ಭಾನು ಭೂಮಿ ಗಾನ ಲಹರಿ


Team Udayavani, Jul 5, 2019, 5:00 AM IST

30

ಕನ್ನಡ ಚಿತ್ರರಂಗದಲ್ಲಿ ಮೊದಲು ನಟ-ನಟಿಯರಾಗಿ ಗುರುತಿಸಿಕೊಂಡವರು ನಂತರ ಗಾಯಕರಾದ ಉದಾಹರಣೆ ಸಾಕಷ್ಟಿದೆ. ಈಗ ಈ ಸಾಲಿಗೆ ನಟ ರಂಗಾಯಣ ರಘು ಹೆಸರು ಕೂಡ ಸೇರ್ಪಡೆಯಾಗುತ್ತಿದೆ. ಹೌದು, ಇಲ್ಲಿಯವರೆಗೆ ಹತ್ತಾರು ಪಾತ್ರಗಳನ್ನು ಲೀಲಾಜಾಲವಾಗಿ ನಿರ್ವಹಿಸಿ ಸಿನಿಪ್ರಿಯರ ಮನ ಗೆದ್ದಿರುವ ನಟ ರಂಗಾಯಣ ರಘು ಈಗ ಗಾಯಕರಾಗುತ್ತಿದ್ದಾರೆ. ರಂಗಾಯಣ ರಘು ಇದೇ ಮೊದಲ ಬಾರಿಗೆ ‘ಭಾನು ವೆಡ್ಸ್‌ ಭೂಮಿ’ ಚಿತ್ರದ ಗೀತೆಯೊಂದಕ್ಕೆ ಧ್ವನಿ ನೀಡುವ ಮೂಲಕ ಗಾಯಕರಾಗಿದ್ದಾರೆ. ‘ಭಾನು ವೆಡ್ಸ್‌ ಭೂಮಿ’ ಚಿತ್ರದಲ್ಲಿ ಬರುವ ಗೌಸ್‌ಪೀರ್‌ ಸಾಹಿತ್ಯದ ‘ಕಲರ್‌ ಕಲರ್‌ ಕನಸುಗಳು…’ ಎಂಬ ಗೀತೆಯನ್ನು ರಘು ಹಾಡಿದ್ದು, ಎ.ಎಂ ನೀಲ್ ಈ ಹಾಡಿಗೆ ಸಂಗೀತ ಸಂಯೋಜಿಸಿದ್ದಾರೆ.

ಸದ್ಯ ತನ್ನ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಪೂರ್ಣಗೊಳಿಸಿರುವ ‘ಭಾನು ವೆಡ್ಸ್‌ ಭೂಮಿ’ ಚಿತ್ರತಂಡ ಚಿತ್ರದ ಪ್ರಮೋಶನ್‌ ಕೆಲಸಗಳಿಗೆ ಚಾಲನೆ ನೀಡಿದ್ದು, ಇತ್ತೀಚೆಗೆ ತನ್ನ ಹಾಡುಗಳನ್ನು ಬಿಡುಗಡೆಗೊಳಿಸಿದೆ. ‘ಭಾನು ವೆಡ್ಸ್‌ ಭೂಮಿ’ ಚಿತ್ರದ ನಾಯಕ ನಟ ಸೂರ್ಯಪ್ರಭು, ನಾಯಕಿ ರಶ್ಮಿತಾ ಮಲ್ನಾಡ್‌, ರಂಗಾಯಣ ರಘು, ಶೋಭರಾಜ್‌ ಸೇರಿದಂತೆ ಚಿತ್ರದ ಕಲಾವಿದರು ಮತ್ತು ತಂತ್ರಜ್ಞರ ಸಮ್ಮುಖದಲ್ಲಿ ಚಿತ್ರದ ಹಾಡುಗಳು ಬಿಡುಗಡೆಗೊಂಡವು.

