ಸೃಜನ್‌ ಮತ್ತೊಂದು ಇನ್ನಿಂಗ್ಸ್‌ ಶುರು

Team Udayavani, Dec 14, 2018, 6:00 AM IST

27.jpg

ಹಿರಿತೆರೆಯಲ್ಲಿ ವೃತ್ತಿ ಬದುಕು ಆರಂಭಿಸಿ ಬಳಿಕ ಕಿರುತೆರೆಯತ್ತ ಮುಖಮಾಡಿ ನೆಲೆಕಂಡಿರುವ ಸೃಜನ್‌ ಲೋಕೇಶ್‌, ಈಗ ಮತ್ತೆ ಹಿರಿತೆರೆಯಲ್ಲಿ ಸೆಕೆಂಡ್‌ ಇನ್ನಿಂಗ್ಸ್‌ ಶುರು ಮಾಡುತ್ತಿದ್ದಾರೆ. ಹೌದು. ಆಗಾಗ್ಗೆ ಅಲ್ಲೊಂದು ಇಲ್ಲೊಂದು ಚಿತ್ರಗಳಲ್ಲಿ ಮುಖ ತೋರಿಸುತ್ತಿದ್ದ ಸೃಜನ್‌ ಲೋಕೇಶ್‌, ಈಗ “ಎಲ್ಲಿದ್ದೆ ಇಲ್ಲಿ ತನಕ’ ಎನ್ನುವ ಚಿತ್ರದ ಮೂಲಕ ನಾಯಕ ನಟನಾಗಿ ಮತ್ತು ನಿರ್ಮಾಪಕನಾಗಿ ಪ್ರೇಕ್ಷಕರ ಮುಂದೆ ಬರಲು ತಯಾರಿ ನಡೆಸುತ್ತಿದ್ದಾರೆ. ಅಂದಹಾಗೆ, ಇತ್ತೀಚೆಗೆ “ಎಲ್ಲಿದ್ದೆ ಇಲ್ಲಿ ತನಕ’ ಚಿತ್ರಕ್ಕೆ  ಮುಹೂರ್ತ ನೆರವೇರಿದೆ.

ಗವಿಪುರಂನ ಬಂಡೆ ಮಹಾಕಾಳಿಯಮ್ಮ ದೇವಸ್ಥಾನದ ಆವರಣದಲ್ಲಿ ನಡೆದ ಮುಹೂರ್ತ ಸಮಾರಂಭಕ್ಕೆ ಹಿರಿಯ ನಟಿ ಜಯಂತಿ ಚಾಲನೆ ನೀಡಿದರು. ಚಿತ್ರದ ಮೊದಲ ದೃಶ್ಯಕ್ಕೆ ನಟ ಕಂ ನಿರ್ದೇಶಕ ವಿ. ರವಿಚಂದ್ರನ್‌ ಕ್ಲಾಪ್‌ ಮಾಡಿದರೆ, ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಕ್ಯಾಮರಾ ಸ್ವಿಚ್‌ ಆನ್‌ ಮಾಡುವ ಮೂಲಕ ಚಿತ್ರದ ಚಿತ್ರೀಕರಣಕ್ಕೆ ಹಸಿರು ನಿಶಾನೆ ತೋರಿದರು. ನಟರಾದ ವಿನೋದ್‌ ಪ್ರಭಾಕರ್‌, ಧರ್ಮ ಕೀರ್ತಿರಾಜ್‌, ನಟಿ ಪ್ರಿಯಾಂಕ ಉಪೇಂದ್ರ, ತಾರಾ, ಗಿರಿಜಾ ಲೋಕೇಶ್‌, ಅವಿನಾಶ್‌, ಎಂ.ಜಿ ರಾಮಮೂರ್ತಿ ಸೇರಿದಂತೆ ಚಿತ್ರರಂಗದ ಹಲವು ಕಲಾವಿದರು, ತಂತ್ರಜ್ಞರು ಮುಹೂರ್ತಕ್ಕೆ ಸಾಕ್ಷಿಯಾಗಿ, ಚಿತ್ರತಂಡಕ್ಕೆ ಶುಭ ಹಾರೈಸಿದರು.

ಲೋಕೇಶ್‌ ಪ್ರೊಡಕ್ಷನ್ಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಧ್ರುವ ಕುಮಾರ್‌ ಸಹ ನಿರ್ಮಾಪಕರಾಗಿ ಕೈ ಜೋಡಿಸುತ್ತಿದ್ದಾರೆ. ಇಲ್ಲಿಯವರೆಗೆ ಕಿರುತೆರೆಯ ಹಲವು ಧಾರಾವಾಹಿಗಳು ಮತ್ತು ರಿಯಾಲಿಟಿ ಶೋಗಳನ್ನು ನಿರ್ದೇಶಿಸಿದ ಅನುಭವವಿರುವ ತೇಜಸ್ವಿ, ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಅರ್ಜುನ್‌ ಜನ್ಯ ಸಂಗೀತವಿದ್ದು, ಕವಿರಾಜ್‌ ಮತ್ತು ಚೇತನ್‌ ಸಾಹಿತ್ಯವಿದೆ. ಚಿತ್ರಕ್ಕೆ ಹೆಚ್‌.ಸಿ ವೇಣು ಛಾಯಾಗ್ರಹಣ ಮಾಡಿದರೆ, ರಾಕೇಶ್‌. ಸಿ.ಎ ಚಿತ್ರಕ್ಕೆ ಸಂಭಾಷಣೆ ಒದಗಿಸಿದ್ದಾರೆ.

