ಇದು ಗಣಿ ಪುರಾಣ

ಕೆಲಸವಿಲ್ಲದ ಹುಡುಗನ ಸಾಹಸಗಾಥೆ

Team Udayavani, Sep 20, 2019, 5:00 AM IST

t-33

ಒಂದು ಚಿತ್ರದಲ್ಲಿ ಮೊದಲು ಗಮನ ಸೆಳೆಯುವುದು ಅದರ ಟೈಟಲ್‌. ಚಿತ್ರದ ಟೈಟಲ್‌ ಹೇಗಿದೆ ಎನ್ನುವುದರ ಮೇಲೆ ಪ್ರೇಕ್ಷಕರ ಅಭಿಪ್ರಾಯ ನಿರ್ಧಾರವಾಗುತ್ತ ಹೋಗುತ್ತದೆ. ಹಾಗಾಗಿಯೇ ಬಹುತೇಕರು ಆರಂಭದಲ್ಲೇ ಒಂದಷ್ಟು ಹೈಪ್‌ ಕ್ರಿಯೇಟ್‌ ಮಾಡಬೇಕೆಂಬ ಕಾರಣಕ್ಕೆ ಸಾಕಷ್ಟು ಅಳೆದು ತೂಗಿ ಚಿತ್ರಕ್ಕೆ ಟೈಟಲ್‌ ಇಡುತ್ತಾರೆ. ಆ ಮೂಲಕ ಒಂದಷ್ಟು ಸುದ್ದಿಯೂ ಆಗುತ್ತಾರೆ. ಇತ್ತೀಚೆಗೆ ಅಂಥದ್ದೇ ಒಂದು ಹೊಸಬರ ಚಿತ್ರ ತನ್ನ ಟೈಟಲ್‌ನಲ್ಲೇ ನಿಧಾನವಾಗಿ ಸುದ್ದಿಯಾಗುತ್ತಿದೆ. ಅಂದಹಾಗೆ, ಆ ಚಿತ್ರದ ಹೆಸರು “ನಮ್‌ ಗಣಿ ಬಿ.ಕಾಂ ಪಾಸ್‌’

ಕೆಲ ವರ್ಷಗಳಿಂದ ರಂಗಭೂಮಿಯಲ್ಲಿ ಸಕ್ರಿಯವಾಗಿರುವ, ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ ಅನುಭವವಿರುವ, ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿರುವ ಅಭಿಷೇಕ್‌ ಶೆಟ್ಟಿ “ನಮ್‌ ಗಣಿ ಬಿ.ಕಾಂ ಪಾಸ್‌’ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಅಲ್ಲದೆ ಈ ಚಿತ್ರದಲ್ಲಿ ನಾಯಕ ನಟನಾಗಿಯೂ ಅಭಿನಯಿಸುತ್ತಿದ್ದಾರೆ.

“ಹೆಸರೇ ಹೇಳುವಂತೆ, “ನಮ್‌ ಗಣಿ ಬಿ.ಕಾಂ ಪಾಸ್‌’ ಬಿ.ಕಾಂ ಮುಗಿಸಿದ ಗಣಿ ಎಂಬ ನಿರುದ್ಯೋಗಿ ಹುಡುಗನ ಕಥೆ. ಸುಮಾರು ಮೂರು ವರ್ಷಗಳ ಕಾಲ ಕೆಲಸವಿಲ್ಲದೆ ಇರುವ ಗಣಿ ಎಲ್ಲಾ ಕಡೆಗಳಿಂದಲೂ ಅಪಮಾನ, ಅವಮಾನಗಳನ್ನು ಎದುರಿಸುತ್ತಿರುತ್ತಾನೆ. ಮುಂದೆ ಗೆಳಯನೊಂದಿಗೆ ವ್ಯಾಪಾರ ಮಾಡಲು ಹತ್ತು ಲಕ್ಷ ಅವಶ್ಯವಾಗಿರುತ್ತದೆ. ನಂತರ ಆ ಹಣವನ್ನು ಗಣಿ ಯಾವ ರೀತಿ ಸಂಪಾದಿಸುತ್ತಾನೆ ಎನ್ನುವುದರ ಸುತ್ತ ಚಿತ್ರದ ಕಥೆ ನಡೆಯುತ್ತದೆ. ಇಡೀ ಚಿತ್ರವನ್ನು ಕಾಮಿಡಿ ಮತ್ತು ಥ್ರಿಲ್ಲರ್‌ ಅಂಶಗಳನ್ನು ಇಟ್ಟುಕೊಂಡು ತೆರೆಮೇಲೆ ತರುತ್ತಿದ್ದೇವೆ’ ಎಂದು ಚಿತ್ರದ ಬಗ್ಗೆ ವಿವರಣೆ ಕೊಡುತ್ತಾರೆ ನಿರ್ದೇಶಕ ಕಂ ನಾಯಕ ಅಭಿಷೇಕ್‌ ಶೆಟ್ಟಿ.

