ಸೈಕಲಾಜಿಕಲ್ ಥ್ರಿಲ್ಲರ್: ಸ್ಟ್ರೈಕರ್ ಆಟ ಶುರು
Team Udayavani, Feb 22, 2019, 12:30 AM IST
ಇತ್ತೀಚೆಗಷ್ಟೇ ಟ್ರೇಲರ್ ಮೂಲಕ ಸಿನಿಪ್ರಿಯರ ಗಮನ ಸೆಳೆಯುತ್ತಿರುವ “ಸ್ಟ್ರೈಕರ್’ ಚಿತ್ರ ಇದೇ ಶುಕ್ರವಾರ ತೆರೆಗೆ ಬರುತ್ತಿದೆ. ಚಿತ್ರದ ಬಿಡುಗಡೆಗೂ ಮುನ್ನ ಪತ್ರಕರ್ತರು ಮತ್ತು ಮಾಧ್ಯಮಗಳ ಮುಂದೆ ಬಂದಿದ್ದ “ಸ್ಟ್ರೈಕರ್’ ಚಿತ್ರತಂಡ, ಚಿತ್ರದ ವಿಶೇಷತೆಗಳು, ಬಿಡುಗಡೆಯ ತಯಾರಿ ಮತ್ತಿತರ ವಿಷಯಗಳ ಬಗ್ಗೆ ಮಾತನಾಡಿತು.
ಚಿತ್ರದ ಕಥಾಹಂದರದ ಬಗ್ಗೆ ಮಾತನಾಡಿದ ನಿರ್ದೇಶಕ ಪವನ್ ತ್ರಿವಿಕ್ರಮ್, “ಇದೊಂದು ಸೈಕಲಾಜಿಕಲ್ ಸಸ್ಪೆನ್ಸ್, ಥ್ರಿಲ್ಲರ್ ಚಿತ್ರ. ಕನಸನ್ನೇ ನಿಜ ಎಂದುಕೊಳ್ಳುವ ನಾಯಕ, ಅವನ ಜೀವನದಲ್ಲಿ ಬರುವ ಹಲವು ತಿರುವುಗಳು, ಜೊತೆಗೊಂದು ಲವ್‌ಸ್ಟೋರಿ, ಅದರ ನಡುವೆಯೇ ನಡೆಯುವ ಕ್ರೈಮ್ ಘಟನೆ. ಇವೆಲ್ಲವೂ “ಸ್ಟ್ರೈಕರ್’ ಚಿತ್ರದಲ್ಲಿದೆ. ಈ ಹಿಂದೆ ನಾನು ಕಂಡಿರುವ, ಕೇಳಿರುವ ಕೆಲವು ನೈಜಘಟನೆಗಳನ್ನು ಇಟ್ಟುಕೊಂಡು ಈ ಚಿತ್ರವನ್ನು ನಿರ್ದೇಶಿಸಿದ್ದೇನೆ’ ಎಂದು ಚಿತ್ರದ ಕಥೆಯ ಎಳೆಯನ್ನು ಬಿಚ್ಚಿಟ್ಟರು.
ನಟ ಪ್ರವೀಣ್ ತೇಜ್ ಚಿತ್ರ ಬದುಕಿನಲ್ಲಿ “ಸ್ಟ್ರೈಕರ್’ ವಿಭಿನ್ನ ಚಿತ್ರವಂತೆ. ಚಿತ್ರದಲ್ಲಿ ತಮ್ಮ ಪಾತ್ರದ ಬಗ್ಗೆ ಮಾತನಾಡುವ ಪ್ರವೀಣ್ ತೇಜ್, “ಇಲ್ಲಿಯವರೆಗೆ ನಾನು ಮಾಡಿರುವ ಚಿತ್ರಗಳಲ್ಲಿ ಕಾಲೇಜ್ ಹುಡುಗ, ಲವರ್ ಬಾಯ್ ಪಾತ್ರಗಳೇ ಹೆಚ್ಚಾಗಿದ್ದವು. ಆದ್ರೆ ಇದೇ ಮೊದಲ ಬಾರಿಗೆ ಈ ಚಿತ್ರದಲ್ಲಿ ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವ ಹುಡುಗನ ಪಾತ್ರ ಮಾಡಿದ್ದೇನೆ. ಒಂದು ಕಮರ್ಷಿಯಲ್ ಸಿನಿಮಾದಲ್ಲಿರುವ ಎಂಟರ್‌ಟೈನ್ಮೆಂಟ್ ಎಲಿಮೆಂಟ್ಸ್ ಎಲ್ಲವೂ “ಸ್ಟ್ರೈಕರ್‌ನಲ್ಲಿ’ದೆ. ಈ ಚಿತ್ರದಲ್ಲಿ ದೊಡ್ಡ ಗೆಲುವನ್ನು ನಿರೀಕ್ಷಿಸುತ್ತಿದ್ದೇನೆ’ ಎಂದರು.
“ಸ್ಟ್ರೈಕರ್’ ಚಿತ್ರದಲ್ಲಿ ನಾಯಕ ಪ್ರವೀಣ್ ತೇಜ್‌ಗೆ ನಾಯಕಿಯಾಗಿ ಶಿಲ್ಪಾ ಮಂಜುನಾಥ್ ಜೋಡಿಯಾಗಿದ್ದಾರೆ. ಉಳಿದಂತೆ, ಸೌರವ್ ಲೋಕಿ (ಭಜರಂಗಿ ಲೋಕಿ), ಧರ್ಮಣ್ಣ ಕಡೂರ್, ಅಶೋಕ್ ಮೊದಲಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರದಲ್ಲಿ ಎರಡು ಹಾಡುಗಳಿದ್ದು ಭರತ್ ಬಿ.ಜೆ. ಸಂಗೀತ ನೀಡಿ¨ªಾರೆ. “ಗರುಡಾದ್ರಿ ಆರ್ಟ್ಸ್’ ಬ್ಯಾನರ್ ಅಡಿಯಲ್ಲಿ ಉದ್ಯಮಿ ಶಂಕರಪ್ಪ, ಸುರೇಶ್ ಬಾಬು ಹಾಗೂ ರಮೇಶ್ ಬಾಬು ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿ¨ªಾರೆ. ಚಿತ್ರದ ವಿತರಣೆಯ ಹೊಣೆಯನ್ನು “ಜಯಣ್ಣ ಫಿಲಂಸ್’ ವಹಿಸಿಕೊಂಡಿದ್ದು “ಸ್ಟ್ರೈಕರ್’ ಚಿತ್ರ ರಾಜ್ಯಾದ್ಯಂತ ಸುಮಾರು ನೂರಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ತೆರೆಗೆ ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.