ಚೈತ್ರಾ ರೆಡ್ಡಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

ಉಳಿದಂತೆ ವಿಜಯ್‌ ಚೆಂಡೂರ್‌, ಬಲ ರಾಜವಾಡಿ, ಸುಧಾ ಬೆಳವಾಡಿ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇಡೀ ಸಿನಿಮಾದಲ್ಲಿ ಹಾಸ್ಯಕ್ಕೆ ಹೆಚ್ಚು ಒತ್ತು ಕೊಟ್ಟು, ಹ್ಯೂಮರಸ್‌ ಆಗಿ ಕಥೆಯನ್ನು ಹೇಳಲಾಗಿದೆ.

ಜಿ. ಎಸ್‌. ಕಾರ್ತಿಕ ಸುಧನ್

ಟಾಪ್ ನ್ಯೂಸ್

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.