ಗರುಡನಿಗೆ ರಘು ದೀಕ್ಷಿತ್ ಸಾಥ್
Team Udayavani, May 10, 2019, 6:10 AM IST
ಇಲ್ಲಿಯವರೆಗೆ ಗಾಯಕನಾಗಿ, ಸಂಗೀತ ನಿರ್ದೇಶಕನಾಗಿ ಸಿನಿಪ್ರಿಯರ ಮನಗೆದ್ದಿದ್ದ ರಘು ದೀಕ್ಷಿತ್ ಈಗ ನಟನೆಯತ್ತಲೂ ತಮ್ಮ ಚಿತ್ತ ಹಾಯಿಸಿದ್ದಾರೆ. ಹೌದು, ಈ ಹಿಂದೆ “ಸಿಪಾಯಿ’ ಚಿತ್ರದ ಮೂಲಕ ನಾಯಕ ನಟನಾಗಿ ಚಂದನವನಕ್ಕೆ ಎಂಟ್ರಿಯಾಗಿದ್ದ ಸಿದ್ದಾರ್ಥ್ ಮಹೇಶ್ ಅಭಿನಯದ ಹೊಸ ಚಿತ್ರ “ಗರುಡ’ದಲ್ಲಿ ರಘು ದೀಕ್ಷಿತ್ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.
ಅಂದ ಹಾಗೆ, “ಗರುಡ’ ಚಿತ್ರದಲ್ಲಿ ರಘು ದೀಕ್ಷಿತ್ ಗುಪ್ತಚರ ಅಧಿಕಾರಿಯ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದು, ಇಂಡಿಯನ್ ಜೇಮ್ಸ್ ಬಾಂಡ್ ಖ್ಯಾತಿಯ ಬೇಹುಗಾರಿಕಾ ಅಧಿಕಾರಿ ಮತ್ತು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರನ್ನು ಹೋಲುವ ಪಾತ್ರದಲ್ಲಿ ರಘು ದೀಕ್ಷಿತ್ ಅಭಿನಯಿಸುತ್ತಿದ್ದಾರೆ ಎನ್ನಲಾಗುತ್ತಿದೆ.
ಸದ್ಯ ಈ ಚಿತ್ರದ ಪಾತ್ರದ ಬಗ್ಗೆ ಹೆಚ್ಚೇನು ಬಿಟ್ಟಕೊಡದ ಚಿತ್ರತಂಡ, ರಘು ಬಣ್ಣ ಹಚ್ಚಿರುವ ಕೆಲವು ಫೋಟೋಗಳನ್ನು ಮಾತ್ರ ಹರಿಬಿಟ್ಟಿದೆ. ಹಾಗಾಗಿ ಚಿತ್ರದಲ್ಲಿ ರಘು ದೀಕ್ಷಿತ್ ಅವರ ಪಾತ್ರ ಹೇಗಿರಬಹುದು ಎಂಬ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕು.
ಇನ್ನು “ಆರೆಂಜ್ ಪಿಕ್ಸಲ್ಸ್’ ಬ್ಯಾನರ್‌ನಲ್ಲಿ ಪ್ರಸಾದ್ ರೆಡ್ಡಿ ನಿರ್ಮಿಸುತ್ತಿರುವ ಈ ಚಿತ್ರವನ್ನು ಧನಕುಮಾರ್ ನಿರ್ದೇಶಿಸುತ್ತಿದ್ದಾರೆ. ಚಿತ್ರಕ್ಕೆ ಜೈ ಆನಂದ್ ಛಾಯಾಗ್ರಹಣ, ದೀಪು ಎಸ್. ಕುಮಾರ್ ಸಂಕಲನ ಕಾರ್ಯವಿದ್ದು, ಚಿತ್ರದ ಹಾಡುಗಳಿಗೆ ರಘು ದೀಕ್ಷಿತ್ ಸಂಗೀತ ಸಂಯೋಜಿಸುತ್ತಿದ್ದಾರೆ.
ಇನ್ನು “ಗರುಡ’ ಚಿತ್ರದಲ್ಲಿ ಸಿದ್ಧಾರ್ಥ್ ಮಹೇಶ್, ರಘು ದೀಕ್ಷಿತ್ ಅವರೊಂದಿಗೆ, ಶ್ರೀನಗರ ಕಿಟ್ಟಿ, ಐಂದ್ರಿತಾ ರೇ, ಆಶಿಕಾ ರಂಗನಾಥ್, ಕಾಮ್ನಾ ಜೇಠ್ಮಲಾನಿ, ರಂಗಾಯಣ ರಘು, ಆದಿ ಲೋಕೇಶ್, ರಾಜೇಶ್ ನಟರಂಗ, ರವಿಶಂಕರ್ ಗೌಡ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಸದ್ಯ “ಗರುಡ’ ಚಿತ್ರದ ಬಹುತೇಕ ಚಿತ್ರೀಕರಣ ಮುಗಿಸಿದ್ದು ಪೋಸ್ಟ್ ಪೊ›ಡಕ್ಷನ್ ಕೆಲಸದಲ್ಲಿರುವ ಚಿತ್ರತಂಡ ಜುಲೈ ವೇಳೆಗೆ ಚಿತ್ರವನ್ನು ತೆರೆಗೆ ತರುವ ಪ್ಲಾನ್‌ನಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.