ರಫ್ ಆ್ಯಂಡ್ ಟಫ್ “ಉಗ್ರಾವತಾರ’
Team Udayavani, Mar 18, 2022, 12:56 PM IST
ನಟಿ ಪ್ರಿಯಾಂಕಾ ಉಪೇಂದ್ರ ಅವರನ್ನು ಇಲ್ಲಿಯವರೆಗೆ, ಗ್ಲಾಮರಸ್ ಮತ್ತು ಹೋಮ್ಲಿ ಪಾತ್ರಗಳಲ್ಲಿ ನೋಡಿರುತ್ತೀರಿ. ತನ್ನ ಅಂದ ಮತ್ತು ಅಭಿನಯದ ಮೂಲಕ ಸಿನಿಪ್ರಿಯರ ಮನ ಸೆಳೆದಿರುವ ಪ್ರಿಯಾಂಕಾ, ಇದೇ ಮೊದಲ ಬಾರಿಗೆ “ಉಗ್ರಾವತಾರ’ ಚಿತ್ರದಲ್ಲಿ ಖಡಕ್ ಖಾಕಿ ತೊಟ್ಟು, ಔಟ್ ಆ್ಯಂಡ್ ಔಟ್ ಆ್ಯಕ್ಷನ್ ಲುಕ್‌ನಲ್ಲಿ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ.
ಇಲ್ಲಿಯವರೆಗೆ ಹಲವು ಸಿನಿಮಾಗಳಲ್ಲಿ ವಿಭಿನ್ನ ಗೆಟಪ್‌ನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಉಪೇಂದ್ರ, ಇದೇ ಮೊದಲ ಬಾರಿಗೆ “ಉಗ್ರಾವತಾರ’ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಯಾಗಿ ಔಟ್ ಆ್ಯಂಡ್ ಔಟ್ ಆ್ಯಕ್ಷನ್ ಗೆಟಪ್‌ನಲ್ಲಿ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ.
ಅಂದಹಾಗೆ, “ಉಗ್ರಾವತಾರ’ ಸಿನಿಮಾದಲ್ಲಿ ಪ್ರಿಯಾಂಕಾ ಅವರದ್ದು ರಫ್ ಆ್ಯಂಡ್ ಟಫ್ ಪೊಲೀಸ್ ಅಧಿಕಾರಿಯ ಪಾತ್ರ. ಸಮಾಜದಲ್ಲಿ ನಡೆಯುವ ಅನಾಚಾರ ಮತ್ತು ಅನೈತಿಕ ಕೃತ್ಯಗಳ ವಿರುದ್ದ ದಕ್ಷ ಮತ್ತು ಪ್ರಾಮಾಣಿಕ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬಳು ಹೇಗೆ ದಿಟ್ಟತನದಿಂದ ಹೋರಾಡಿ, ಶತ್ರುಗಳ ಹೆಡೆಮುರಿ ಕಟ್ಟುತ್ತಾಳೆ ಅನ್ನೋದು ಚಿತ್ರದ ಕಥೆಯ ಒಂದು ಎಳೆ.
ಇದನ್ನೂ ಓದಿ:ವಿಭಿನ್ನ ಪಾತ್ರಗಳ ಖುಷಿಯಲ್ಲಿ ಜಗ್ಗೇಶ್
ಸುಮಾರು ಒಂದೂವರೆ ದಶಕಗಳ ಕಾಲ ಚಿತ್ರರಂಗದಲ್ಲಿ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವವಿರುವ ಗುರುಮೂರ್ತಿ “ಉಗ್ರಾವತಾರ’ ಚಿತ್ರಕ್ಕೆ ಕಥೆ, ಚಿತ್ರಕಥೆ, ನಿರ್ದೇಶನ ಮಾಡಿದ್ದಾರೆ.
ಚಿತ್ರದ ಕಥಾಹಂದರದ ಬಗ್ಗೆ ಮಾತನಾಡುವ ನಿರ್ದೇಶಕ ಗುರುಮೂರ್ತಿ, “ಇತ್ತೀಚಿನ ವರ್ಷಗಳಲ್ಲಿ ಸಮಾಜದಲ್ಲಿ ನಡೆದ, ಆಗಾಗ್ಗೆ ವರದಿಯಾಗುವ ಹತ್ತಾರು ನೈಜ ಘಟನೆಗಳನ್ನು ಸ್ಫೂರ್ತಿ ಯಾಗಿಟ್ಟುಕೊಂಡು “ಉಗ್ರಾವತಾರ’ ಸಿನಿಮಾವನ್ನು ತೆರೆಗೆ ತರಲಾಗುತ್ತಿದೆ. ಒಂದಷ್ಟು ಮನರಂಜನಾತ್ಮಕ ಅಂಶಗಳನ್ನು ಇಟ್ಟುಕೊಂಡು, ಸಾಮಾಜಿಕ ಜಾಗೃತಿ ಮತ್ತು ಸಂದೇಶ ನೀಡುವಂಥ ಕಥೆಯನ್ನು ಸಿನಿಮಾದಲ್ಲಿ ಹೇಳುತ್ತಿದ್ದೇವೆ’ ಎನ್ನುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi pollution; ಹಾಳಾದ ರಸ್ತೆಗಳನ್ನು ಸರಿಪಡಿಸುವಲ್ಲಿ ಆಪ್ ವಿಫಲ: ಬಿಜೆಪಿ ವಾಗ್ದಾಳಿ
Deepawali; ಸರಣಿ ರಜೆ :ಹಂಪಿಯಲ್ಲಿ ಪ್ರವಾಸಿಗರ ದಂಡು, ಪರದಾಟ!
Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ
Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ
Kulgeri Cross; ನಾಡಿನಲ್ಲಿಯೇ ಪ್ರಥಮ…ತಾಯಿ ಭುವನೇಶ್ವರಿ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.