ಅಂದು ಆಗಮಿಸಿದ್ದ ಚಿತ್ರರಂಗದ ಗಣ್ಯರು, ಸ್ನೇಹಿತರು, ಆಪ್ತರನ್ನೆಲ್ಲಾ ಪ್ರೀತಿಯಿಂದ ಮಾತನಾಡಿಸಿ, ಪತ್ರಕರ್ತರ ಮುಂದೆ ಬಂದು ಕುಳಿತ ಸೃಜನ್‌ ಲೋಕೇಶ್‌ ಮಾತಿಗಿಳಿದರು. “ಈ ಚಿತ್ರದಲ್ಲಿ ನಟನಾಗಿ, ನಿರ್ಮಾಪಕನಾಗಿ ಎರಡೆರಡು ಜವಾಬ್ದಾರಿಗಳನ್ನು ನಿರ್ವಹಿಸಬೇಕಾಗಿದೆ. ಇಂದಿನ ಪ್ರೇಕ್ಷಕರಿಗೆ ಇಷ್ಟವಾಗುವಂಥ ರೊಮ್ಯಾಂಟಿಕ್‌ ಕಾಮಿಡಿ ಕಥೆ ಚಿತ್ರದಲ್ಲಿದೆ. ಇಡೀ ಚಿತ್ರ ನವಿರಾದ ಹಾಸ್ಯದ ಮೂಲಕ ಸಾಗುತ್ತದೆ. ಚಿತ್ರ ಚೆನ್ನಾಗಿ ಬರಬೇಕೆಂಬ ಕಾರಣಕ್ಕೆ ತಂಡದಲ್ಲಿ ಸಾಕಷ್ಟು ಕಿತ್ತಾಡಿದ್ದೇವೆ. ದುಡ್ಡಿಗಿಂತ ಹೆಚ್ಚಾಗಿ ಒಳ್ಳೆಯ ಚಿತ್ರ ಕೊಡಬೇಕು ಎಂಬ ಉದ್ದೇಶ ಇಟ್ಟುಕೊಂಡು ಈ ಚಿತ್ರ ಮಾಡುತ್ತಿದ್ದೇವೆ’ ಎಂಬ ವಿವರಣೆ ಕೊಟ್ಟರು ಅವರು.

ನಿರ್ದೇಶಕ ತೇಜಸ್ವಿಗೆ ಇದು ಮೊದಲ ನಿರ್ದೇಶನದ ಚಿತ್ರ. ತಮ್ಮ ಚೊಚ್ಚಲ ಚಿತ್ರದ ಬಗ್ಗೆ ಮಾತು ಶುರುಮಾಡಿದ ಅವರು, “ಸುಮಾರು ಏಳೆಂಟು ವರ್ಷಗಳಿಂದಲೂ ಒಂದು ಒಳ್ಳೆಯ ಚಿತ್ರ ಮಾಡಬೇಕು ಎಂಬ ಯೋಚನೆಯಿತ್ತು. ಅದಕ್ಕಾಗಿ ಅನೇಕ ಕಥೆಗಳ ಹುಡುಕಾಟ ನಡೆಸಿದ್ದು ನಿಜ. ಅದರಲ್ಲಿ ಮೂರು ಕಥೆಗಳನ್ನು ಆರಂಭದಲ್ಲಿ ಆಯ್ಕೆ ಮಾಡಿಕೊಂಡೆವು. ಅಂತಿಮವಾಗಿ ಅದರಲ್ಲೂ ಅತ್ಯುತ್ತಮ ಎನಿಸಿದ ಒಂದು ಕಥೆಯನ್ನು ಆಯ್ಕೆ ಮಾಡಿಕೊಂಡ ನಂತರ ಚಿತ್ರ ಮಾಡಲು ನಿರ್ಧರಿಸಿದೆವು. ಈಗ “ಎಲ್ಲಿದೆ ಇಲ್ಲಿ ತನಕ’ ಚಿತ್ರ ಶುರುವಾಗುತ್ತಿದೆ. ಚಿತ್ರ ಮತ್ತದರ ಕಥೆ ಎರಡೂ ಪ್ರೇಕ್ಷಕರಿಗೆ ಇಷ್ಟವಾಗುವ ಭರವಸೆಯಿದೆ’ ಅಂತ ಹೇಳಿಕೊಂಡರು ನಿರ್ದೇಶಕ ತೇಜಸ್ವಿ.

ಚಿತ್ರದಲ್ಲಿ ನಾಯಕ ಸೃಜನ್‌ ಲೋಕೇಶ್‌ಗೆ ನಾಯಕಿಯಾಗಿ ಹರಿಪ್ರಿಯಾ ಜೋಡಿಯಾಗುತ್ತಿದ್ದಾರೆ. ಉಳಿದಂತೆ ತಾರಾ ಅನುರಾಧ, ಸಿಹಿಕಹಿ ಚಂದ್ರು, ಗಿರಿ, ತರಂಗ ವಿಶ್ವ ಸೇರಿದಂತೆ ಹಲವು ಕಲಾವಿದರು ಅಭಿನಯಿಸುತ್ತಿದ್ದಾರೆ. ಸದ್ಯ ಭರದಿಂದ ಚಿತ್ರೀಕರಣ ಆರಂಭಿಸಿರುವ “ಎಲ್ಲಿದ್ದೆ ಇಲ್ಲಿ ತನಕ’ ಚಿತ್ರ ಮುಂದಿನ ಮೇ ವೇಳೆಗೆ ತೆರೆಗೆ ಬರುವ ಸಾಧ್ಯತೆ ಇದೆ.

ಜಿ. ಎಸ್‌. ಕಾರ್ತಿಕ ‌ ಸುಧನ್

ಟಾಪ್ ನ್ಯೂಸ್

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.