ಹೊಸ ಚಿತ್ರಕ್ಕೆ ಪ್ರಜ್ವಲ್‌ ರೆಡಿ

Team Udayavani, Nov 6, 2020, 2:57 PM IST

ಹೊಸ ಚಿತ್ರಕ್ಕೆ ಪ್ರಜ್ವಲ್‌ ರೆಡಿ

ನಟ ಪ್ರಜ್ವಲ್‌ ದೇವರಾಜ್‌ ಅಭಿನಯದ “ಇನ್ಸ್‌ಪೆಕ್ಟರ್‌ ವಿಕ್ರಂ’ ಚಿತ್ರ ತೆರೆಗೆ ಬರಲು ತಯಾರಾಗುತ್ತಿದೆ. ಇದರ ನಡುವೆಯೇ ಪ್ರಜ್ವಲ್‌ ದೇವರಾಜ್‌ ಸದ್ದಿಲ್ಲದೆ ಹೊಸದೊಂದು ಚಿತ್ರಕ್ಕೆ ತಯಾರಿ ನಡೆಸುತ್ತಿದ್ದಾರೆ.

ಹೌದು, ಪಿ.ಸಿ ಶೇಖರ್‌ ನಿರ್ದೇಶನದ ಹೊಸಚಿತ್ರದಲ್ಲಿ ಪ್ರಜ್ವಲ್‌ ದೇವರಾಜ್‌ ನಾಯಕ ನಟನಾಗಿ ಅಭಿನಯಿಸುತ್ತಿದ್ದು, ಈ ಚಿತ್ರದಲ್ಲಿ ಪ್ರಜ್ವಲ್‌ ದೇವರಾಜ್‌ ಕ್ಯಾಬ್‌ ಡ್ರೈವರ್‌ ಪಾತ್ರದಲ್ಲಿಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಪಿ.ಸಿ ಶೇಖರ್‌ ನಿರ್ದೇಶನದ “ಅರ್ಜುನ’ ಚಿತ್ರದಲ್ಲಿ ಪ್ರಜ್ವಲ್‌ ದೇವರಾಜ್‌ ನಾಯಕನಾಗಿ ಕಾಣಿಸಿಕೊಂಡಿದ್ದರು. ಇದೀಗಎರಡನೇ ಬಾರಿ ಪಿ.ಸಿ ಶೇಖರ್‌ ಮತ್ತು ಪ್ರಜ್ವಲ್‌ಕಾಂಬಿನೇಷನ್‌ನಲ್ಲಿ ಈ ಹೊಸಚಿತ್ರ ಮೂಡಿಬರುತ್ತಿದ್ದು, ಚಿತ್ರದ ಟೈಟಲ್‌ ಇನ್ನಷ್ಟೇ ಘೋಷಣೆಯಾಗಬೇಕಿದೆ. ಈ ಮೊದಲು ರಾಗಿಣಿ ಅಭಿನಯದ “ದಿ ಟೆರರಿಸ್ಟ್‌’ ಚಿತ್ರವನ್ನು ನಿರ್ಮಿಸಿದ್ದ ಅಲಂಕಾರ್‌ ಸಂತಾನ್‌ ಈ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ.

ತಮ್ಮ ಹೊಸಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಪಿ.ಸಿ ಶೇಖರ್‌, “ನಾಲ್ಕು ಗಂಟೆಯಲ್ಲಿ ನಡೆಯುವ ಘಟನೆಯೊಂದನ್ನು ಈ ಸಿನಿಮಾದ ಮೂಲಕ ಸ್ಕ್ರೀನ್‌ ಮೇಲೆ ತರುತ್ತಿದ್ದೇವೆ. ಇದೊಂದು ಸಸ್ಪೆನ್ಸ್‌ – ಥ್ರಿಲ್ಲರ್‌ಕಥಾಹಂದರದ ಸಿನಿಮಾ.ಕನ್ನಡದಲ್ಲಿ ನಾನುಕಂಡಂತೆ ಇಲ್ಲಿಯವರೆಗೆ ಈ ಥರದಕಥೆ ಇಟ್ಟುಕೊಂಡು ಯಾವುದೇ ಸಿನಿಮಾ ಬಂದಿಲ್ಲ.ಕನ್ನಡ ಆಡಿಯನ್ಸ್‌ಗೆ ಇದೊಂದು ಹೊಸ ಥರದ ಸಿನಿಮಾ ಆಗಲಿದೆ. ಇದರಲ್ಲಿ ಪ್ರಜ್ವಲ್‌ಕ್ಯಾಬ್‌ ಡ್ರೈವರ್‌ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಸಿನಿಮಾದಕಥೆಕೇಳಿದ ಪ್ರಜ್ವಲ್‌ ಖುಷಿಯಿಂದ ಈ ಪಾತ್ರ ಮಾಡಲು ಒಪ್ಪಿಕೊಂಡಿದ್ದಾರೆ. ಈಗಾಗಲೇ ಈ ಸಿನಿಮಾದ ಸ್ಕ್ರಿಪ್ಟ್ ಮತ್ತಿತರಕೆಲಸಗಳು ಪೂರ್ಣಗೊಂಡಿದ್ದು, ಡಿಸೆಂಬರ್‌ಕೊನೆಗೆ ಅಥವಾ ಜನವರಿ ವೇಳೆಗೆ ಸಿನಿಮಾದ ಶೂಟಿಂಗ್‌ ಶುರುವಾಗಲಿದೆ. ಚಿತ್ರದ ಬಹುತೇಕ ಚಿತ್ರೀಕರಣ ಬೆಂಗಳೂರಿನಲ್ಲೇ ನಡೆಯಲಿದೆ’ ಎಂದು ಮಾಹಿತಿ ನೀಡಿದ್ದಾರೆ. ಸದ್ಯ ಈ ಚಿತ್ರದ ಪ್ರೀ-ಪ್ರೊಡಕ್ಷನ್‌ಕೆಲಸಗಳು ಭರದಿಂದ ನಡೆಯುತ್ತಿದ್ದು, ಚಿತ್ರದ ಟೈಟಲ್‌, ನಾಯಕಿ, ಇತರಕಲಾವಿದರು ಮತ್ತು ತಂತ್ರಜ್ಞರ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಹೊರಬರಬೇಕಿದೆ. ಒಟ್ಟಾರೆ ಇಲ್ಲಿಯವರೆಗೆ ಹಲವು ಪಾತ್ರಗಳನ್ನು ನಿರ್ವಹಿಸಿರುವ ಪ್ರಜ್ವಲ್‌ ಹೊಸ ಚಿತ್ರದಲ್ಲಿಕ್ಯಾಬ್‌ ಡ್ರೈವರ್‌ ಗೆಟಪ್‌ನಲ್ಲಿ ಹೇಗೆ ಕಾಣಲಿದ್ದಾರೆ ಅನ್ನೋದು ಈ ಚಿತ್ರ ತೆರೆಗೆ ಬಂದ ಮೇಲಷ್ಟೇ ಗೊತ್ತಾಗಲಿದೆ.

ಟಾಪ್ ನ್ಯೂಸ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.