ಶ್ರುತಿ ಹಿರಿ ಕನಸು : ಇದು ಪ್ರತಿ ಕುಟುಂಬದ ಕಥೆ

Team Udayavani, Apr 26, 2019, 12:07 PM IST

Suchi-Shruthi

ಶ್ರುತಿ ನಾಯ್ಡು – ಕಿರುತೆರೆಯಲ್ಲಿ ದೊಡ್ಡ ಹೆಸರು. ಹಲವಾರು ಧಾರಾವಾಹಿಗಳ ನಿರ್ಮಾಣ, ನಿರ್ದೇಶನದ ಮೂಲಕ ಮನೆಮಂದಿಯನ್ನು ತಲುಪಿದ್ದಾರೆ. ಇವತ್ತಿನ ಟ್ರೆಂಡ್‌ಗೆ ತಕ್ಕಂತಹ ಕಥೆಗಳ ಮೂಲಕ ಹೊಸತನವನ್ನು ನೀಡುತ್ತಾ ಬರುತ್ತಿರುವ ಶ್ರುತಿ ಈಗ ನಿರೀಕ್ಷೆ ಕಂಗಳೊಂದಿಗೆ ಎದುರು ನೋಡುತ್ತಿದ್ದಾರೆ. ಅದಕ್ಕೆ ಕಾರಣ “ಪ್ರೀಮಿಯರ್‌ ಪದ್ಮಿನಿ’. ಇದು ಶ್ರುತಿ ನಾಯ್ಡು ನಿರ್ಮಾಣದ ಮೊದಲ ಚಿತ್ರ. ಚಿತ್ರ ಇಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಸಿನಿಮಾದ ಹಾಡು, ಟ್ರೇಲರ್‌ ಹಿಟ್‌ ಆಗಿದ್ದು, ಸಿನಿಮಾವನ್ನು ಕೂಡಾ ಪ್ರೇಕ್ಷಕರು ಸ್ವೀಕರಿಸುತ್ತಾರೆಂಬ ವಿಶ್ವಾಸವಿದೆ.

ಎಲ್ಲಾ ಓಕೆ, ಇಷ್ಟು ವರ್ಷ ಕಿರುತೆರೆಯಲ್ಲಿ ಬಿಝಿಯಾಗಿದ್ದ ಶ್ರುತಿ, ಏಕಾಏಕಿ ಹಿರಿತೆರೆಗೆ ಬಂದು ಸಿನಿಮಾ ಮಾಡಲು ಕಾರಣವೇನು ಎಂದು ನೀವು ಕೇಳಬಹುದು. ಅದಕ್ಕೆ ಕಾರಣ, ಕಥೆ. “ಕೆಲವೊಮ್ಮೆ ಕನ್ನಡ ಚಿತ್ರಗಳು ಅರ್ಧಕ್ಕೆ ನಿಂತು ಹೋಗೋದನ್ನು ನೋಡಿ, ನಮಗ್ಯಾಕೆ ಸಿನಿಮಾ ಕೆಲಸ. ನಾವು ಸೀರಿಯಲ್‌ನಲ್ಲಿ ಸೇಫ್ ಆಗಿದ್ದೀವಿ ಎಂದು ಅನಿಸುತ್ತಿತ್ತು. ಆದರೆ, ರಮೇಶ್‌ ಇಂದಿರಾ ಅವರ ಕಥೆ ಕೇಳಿ ಖುಷಿಯಾಯಿತು. ನಮ್ಮ ಧಾರಾವಾಹಿಗಳು ಹೇಗೆ ಜನರಿಗೆ ಕನೆಕ್ಟ್ ಆಗುತ್ತವೋ, ಈ ಕಥೆ ಕೂಡಾ ಹಾಗೇ ಇದೆ. ಜೊತೆಗೆ ಸಿನಿಮಾ ಮಾಡಲು ದೊಡ್ಡ ಬಜೆಟ್‌ ಕೂಡಾ ಬೇಕಿರಲಿಲ್ಲ. ಈ ಕಾರಣದಿಂದ ಸಿನಿಮಾ ಮಾಡಲು ಮುಂದಾದೆ. ನನ್ನ ಈ ಪ್ರಯತ್ನಕ್ಕೆ ಜಗ್ಗೇಶ್‌ರಿಂದ ಹಿಡಿದು ಇಡೀ ತಂಡ ಬೆಂಬಲ ಕೊಟ್ಟಿತು. ಹಾಗಾಗಿಯೇ ಸಿನಿಮಾ ಚೆನ್ನಾಗಿ ಮೂಡಿಬಂದಿದೆ’ ಎನ್ನುವುದು ಶ್ರುತಿ ಮಾತು.

