ಓಲ್ಡ್ ಮಾಂಕ್ ಬಹುತೇಕ ಪೂರ್ಣ
ಪೋಸ್ಟ್ ಪ್ರೊಡಕ್ಷನ್‌ನತ್ತ ಚಿತ್ರತಂಡ
Team Udayavani, Oct 23, 2020, 1:39 PM IST
ನಟ ಶ್ರೀನಿ ಅಭಿನಯಿಸಿ, ನಿರ್ದೇಶಿಸುತ್ತಿರುವ “ಓಲ್ಡ್ ಮಾಂಕ್’ ಚಿತ್ರದ ಎರಡನೇ ಹಂತದ ಚಿತ್ರೀಕರಣ ಇತ್ತೀಚೆಗೆ ಪೂರ್ಣಗೊಂಡಿದೆ. ಕೊರೊನಾ ಲಾಕ್‌ಡೌನ್ ಘೋಷಣೆಯಾಗುವ ಮುಂಚೆ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಳಿಸಿದ್ದ ಚಿತ್ರತಂಡ, ಲಾಕ್ ಡೌನ್ ಸಡಿಲವಾದ ಬಳಿಕ ಎರಡನೇ ಹಂತದ ಚಿತ್ರೀಕರಣಕ್ಕೆ ಚಾಲನೆ ನೀಡಿತ್ತು.
ಇದೀಗ “ಓಲ್ಡ್ ಮಾಂಕ್’ ಚಿತ್ರದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯವಾಗಿದ್ದು, ಚಿತ್ರದ 60ರಷ್ಟುಚಿತ್ರೀಕರಣ ಸಂಪೂರ್ಣವಾಗಿದೆ. ಶ್ರೀನಿ ಅವರೊಂದಿಗೆ ನಾಯಕಿ ಅದಿತಿ, ಬಹುಭಾಷಾ ನಟ ಸುದೇವ್ ನಾಯರ್, ಹಿರಿಯ ನಟ ಎಸ್. ನಾರಾಯಣ್, ಸಿಹಿಕಹಿ ಚಂದ್ರು, ಆರ್.ಟಿ ರಮಾ, ಪಿ.ಡಿ ಸತೀಶ್ ಮೊದಲಾದವರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಈ ಬಗ್ಗೆ ಮಾತನಾಡುವ ನಾಯಕ ನಟ ಕಂ ನಿರ್ದೇಶಕ ಶ್ರೀನಿ, “ಸದ್ಯ ನಮ್ಮ ಚಿತ್ರದ ಬಹುತೇಕ ಚಿತ್ರೀಕರಣವನ್ನು ಬೆಂಗಳೂರು ಸುತ್ತಮುತ್ತವೇ ನಡೆಸಲಾಗಿದೆ. ಮೊದಲು ಚಿತ್ರದ ಕೆಲ ಭಾಗಗಳ ಶೂಟಿಂಗ್‌ಗಾಗಿ ಹೊರಗೆ ಹೋಗುವ ಪ್ಲಾನ್ ಇತ್ತು. ಆದ್ರೆ ಕೋವಿಡ್ ಬಂದ ನಂತರ ನಮ್ಮ ಶೂಟಿಂಗ್ ಪ್ಲಾನ್‌ನಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಳ್ಳಲಾಗಿದ್ದು, ಬಹುತೇಕ ಶೂಟಿಂಗ್ ಅನ್ನು ಬೆಂಗಳೂರು ಸುತ್ತಮುತ್ತಲೇ ನಡೆಸುತ್ತಿದ್ದೇವೆ. ಈಗಾಗಲೇ ಎರಡನೇ ಹಂತದ ಶೂಟಿಂಗ್ ಯಶಸ್ವಿಯಾಗಿ ಮುಗಿದಿದ್ದು, ಇದೇ ಅ. 25 ರಿಂದ ಕೊನೆಗೆ ಹಂತದ ಶೂಟಿಂಗ್ ಶುರು ಮಾಡುವ ಯೋಜನೆ ಹಾಕಿಕೊಂಡಿದ್ದೇವೆ’ ಎಂದು ಮಾಹಿತಿ ನೀಡಿದ್ದಾರೆ.
ಇದೇ ವೇಳೆ ನಿಧಾನವಾಗಿ ಚಿತ್ರದ ಪ್ರಮೋಶನ್ ಚಟುವಟಿಕೆಗಳಿಗೂ ಚಾಲನೆ ನೀಡಿರುವ, ಬೇರೆ ಬೇರೆ ಮಾರ್ಗಗಳ ಮೂಲಕ ಸಿನಿಪ್ರಿಯರನ್ನು ತಲುಪುವ ಕೆಲಸಮಾಡುತ್ತಿದೆ. ಸದ್ಯ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಮ್ಯಾಚ್‌ನಲ್ಲಿ, ಚಿತ್ರತಂಡ ಸಿಎಸ್‌ಕೆ ಮಾವ ವರ್ಸಸ್ ಆರ್‌ಸಿಬಿ ಅಳಿಯ ಅನ್ನೋ ವಿಡಿಯೋವನ್ನು ಸೋಶಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದು, ಈ ವಿಡಿಯೋ ಎಲ್ಲ ಕಡೆ ವೈರಲ್ ಆಗಿತ್ತು. ಇನ್ನು ದಸರಾ ಹಬ್ಬದ ವಿಶೇಷವಾಗಿ ನಾಯಕ ಶ್ರೀನಿ ಮತ್ತು ನಾಯಕಿ ಅದಿತಿ “ಕಾವ್ಯಾಂಜಲಿ’ ಧಾರಾವಾಹಿಯ ಮೂಲಕ ವಿಶೇಷ ಅತಿಥಿಗಳಾಗಿ ಕಿರುತೆರೆ ಪ್ರೇಕ್ಷಕರ ಮುಂದೆ ಬರಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.