ಪ್ರಿಯಾಂಕಾ ಉಗ್ರಾವತಾರ ಮತ್ತೆ ಖಾಕಿ ಖದರ್‌

Team Udayavani, Oct 9, 2020, 1:47 PM IST

cinema-tdy-5

ಈ ಹಿಂದೆ “ಸೆಕೆಂಡ್‌ ಹಾಫ್’ ಚಿತ್ರದಲ್ಲಿ ಖಾಕಿ ತೊಟ್ಟು ಅಬ್ಬರಿಸಿದ್ದ ನಟಿ ಪ್ರಿಯಾಂಕಾ ಉಪೇಂದ್ರ ಈಗ ಮತ್ತೂಮ್ಮ ಖಾಕಿ ತೊಟ್ಟು ತೆರೆಮೇಲೆ ಅಬ್ಬರಿಸಲು ರೆಡಿಯಾಗುತ್ತಿದ್ದಾರೆ.

ಹೌದು, ಪ್ರಿಯಾಂಕಾ ಉಪೇಂದ್ರ ಸದ್ಯ “ಉಗ್ರಾವತಾರ’ ಚಿತ್ರದಲ್ಲಿ ಅಭಿನಯಿಸುತ್ತಿದ್ದು, ಇದರಲ್ಲಿ ಖಾಕಿ ತೊಟ್ಟು ಖಡಕ್‌ ಇನ್ಸ್‌ಪೆಕ್ಟರ್‌ ಶ್ರೀದುರ್ಗಿ ಆಗಿ ತೆರೆಮೇಲೆಕಾಣಿಸಿಕೊಂಡಿದ್ದಾರೆ. ಸದ್ಯ ಈ ಚಿತ್ರದ ಮುಕ್ಕಾಲು ಭಾಗದಷ್ಟು ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರತಂಡ, ಇತ್ತೀಚೆಗೆ ಚಿತ್ರದಲ್ಲಿ ಬರುವ ಪ್ರಿಯಾಂಕಾ ಅವರ ಆ್ಯಕ್ಷನ್‌ ದೃಶ್ಯಗಳನ್ನು ಬೆಂಗಳೂರಿನ ಹೆಚ್‌ಎಂಟಿ ಫ್ಯಾಕ್ಟರಿಯಲ್ಲಿ ಸೆರೆಹಿಡಿದಿದೆ.

ಇನ್ನೊಂದು ವಿಶೇಷವೆಂದರೆ, ಈ ಸಾಹಸ ದೃಶ್ಯದ ಚಿತ್ರೀಕರಣದಲ್ಲಿ ನಟಿ ಪ್ರಿಯಾಂಕಾ ಉಪೇಂದ್ರ, ಸನ್ನಿವೇಶಗಳು ನೈಜವಾಗಿ ಮೂಡಿಬರ ಬೇಕೆಂಬ ಕಾರಣಕ್ಕೆ ಸಾಹಸ ಸಂಯೋಜಕ ರವಿ ಅವರಿಂದ ವಿಶೇಷಆ್ಯಕ್ಷನ್‌ ತರಬೇತಿ ಪಡೆದುಕೊಂಡು, ಕ್ಯಾಮರಾ ಮುಂದೆ ಯಾವುದೇ ಡ್ಯೂಪ್‌ ಬಳಸದೇ ಸುಲಲಿತವಾಗಿ ಹೊಡೆದಾಡಿದ್ದಾರಂತೆ. “ಎಂ.ಕೆ ಪಿಕ್ಚರ್’ ಬ್ಯಾನರ್‌ ಅಡಿಯಲ್ಲಿ ಚಿಕ್ಕಾಬಳ್ಳಾಪುರದ ರಿಯಲ್‌ ಎಸ್ಟೇಟ್‌ ಉದ್ಯಮಿ ಮುನಿಕೃಷ್ಣ ಅವರು ಬಂಡವಾಳ ಹೂಡಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನವ ನಿರ್ದೇಶಕ ಗುರುಮೂರ್ತಿ ಆ್ಯಕ್ಷನ್‌-ಕಟ್‌ ಹೇಳುತ್ತಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಗುರುಮೂರ್ತಿ, “ಇಲ್ಲಿಯವರೆಗೆ ಪ್ರಿಯಾಂಕಾ ಉಪೇಂದ್ರ ಎಲ್ಲೂಕಾಣಿಸಿಕೊಳ್ಳದಂತಹ, ಹೊಸಡಿಫ‌ರೆಂಟ್‌ ಗೆಟಪ್‌ನಲ್ಲಿ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದರಲ್ಲಿ ಪ್ರಿಯಾಂಕಾ ಅವರದ್ದು ರಫ್ ಆ್ಯಂಡ್‌ ಟಫ್ ಪೊಲೀಸ್‌ ಆಫೀಸರ್‌ ಪಾತ್ರ. ಮರ್ಡರ್‌ ಮಿಸ್ಟರಿ ಇರುವ ಈ ಕಥೆ ಅತ್ಯಾಚಾರವೊಂದರ ಸುತ್ತ ಸಾಗುತ್ತದೆ. ಸಿನಿಮಾದ ಕೊನೆಯಲ್ಲಿ, ರಸ್ತೆಯಲ್ಲಿ ಹುಡುಗಿ ಯೊಬ್ಬಳು ಹೋಗುವಾಗ ಆಕೆಯನ್ನು ಗೌರವದಿಂದಕಾಣಿರಿ ಎನ್ನುವ ಮೆಸೇಜ್‌ ಕೂಡ ಇದೆ’ ಎಂದು ವಿವರಣೆಕೊಡುತ್ತಾರೆ.