ಈ ಹಿಂದೆ “ಸೆಕೆಂಡ್‌ ಹಾಫ್’ ಚಿತ್ರವನ್ನು ನಿರ್ಮಿಸಿದ್ದ ಯು.ಎಸ್‌ ನಾಗೇಶ್‌ ಕುಮಾರ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ತಮ್ಮ ಮೊದಲ ಚಿತ್ರದಿಂದ ಸಾಕಷ್ಟು ನಷ್ಟ ಅನುಭವಿಸಿದ್ದ ನಿರ್ಮಾಪಕ ಯು.ಎಸ್‌ ನಾಗೇಶ್‌ ಕುಮಾರ್‌, ಕೆಲ ಕಾಲ ಚಿತ್ರರಂಗದ ಸಹವಾಸವೇ ಬೇಡವೆಂದು ದೂರವಿದ್ದರಂತೆ. ಈ ಬಗ್ಗೆ ಮಾತನಾಡುವ ನಿರ್ಮಾಪಕರು, “ನಿರ್ದೇಶಕರು ಕಥೆ ಹೇಳಿದಾಗ ಇಷ್ಟವಾಗಿ, ಎರಡನೇ ಬಾರಿ ಚಿತ್ರರಂಗದಲ್ಲಿ ಅದೃಷ್ಟ ಒಲಿಯಬಹುದೆಂಬ ಆಶಾಭಾವನೆಯಿಂದ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದೇನೆ. ಇದೊಂದು ಕಂಪ್ಲೀಟ್‌ ಎಂಟರ್‌ಟೈನ್ಮೆಂಟ್‌ ಚಿತ್ರ. ಚಿತ್ರದಲ್ಲಿ ಎಲ್ಲೂ ಡಬಲ್‌ ಮೀನಿಂಗ್‌ ಡೈಲಾಗ್‌ಗಳಿಲ್ಲ. ಚಿತ್ರ ನೋಡುಗರಿಗೆ ಇಷ್ಟವಾಗಲಿದೆ’ ಎಂಬ ವಿಶ್ವಾಸದ ಮಾತುಗಳನ್ನಾಡುತ್ತಾರೆ.

ಇನ್ನು “ನಮ್‌ ಗಣಿ ಬಿ.ಕಾಂ ಪಾಸ್‌’ ಚಿತ್ರದಲ್ಲಿ ಐಶಾನಿ ಶೆಟ್ಟಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ವಿಕಾಸ್‌ ವಸಿಷ್ಟ ಸಂಗೀತ ಸಂಯೋಜಿಸಿದ್ದಾರೆ. ಇತ್ತೀಚೆಗೆ ನಡೆದ “ನಮ್‌ ಗಣಿ ಬಿ.ಕಾಂ ಪಾಸ್‌’ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಅರ್ಜುನ್‌ ಪ್ರಶಸ್ತಿ ವಿಜೇತ ಶರತ್‌ ಗಾಯಕ್‌ವಾಡ್‌, ನಟ ಮುಖ್ಯಮಂತ್ರಿ ಚಂದ್ರು, ಹಿರಿಯ ನಿರ್ದೇಶಕ ಭಗವಾನ್‌, ರಜನಿಕಾಂತ್‌ ಗೆಳಯ ರಘುನಂದನ್‌ ಮುಂತಾದವರು ಉಪಸ್ಥಿತರಿದ್ದು, ಚಿತ್ರದ ಹಾಡುಗಳನ್ನು ಹೊರತಂದರು. ಇದೇ ಸಂದರ್ಭದಲ್ಲಿ ಹಿರಿಯ ನಟ ದೊಡ್ಡಣ್ಣ ಅವರಿಗೆ “ಸಕಲ ಕಲಾ ನಿಧಿ’ ಬಿರುದು ನೀಡಿ ಗೌರಸಲಾಯಿತು.

ಟಾಪ್ ನ್ಯೂಸ್

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.