ಸಾಫ್ಟ್ ವೇರ್ ಹುಡುಗನ ಸೈನ್ಸ್ ಸಿನ್ಮಾ

ನ್ಯೂರಾನ್‌ ಎಂಬ ಸೈಂಟಿಫಿಕ್‌ ಥ್ರಿಲ್ಲರ್‌

Team Udayavani, Jun 21, 2019, 5:00 AM IST

31

“ನ್ಯೂರಾನ್‌’… ಇದು ವಿಜ್ಞಾನಕ್ಕೆ ಸಂಬಂಧಿಸಿದ ಪದ. ಈಗ “ನ್ಯೂರಾನ್‌’ ಹೆಸರಲ್ಲೇ ಚಿತ್ರವೊಂದು ಮೂಡಿಬರುತ್ತಿದೆ. ಅಂದಹಾಗೆ, ಕೆಲವರನ್ನು ಹೊರತುಪಡಿಸಿದರೆ ಬಹುತೇಕ ಹೊಸಬರ ಚಿತ್ರವಿದು. ವಿಕಾಸ್‌ ಪುಷ್ಪಗಿರಿ ಅವರಿಗೆ ಇದು ಮೊದಲ ನಿರ್ದೇಶನದ ಚಿತ್ರ. ಸಾಫ್ಟ್ವೇರ್‌ ಕ್ಷೇತ್ರದಲ್ಲಿದ್ದ ವಿಕಾಸ್‌ಗೆ ಮೊದಲನಿಂದಲೂ ಸಿನಿಮಾ ಆಸಕ್ತಿ ಇತ್ತು. ಚಿತ್ರರಂಗದಲ್ಲಿ ಹೊಸದೇನಾದರೂ ಮಾಡಿ ಗುರುತಿಸಿಕೊಳ್ಳಬೇಕೆಂಬ ಬಯಕೆಗೆ ನಿರ್ಮಾಪಕ ವಿನಯ್‌ಕುಮಾರ್‌,

ಲೋಹಿತ್‌, ಶ್ರೀನಿವಾಸ್‌ಗೌಡ ಅವರು ಸಾಥ್‌ ಕೊಟ್ಟಿದ್ದರಿಂದ “ನ್ಯೂರಾನ್‌’ ನಿರ್ದೇಶಿಸಲು ಸಾಧ್ಯವಾಗಿದೆ.
“ನ್ಯೂರಾನ್‌’ ಬಗ್ಗೆ ಹೇಳಿಕೊಂಡ ವಿಕಾಸ್‌ ಪುಷ್ಪಗಿರಿ, “ಮನುಷ್ಯ ನ್ಯೂರಾನ್ಸ್‌ ಇಲ್ಲದೆ ಬದುಕಲು ಸಾಧ್ಯವಿಲ್ಲ. ಬ್ರೈನ್‌ಗೆ ಸಂದೇಶ ರವಾನಿಸೋದೇ ಈ ನ್ಯೂರಾನ್‌. ಇದರಿಂದಲೇ ಮೆದುಳು ಸಕ್ರಿಯವಾಗಿ ಕೆಲಸ ಮಾಡುತ್ತದೆ. ಇವತ್ತಿನ ಜನರೇಷನ್‌ಗೆ ಬೇಕಾದ ಅಂಶಗಳೊಂದಿಗೆ ಈ ಚಿತ್ರ ಮಾಡಿದ್ದೇನೆ. ಇಲ್ಲೂ ನ್ಯೂರಾನ್‌ ಹೈಲೈಟ್‌ ಆಗಿರಲಿದೆ. ಅದು ಹೇಗೆ ಎಂಬುದನ್ನು ಚಿತ್ರದಲ್ಲಿ ನೋಡಬೇಕು. ಮನುಷ್ಯನಿಗೆ ಬದುಕಲು ಏನು ಮುಖ್ಯ. ಯಾವುದನ್ನು ಕಳೆದುಕೊಳ್ಳುತ್ತಿದ್ದಾನೆ ಎಂಬುದೇ ಚಿತ್ರದ ಕಥೆ. ಸಕಲೇಶಪುರ, ಮಡಿಕೇರಿ, ಬೆಂಗಳೂರು, ಗೋವಾದಲ್ಲಿ ಚಿತ್ರೀಕರಣಗೊಂಡಿದೆ’ ಎಂದು ವಿವರ ಕೊಟ್ಟರು ವಿಕಾಸ್‌.