ಧಾರಾವಾಹಿ ಹಾಗೂ ಸಿನಿಮಾಕ್ಕೆ ಸಾಕಷ್ಟು ವ್ಯತ್ಯಾಸವಿದೆ ಎನ್ನುವುದು ಶ್ರುತಿ ಅವರಿಗೆ “ಪ್ರೀಮಿಯರ್‌ ಪದ್ಮಿನಿ’ಯಲ್ಲಿ ಗೊತ್ತಾಗಿದೆ. “ಧಾರಾವಾಹಿ ಮಾಡುವಾಗ ನಮಗೆ ಸಾಕಷ್ಟು ಸಮಯವಿರುತ್ತದೆ. ಒಂದು ವಾರ ರೇಟಿಂಗ್‌ ಬಿದ್ದರೆ ಕೂಡಲೇ ಬೇರೇನೋ ಸೀನ್‌ ಕ್ರಿಯೇಟ್‌ ಮಾಡಿ, ಮತ್ತೆ ಟ್ರ್ಯಾಕ್‌ಗೆ ತರಬಹುದು. ಅದೇ ಸಿನಿಮಾದಲ್ಲಿ ಒಮ್ಮೆ ಚಿತ್ರೀಕರಣವಾಗಿ ಥಿಯೇಟರ್‌ಗೆ ಬಂದ ಮೇಲೆ ಮುಗಿಯಿತು. ಹಾಗಾಗಿ, ತುಂಬಾ ಎಚ್ಚರಿಕೆಯಿಂದ ಕಥೆ ಮಾಡಬೇಕಾಗುತ್ತದೆ’ ಎನ್ನುವ ಶ್ರುತಿ ಅವರಿಗೆ ಸಿನಿಮಾ ನಿರ್ಮಾಣ ಕಷ್ಟವಾಗಲಿಲ್ಲವಂತೆ. “ನಾನು 12 ವರ್ಷಗಳಿಂದ ನಿರ್ಮಾಣ ಮಾಡುತ್ತಿದ್ದೇನೆ. ಹಾಗಾಗಿ, ಕಷ್ಟವಾಗಲಿಲ್ಲ. ಸಿನಿಮಾದಲ್ಲಿ ಯಾವುದಕ್ಕೂ ಕಾಂಪ್ರಮೈಸ್‌ ಆಗಿಲ್ಲ. ಅದ್ಧೂರಿ­ಯಾಗಿಯೇ ಮಾಡಿದ್ದೇವೆ’ ಎನ್ನುತ್ತಾರೆ.

ಇನ್ನು, “ಪ್ರೀಮಿಯರ್‌ ಪದ್ಮಿನಿ’ ಚಿತ್ರ ಎಲ್ಲರಿಗೂ ಬೇಗನೇ ಕನೆಕ್ಟ್ ಆಗುತ್ತದೆ ಎನ್ನಲು ಅವರು ಮರೆಯುವುದಿಲ್ಲ. “ಈಗ ಫ್ಯಾಮಿಲಿ ಜೊತೆಯಾಗಿ ಕುಳಿತು ನೋಡುವ ಸಿನಿಮಾಗಳು ಅಪರೂಪವಾಗುತ್ತಿವೆ. ಆದರೆ, “ಪ್ರೀಮಿಯರ್‌ ಪದ್ಮಿನಿ’ ಪಕ್ಕಾ ಫ್ಯಾಮಿಲಿ ಡ್ರಾಮಾ. ಜೀವನದ ಪ್ರತಿ ಅಂಶಗಳನ್ನು ತುಂಬಾ ಮನರಂಜನಾತ್ಮಕವಾಗಿ ಹೇಳಿದ್ದೇವೆ’ ಎನ್ನುತ್ತಾರೆ.

ತಮ್ಮ ಬಣ್ಣದ ಲೋಕದ ಜರ್ನಿಯ ಬಗ್ಗೆ ಮಾತನಾಡುವ ಶ್ರುತಿ, “ನಾನು ಇವತ್ತು ಇಷ್ಟೊಂದು ಧಾರಾವಾಹಿಗಳನ್ನು ಮಾಡಲು ಕಾರಣ ಎಲ್ಲರ ಪ್ರೋತ್ಸಾಹ. ಪ್ರತಿ ಸನ್ನಿವೇಶಗಳು ನನಗೆ ಪೂರಕವಾಗಿದ್ದವು. ಜೊತೆಗೆ ವ್ಯಕ್ತಿಗಳು ಕೂಡಾ ಪ್ರೋತ್ಸಾಹ ಕೊಟ್ಟರು. ಆ ಕಾರಣದಿಂದ ಯಶಸ್ವಿಯಾಗಿ ಎಲ್ಲವನ್ನು ನಿಭಾಹಿಸಲು ಸಾಧ್ಯವಾಯಿತು’ ಎನ್ನುವುದು ಶ್ರುತಿ ಮಾತು.

ಟಾಪ್ ನ್ಯೂಸ್

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

Bengaluru: ಕೌಟುಂಬಿಕ ಕಾರಣಕ್ಕೆ ಲಾರಿ ಉದ್ಯಮಿ ಆತ್ಮಹತ್ಯೆ

Bengaluru: ಕೌಟುಂಬಿಕ ಕಾರಣಕ್ಕೆ ಲಾರಿ ಉದ್ಯಮಿ ಆತ್ಮಹತ್ಯೆ

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

5

New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.