ಅಚ್ಚ ಕನ್ನಡಿಗರ ಸ್ವಚ್ಛ ಚಿತ್ರ…
Team Udayavani, Aug 9, 2019, 5:00 AM IST
‘ಡಾಟರ್ ಆಫ್ ಪಾರ್ವತಮ್ಮ’ ಮತ್ತು ‘ಸೂಜಿದಾರ’ ಚಿತ್ರಗಳ ನಂತರ ನಟಿ ಹರಿಪ್ರಿಯಾ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಮತ್ತೂಂದು ನಾಯಕಿ ಪ್ರಧಾನ ಚಿತ್ರ ‘ಕನ್ನಡ್ ಗೊತ್ತಿಲ್ಲ’ ತೆರೆಗೆ ಬರಲು ಸಿದ್ಧವಾಗುತ್ತಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿ ಸೆನ್ಸಾರ್ ಮುಂದಿರುವ ‘ಕನ್ನಡ್ ಗೊತ್ತಿಲ್ಲ’ ಚಿತ್ರದ ಮೊದಲ ಟೀಸರ್ ಅನ್ನು ಚಿತ್ರತಂಡ ಇತ್ತೀಚೆಗೆ ಬಿಡುಗಡೆ ಮಾಡಿದೆ.
‘ರಾಜಕುಮಾರ’ ಖ್ಯಾತಿಯ ನಿರ್ದೇಶಕ ಸಂತೋಷ್ ಆನಂದರಾಮ್ ‘ಕನ್ನಡ್ ಗೊತ್ತಿಲ್ಲ’ ಚಿತ್ರದ ಮೊದಲ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಇದೇ ವೇಳೆ ಮಾತನಾಡಿದ ಸಂತೋಷ್ ಆನಂದರಾಮ್, ‘ನನಗೆ ಈ ಚಿತ್ರತಂಡದಲ್ಲಿ ಯಾರೂ ಸ್ನೇಹಿತರಲ್ಲ. ಆದರೆ ಇದು ಕನ್ನಡದ ಚಿತ್ರ ಎನ್ನುವ ಅಭಿಮಾನದಿಂದ ಚಿತ್ರದ ಟೀಸರ್ ಬಿಡುಗಡೆ ಮಾಡಲು ಒಪ್ಪಿಕೊಂಡೆ. ಕನ್ನಡದ ಮೇಲಿನ ಅಭಿಮಾನ ಈ ಚಿತ್ರದ ಟೀಸರ್ ಬಿಡುಗಡೆಗೆ ಕರೆದುಕೊಂಡು ಬಂದಿದೆ.
‘ಕನ್ನಡ್ ಗೊತ್ತಿಲ್ಲ’ ಚಿತ್ರದ ಟೀಸರ್ ನೋಡಿ ಖುಷಿಯಾಯಿತು. ಟೀಸರ್ ತುಂಬಾ ಚೆನ್ನಾಗಿ ಬಂದಿದೆ. ಚಿತ್ರದಲ್ಲಿ ಏನಿರಬಹುದು ಎನ್ನುವ ಕುತೂಹಲವನ್ನು ಮೂಡಿಸುವಂತಿದೆ’ ಎಂದು ಟೀಸರ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು. ಖಾಸಗಿ ಎಫ್.ಎಂ ವಾಹಿನಿಯಲ್ಲಿ ರೇಡಿಯೋ ಜಾಕಿ ಆಗಿ ಕೇಳುಗರಿಗೆ ಪರಿಚಯವಿದ್ದ ಮಯೂರ್ ರಾಘವೇಂದ್ರ ‘ಕನ್ನಡ್ ಗೊತ್ತಿಲ್ಲ’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದ ಬಗ್ಗೆ ಮಾತನಾಡಿದ ಮಯೂರ್ ರಾಘವೇಂದ್ರ, ‘ನಾನು ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದಾಗ ನನ್ನ ಅನುಭವಕ್ಕೆ ಬಂದ, ನಾನು ಸನ್ನಿವೇಶಗಳೆ ‘ಕನ್ನಡ್ ಗೊತ್ತಿಲ್ಲ’ ಚಿತ್ರ ಮಾಡಲು ಕಾರಣವಾಯ್ತು. ಒಮ್ಮೆ ಮಧ್ಯರಾತ್ರಿ ಈ ಸಂಗತಿಗಳನ್ನೇ ಇಟ್ಟುಕೊಂಡು ಯಾಕೆ ಸಿನಿಮಾ ಮಾಡಬಾರದು ಅನ್ನೋ ಐಡಿಯಾ ಬಂತು.
ಮೊದಲು ಟೈಟಲ್ ಫ್ಲ್ಯಾಶ್ ಆಯಿತು. ಅದನ್ನು ಬರೆದಿಟ್ಟುಕೊಂಡು ನಂತರ ಚಿತ್ರದ ಕಥೆ ಶುರು ಮಾಡಿದೆ. ಇದೊಂದು ನಾಯಕಿ ಪ್ರಧಾನ ಚಿತ್ರ. ನನ್ನ ಕಥೆಗೆ ಕನ್ನಡದ ನಟಿಯರೇ ಬೇಕಾಗಿತ್ತು. ಆಗ ಹರಿಪ್ರಿಯಾ ಅವರನ್ನು ಅಪ್ರೋಚ್ ಮಾಡಿದೆ. ಕಥೆ ಕೇಳಿದ ಹರಿಪ್ರಿಯಾ ಕೂಡ ಇದರಲ್ಲಿ ನಟಿಸಲು ಒಪ್ಪಿದರು. ನಂತರ ಚಿತ್ರತಂಡಕ್ಕೆ ಒಬ್ಬೊಬ್ಬರಾಗಿ ಸೇರ್ಪಡೆಯಾದರು. ಅಂತಿಮವಾಗಿ ಎಲ್ಲವೂ ಅಂದುಕೊಂಡಂತೆ ನಡೆದು ಈಗ ‘ಕನ್ನಡ್ ಗೊತ್ತಿಲ್ಲ’ ಚಿತ್ರ ಬಿಡುಗಡೆಗೆ ಹಂತಕ್ಕೆ ಬಂದು ನಿಂತಿದೆ’ ಎಂದು ಚಿತ್ರದ ಬಗ್ಗೆ ಸವಿಸ್ತಾರವಾದ ಮಾಹಿತಿ ನೀಡಿದರು. ‘ಕನ್ನಡ್ ಗೊತ್ತಿಲ್ಲ’ ಚಿತ್ರಕ್ಕೆ ಗಿರಿಧರ್ ದಿವಾನ್ ಛಾಯಾಗ್ರಹಣ ಮತ್ತು ಸಂಕಲನವಿದೆ. ಚಿತ್ರದ ಹಾಡುಗಳಿಗೆ ನಕುಲ್ ಅಭ್ಯಂಕರ್ ಸಂಗೀತ ಸಂಯೋಜಿಸಿದ್ದಾರೆ. ಒಟ್ಟಾರೆ ಸಸ್ಪೆನ್ಸ್ ಕಂ ಕ್ರೈಂ -ಥ್ರಿಲ್ಲರ್ ಕಥಾಹಂದರದ ‘ಕನ್ನಡ್ ಗೊತ್ತಿಲ್ಲ’ ಚಿತ್ರ ಮುಂದಿನ ತಿಂಗಳ ವೇಳೆಗೆ ತೆರೆಗೆ ಬರುವ ಸಾಧ್ಯತೆ ಇದೆ.
ಜಿ.ಎಸ್.ಕಾರ್ತಿಕ ಸುಧನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.