ನಾಯಕ ಯುವ ಅವರಿಗೆ ಇದು ಮೊದಲ ಚಿತ್ರ. ಈ ಚಿತ್ರ ಮಾಡೋಕೆ ಕಾರಣ ಅವರ ಸಹೋದರ ಶ್ರೀನಿವಾಸ್‌ ಅಂತೆ. ಮೂರು ವರ್ಷಗಳ ಎಫ‌ರ್ಟ್‌ ಇದು. ಸಿನಿಮಾ ಮಾಡುವ ಆಸೆಯಿಂದ ಎಲ್ಲವನ್ನೂ ಕಲಿತು ಬಂದಿದ್ದೇನೆ. ಈ ಕಥೆಯಲ್ಲಿ ಸಾಕಷ್ಟು ವಿಷಯಗಳಿವೆ. ಹೊಸತನವೂ ಇದೆ. ಅದನ್ನು ಸಿನಿಮಾದಲ್ಲೇ ಕಾಣಬೇಕು ಎಂದರು ಯುವ.ನಿರ್ಮಾಪಕ ಲೋಹಿತ್‌ ಅವರಿಗೆ ಮೊದಲ ಅನುಭವ ಇದು. ಶ್ರೀನಿವಾಸ್‌ ಗೌಡ್ರು ಅವರಿಂದ ಈ ಚಿತ್ರ ಆಗಿದೆ. ನಾವು ಸುಮಾರು ಕಥೆ ಕೇಳಿದ್ದರೂ, ಅವೆಲ್ಲವನ್ನೂ ಪಕ್ಕಕ್ಕಿಟ್ಟು ಈ ಕಥೆ ಆಯ್ಕೆ ಮಾಡಿಕೊಂಡು ಚಿತ್ರ ಮಾಡಿದ್ದೇವೆ. ಹೊಸತನ ತುಂಬಿದ ಕಥೆಯಲ್ಲಿ ಸಾಕಷ್ಟು ವಿಶೇಷಗಳಿವೆ ಎಂದರು ಅವರು.

ನಾಯಕಿ ನೇಹಾ ಪಾಟೀಲ್‌ಗೆ ಥ್ರಿಲ್ಲರ್‌ ಚಿತ್ರದಲ್ಲಿ ಕೆಲಸ ಮಾಡಿದ ಖುಷಿಯಂತೆ. ಇಲ್ಲಿ ಸೋಶಿಯಲ್‌ ಸರ್ವೀಸ್‌ ಮಾಡುವ ಹುಡುಗಿ ಪಾತ್ರ ಮಾಡಿದ್ದಾರಂತೆ. ಅವರ ಪಾತ್ರದಲ್ಲಿ ತಿರುವು ಬರಲಿದೆಯಂತೆ. ಮದುವೆ ನಂತರ ತೆರೆಗೆ ಬರುತ್ತಿರುವ ಎರಡನೇ ಚಿತ್ರವಿದು ಎಂದರು ನೇಹಾ.

ಶಿಲ್ಪಾ ಶೆಟ್ಟಿ ಅವರಿಗೆ ಮೊದಲ ಚಿತ್ರವಿದು. ಕಿರುತೆರೆಯಲ್ಲಿದ್ದ ಅವರಿಗೆ ಇದೊಂದು ರೀತಿ ಪ್ರಮೋಶನ್‌ ಅಂತೆ. ವೈಷ್ಣವಿ ಅವರಿಗಿಲ್ಲಿ ನಿರ್ದೇಶಕರು ಕಥೆ ಹೇಳಿದಾಗ, ಇಂತಹ ಹೊಸತನದ ಕಥೆ ಇರುವ ಚಿತ್ರ ಬಿಡಬಾರದು ಅನಿಸಿ ಒಪ್ಪಿದರಂತೆ. ವಾಸ್ತವ ಅಂಶಗಳನ್ನಿಟ್ಟುಕೊಂಡು ಇಲ್ಲಿ ಕಥೆ ಹೇಳಿರುವುದು ಹೈಲೈಟ್‌ ಅಂತೆ.

ನಟ ಅರವಿಂದ್‌ ಇಲ್ಲಿ ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಛಾಯಾಗ್ರಾಹಕ ಶೋಯೆಬ್‌ ಅಹ್ಮದ್‌ ಅನುಭವ ಹಂಚಿ ಕೊಂಡರು.

ಟಾಪ್ ನ್ಯೂಸ್

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

BGv-Cong-Ses

Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.