ಜಗ್ಗಿ – ಜಾನುವಿನ ಪ್ರೇಮ ಪುರಾಣ
ಕುಂದಾಪುರದಿಂದ ನ್ಯೂ ಎಂಟ್ರಿ...
Team Udayavani, Sep 7, 2019, 5:45 AM IST
ಕಿರುಚಿತ್ರಕ್ಕೆ ಬರೆದ ಕಥೆ ಈಗ ಸಿನಿಮಾ ಆಗುತ್ತಿದೆ. ಹೌದು, ಹೊಸಬರೇ ಸೇರಿ ಮಾಡುತ್ತಿರುವ ಚಿತ್ರಕ್ಕೆ ‘ಜಗ್ಗಿ ಜೊತೆ ಜಾನು’ ಎಂದು ಹೆಸರಿಡಲಾಗಿದೆ. ಈ ಚಿತ್ರಕ್ಕೆ ಜಗನ್ನಾಥ್ ನಿರ್ದೇಶಕರು. ಅವರಿಗೆ ಇದು ಮೊದಲ ಅನುಭವ. ‘ಬಿಂಬ’ ಶಾಲೆಯ ವಿದ್ಯಾರ್ಥಿಯಾಗಿರುವ ಜಗನ್ನಾಥ್, ಈ ಮೂಲಕ ಒಂದು ಪ್ರೇಮಕಥೆ ಹಿಡಿದು ಬಂದಿದ್ದಾರೆ. ವಿಶೇಷವೆಂದರೆ, ಚಿತ್ರದ ಪೋಸ್ಟರ್‌ಗೆ ಶರಣ್ ಚಾಲನೆ ನೀಡಿದ್ದಾರೆ. ಹಾಗಂತ, ಚಿತ್ರೀಕರಣ ಶುರುವಾಗುತ್ತೆ ಅಂತಂದುಕೊಳ್ಳುವಂತಿಲ್ಲ. ಚಿತ್ರ ಈ ವರ್ಷದ ಅಂತ್ಯಕ್ಕೆ ಶುರುವಾಗುವ ಸಾಧ್ಯತೆ ಇದೆ.
ಇನ್ನು, ಚಿತ್ರದ ಶೀರ್ಷಿಕೆಯೇ ಹೇಳುವಂತೆ ಇದೊಂದು ಲವ್‌ಸ್ಟೋರಿ ಹೊಂದಿರುವ ಚಿತ್ರ. ಇಲ್ಲೂ ಪ್ರೀತಿ, ವಿರಹ, ವಿಷಾದ, ಭಾವುಕತೆ, ಸಾಹಸ, ಹಾಸ್ಯ ಇತ್ಯಾದಿ ಅಂಶಗಳು ಇರಲಿವೆ. ಚಿತ್ರಕ್ಕೆ ಕುಂದಾಪುರದ ಜೈ ಶೆಟ್ಟಿ ಹೀರೋ. ಅವರು ಆಡಿಟರ್ ಆಗಿ ಕೆಲಸ ಮಾಡುತ್ತಿದ್ದು, ಈ ಸಿನಿಮಾ ಮೂಲಕ ಹೀರೋ ಆಗುತ್ತಿದ್ದಾರೆ. ಲವರ್‌ಬಾಯ್ ಮತ್ತು ಜವಾಬ್ದಾರಿ ಇರುವ ಹುಡುಗನ ಪಾತ್ರದಲ್ಲಿ ಅವರು ನಟಿಸುತ್ತಿದ್ದಾರೆ. ಇನ್ನು, ವಿದ್ಯಾಜಯ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ನೀನಾಸಂ ಅಶ್ವಥ್ ಅವರು ಖಳನಟರಾಗಿ ನಟಿಸಿದರೆ, ಉಳಿದಂತೆ ‘ಕಾಕ್ರೋಚ್’ ಖ್ಯಾತಿಯ ಸುಧಿ, ಕೆಂಪೇಗೌಡ, ರಚಿಕಾ ಮುಂತಾದವರು ನಟಿಸುತ್ತಿದ್ದಾರೆ.
ಚಿತ್ರಕ್ಕೆ ರಾಜೀವ್ ಲೋಚನ್ ಕಥೆ ಬರೆದಿದ್ದಾರೆ. ಅವರು ಕಿರುಚಿತ್ರಕ್ಕೆ ಬರೆದ ಕಥೆ ಈಗ ಸಿನಿಮಾವಾಗುತ್ತಿದೆ. ಮಂಜುನಾಥ್ ಚಿತ್ರದ ಹಾಡುಗಳಿಗೆ ಸಂಗೀತ ನೀಡುತ್ತಿದ್ದಾರೆ. ಎಸ್.ನಾಗೇಂದ್ರ ಪ್ರಸಾದ್ ಸಂಕಲನವಿದೆ. ಕೌರವ ವೆಂಕಟೇಶ್ ಸಾಹಸವಿದೆ. ಧನ್‌ಕುಮಾರ್ ನೃತ್ಯ ನಿರ್ದೇಶನವಿದೆ. ಉಮೇಶ್.ಎಂ.ಕತ್ತಿ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಮುಂದಿನ ವರ್ಷ ಮೇ ತಿಂಗಳಲ್ಲಿ ಚಿತ್ರ ಬಿಡುಗಡೆ ಮಾಡುವ ಯೋಚನೆ ಚಿತ್ರತಂಡದ್ದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pro Kabaddi: ಪಾಟ್ನಾ-ಗುಜರಾತ್ ಟೈ
BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ
C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.