“ಉಗ್ರಾವತಾರ’ ಚಿತ್ರದಲ್ಲಿ ಪ್ರಿಯಾಂಕಾ ಉಪೇಂದ್ರ ಅವರೊಂದಿಗೆ ನವ ಪ್ರತಿಭೆ ನಿಸರ್ಗ,ಕಾಕ್ರೋಚ್‌ ಸುಧಿ ಮೊದಲಾ ದವರು ಇತರ ಪ್ರಮುಖ ಪಾತ್ರಗಳಲ್ಲಿಅಭಿನಯಿಸಿದ್ದಾರೆ. ಇವರೊಂದಿಗೆ ಚಿತ್ರದ ಇನ್ನೊಂದು ಪ್ರಮುಖ ಪಾತ್ರಕ್ಕೆಬಹುಭಾಷಾ ನಟ ಸುಮನ್‌, ಜಾಕಿ ಶ್ರಾಫ್ ಅಥವಾ ಆಶಿಷ್‌ ವಿದ್ಯಾರ್ಥಿ ಅವರನ್ನು ಕರೆತಂದು ನಟಿಸುವ ಯೋಚನೆಯಲ್ಲಿದೆ ಚಿತ್ರತಂಡ. ಚಿತ್ರದ 4 ಹಾಡುಗಳಿಗೆ ಕಿನ್ನಾಳ್‌ ರಾಜ್‌ ಸಾಹಿತ್ಯವಿದ್ದು, ರಾಧಾಕೃಷ್ಣ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ. ಚಿತ್ರಕ್ಕೆ ನಂದಕುಮಾರ್‌ ಛಾಯಾಗ್ರಹಣ ವಿದೆ. ಸದ್ಯ “ಉಗ್ರಾವತಾರ’ ಚಿತ್ರದ ಶೂಟಿಂಗ್‌ ಮತ್ತು ಪೋಸ್ಟ್‌ ಪ್ರೊಡಕ್ಷನ್‌ಕೆಲಸಗಳಲ್ಲಿ ನಿರತವಾಗಿರುವ ಚಿತ್ರತಂಡ, ಮುಂದಿನ ತಿಂಗಳು ನಟಿ ಪ್ರಿಯಾಂಕಾ ಉಪೇಂದ್ರ ಅವರ ಹುಟ್ಟಹಬ್ಬಕ್ಕೆ ಚಿತ್ರದ ಮೊದಲ ಟ್ರೇಲರ್‌ ಬಿಡುಗಡೆ ಮಾಡಲು ಪ್ಲಾನ್‌ ಹಾಕಿಕೊಂಡಿದೆ.

ಜಿ. ಎಸ್‌. ಕಾರ್ತಿಕ ಸುಧನ್‌

ಟಾಪ್ ನ್ಯೂಸ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.