ಇದೇ ವೇಳೆ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಜಿ.ಕೆ ಆದಿ, ‘ನಮ್ಮ ಸುತ್ತಮುತ್ತ ನಡೆಯುವ ಪಾತ್ರಗಳನ್ನೇ ಗಮನದಲ್ಲಿ ಇಟ್ಟುಕೊಂಡು ಈ ಚಿತ್ರವನ್ನು ಮಾಡಲಾಗಿದೆ. ಇಲ್ಲಿನ ಪಾತ್ರಗಳಿಗೆ ಯಾವುದೇ ಅಡಿಪಾಯವಿಲ್ಲ. ನಾವುಗಳು ಹೊರಗಡೆ ಬಂದಾಗ ಏನೇನು ಸಮಸ್ಯೆ ಎದುರಿಸುತ್ತೇವೆ ಅನ್ನೋದನ್ನೆ ಚಿತ್ರದಲ್ಲಿ ಹೇಳಿದ್ದೇವೆ. ಇದರಲ್ಲಿ ನವಿರಾದ ಪ್ರೇಮಕಥೆ ಇದೆ. ಎಮೋಶನ್‌ ಅಂಶಗಳಿವೆ. ಅದೆಲ್ಲ ಹೇಗೆ ಬಂದಿದೆ ಅನ್ನೋದನ್ನ ಥಿಯೇಟರ್‌ನಲ್ಲೇ ನೋಡಬೇಕು’ ಎಂದರು.

ಚಿತ್ರದ ನಾಯಕ ಪ್ರಭು ಸೂರ್ಯ ಸಭ್ಯ ಕುಟುಂಬದ ಹುಡುಗನಾಗಿ ಇಲ್ಲಿ ಕಾಣಿಸಿಕೊಂಡಿದ್ದಾರೆ. ತಮ್ಮ ಪಾತ್ರದ ಬಗ್ಗೆ ಮಾತನಾಡಿದ ಪ್ರಭು ಸೂರ್ಯ, ‘ಚಿತ್ರದಲ್ಲಿ ನಾನೊಬ್ಬ ಒಳ್ಳೆಯ ಮನೆತನದ ಹುಡುಗ, ಮದುವೆ ಬಗ್ಗೆ ಆಸಕ್ತಿ ಇರದ ನನಗೆ ಭೂಮಿ ಎನ್ನುವ ಹುಡುಗಿಯ ಪರಿಚಯವಾಗುತ್ತದೆ. ಮುಂದೆ ಅವಳು ನನಗೆ ದಕ್ಕುತ್ತಾಳಾ, ಇಲ್ಲವಾ ಎಂಬುದೇ ಚಿತ್ರದ ಒನ್‌ಲೈನ್‌ ಸ್ಟೋರಿ’ ಎಂದು ಪಾತ್ರ ಪರಿಚಯ ಮಾಡಿಕೊಟ್ಟರು. ಚಿತ್ರದ ನಾಯಕಿ ರಶ್ಮಿತಾ ಮಲ್ನಾಡ್‌ ಮಾತನಾಡಿ, ‘ಊರು ಬಿಟ್ಟು ಇನ್ನೊಂದು ಸ್ಥಳಕ್ಕೆ ಬಂದು, ತನ್ನ ಪ್ರೀತಿಯನ್ನು ಹುಡುಕಿಕೊಂಡು ಬಂದಾಗ ಅದು ಸಿಗುತ್ತದಾ ಎನ್ನುವುದು ನನ್ನ ಪಾತ್ರ’ ಎಂದು ತನ್ನ ಪಾತ್ರದ ಬಗ್ಗೆ ವಿವರಣೆ ಕೊಟ್ಟರು.

ಬೆಳಗಾವಿ ಮೂಲದ ಕಿಶೋರ್‌ ಶೆಟ್ಟಿ ‘ಭಾನು ವೆಡ್ಸ್‌ ಭೂಮಿ’ ಚಿತ್ರವನ್ನು ನಿರ್ಮಿಸುತ್ತಿದ್ದು, ಚಿತ್ರಕ್ಕೆ ಗಣೇಶ್‌ ಹೆಗಡೆ ಛಾಯಾಗ್ರಹಣ, ಶ್ರೀನಿವಾಸ್‌ ಬಾಬು ಸಂಕಲನ ಕಾರ್ಯವಿದೆ. ಸದ್ಯ ಬಿಡುಗಡೆಯಾಗಿರುವ ‘ಭಾನು ವೆಡ್ಸ್‌ ಭೂಮಿ’ ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು, ಚಿತ್ರವು ಆಗಸ್ಟ್‌ ವೇಳೆಗೆ ತೆರೆಕಾಣುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.