ರಹಸ್ಯಗಳ ಕಣಜ ‘ಅಮೃತ ಅಪಾರ್ಟ್‌ಮೆಂಟ್ಸ್’
Team Udayavani, Mar 19, 2021, 2:30 PM IST
ಸಸ್ಪೆನ್ಸ್ ಕಂ ಕ್ರೈಂ-ಥ್ರಿಲ್ಲರ್ ಕಥಾಹಂದರ ಹೊಂದಿರುವ “ಅಮೃತ ಅಪಾರ್ಟ್‌ಮೆಂಟ್ಸ್’ ಚಿತ್ರ ತೆರೆಗೆ ಬರಲು ರೆಡಿಯಾಗಿದೆ. ಸದ್ಯ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇತ್ತೀಚೆಗೆ ಚಿತ್ರದ ಫಸ್ಟ್‌ಲುಕ್ ಪೋಸ್ಟರ್ ಮತ್ತು ಟೀಸರ್ ಬಿಡುಗಡೆ ಮಾಡಿದೆ.
ಹಿರಿಯ ನಿರ್ಮಾಪಕ ಕೆಸಿಎನ್ ಚಂದ್ರಶೇಖರ್, ನಟಿ – ನಿರ್ಮಾಪಕಿ ವಿಜಯಲಕ್ಷ್ಮಿ ಸಿಂಗ್ ಸೇರಿದಂತೆ ಚಿತ್ರರಂಗದ ಅನೇಕರು ಹಾಜರಿದ್ದು, “ಅಮೃತ ಅಪಾರ್ಟ್ ಮೆಂಟ್ಸ್’ ಚಿತ್ರದ ಪೋಸ್ಟರ್ ಮತ್ತು ಟೀಸರ್ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಇದೇ ವೇಳೆ “ಅಮೃತ ಅಪಾರ್ಟ್‌ಮೆಂಟ್ಸ್’ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಕಂ ನಿರ್ಮಾಪಕ ಗುರುರಾಜ ಕುಲಕರ್ಣಿ, “ಇದು ಇಂದಿನ ಬೆಂಗಳೂರಿನ ಐಟಿ-ಬಿಟಿ ಅನ್ನೋ ಜಮಾನದ ಕಥೆ. ಬೆಂಗಳೂರಿಗರು ಸದ್ಯ ಏನಾಗುತ್ತಿದ್ದಾರೆ ಎಂಬುದನ್ನು ಈ ಸಿನಿಮಾ ಮೂಲಕ ಸಸ್ಪೆನ್ಸ್ ಶೈಲಿಯಲ್ಲಿ ತೋರಿಸಿದ್ದೇವೆ. ಒಡೆದು ಹೋದ ಮನಸ್ಸುಗಳನ್ನು ಒಂದು ಮಾಡುವ ಕೆಲಸ ಈ ಸಿನಿಮಾದಲ್ಲಿ ಆಗಿದೆ. ಅದು ಹೇಗೆ ಎಂಬುದನ್ನು ಸಿನಿಮಾದಲ್ಲಿಯೇ ನೋಡಬೇಕು. ಈಗಾಗಲೇ ಈ ಸಿನಿಮಾದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಆದಷ್ಟು ಬೇಗ ಸಿನಿಮಾವನ್ನು ಆಡಿಯನ್ಸ್ ಮುಂದೆ ತರುವ ಯೋಚನೆಯಲ್ಲಿದ್ದೇವೆ’ ಎಂದರು.
ಇನ್ನು “ಅಮೃತ ಅಪಾರ್ಟ್‌ಮೆಂಟ್ಸ್’ ಚಿತ್ರದಲ್ಲಿ ಚಿತ್ರದಲ್ಲಿ ತಾರಕ್ ಪೊನ್ನಪ್ಪ ನಾಯಕ, ಊರ್ವಶಿ ಗೋವರ್ಧನ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ಬಾಲಾಜಿ ಮನೋಹರ್, ಮಾನಸ ಜೋಶಿ, ಸೀತಾ ಕೋಟೆ, ಮಾಲತೇಶ್, ಸಿತಾರ, ಜಗದೀಶ್ ಜಾಲಾ, ಅರುಣ್ ಮೂರ್ತಿ, ರಾಜು ನೀನಾಸಂ, ಶಂಕರ್ ಶೆಟ್ಟಿ ರಂಗಸ್ವಾಮಿ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
“ಜಿ9 ಕಮ್ಯೂನಿಕೇಷನ್ ಮೀಡಿಯಾ ಆ್ಯಂಡ್ ಎಂಟರ್ ಟೈನ್ಮೆಂಟ್’ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಿದೆ. ಚಿತ್ರಕ್ಕೆ ಅರ್ಜುನ್ ಅಜಿತ್ ಛಾಯಾಗ್ರಹಣ, ಕೆಂಪರಾಜ್ ಅರಸ್ ಸಂಕಲನವಿದೆ. ಚಿತ್ರದ ಮೂರು ಹಾಡುಗಳಿಗೆ ಎಸ್. ಡಿ ಅರವಿಂದ್ ಸಂಗೀತ ಸಂಯೋಜಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhuvanam Gaganam Movie: ಭುವನಂ ವಿತರಣಾ ಹಕ್ಕು ಕೋಟಿ ಬೆಲೆಗೆ ಮಾರಾಟ
State Film Awards: 2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ; ಇಲ್ಲಿದೆ ಸಂಪೂರ್ಣ ಪಟ್ಟಿ
ಚೀನಾದ ಸೂಪರ್ ಮಾರ್ಕೆಟ್‌ನಲ್ಲಿ ಡಾ. ರಾಜ್‌ಕುಮಾರ್ ʼಗಂಧದ ಗುಡಿʼ ಹಾಡು: ವಿಡಿಯೋ ವೈರಲ್
Sandalwood: ಥಿಯೇಟರ್, ಓಟಿಟಿ ಬಳಿಕ ಟಿವಿಯಲ್ಲಿ ಬರಲಿದೆ ʼಭೈರತಿ ರಣಗಲ್ʼ: ಯಾವಾಗ, ಎಲ್ಲಿ?
Royal movie: ರಾಯಲ್ ಚಿತ್ರ ವೀಕ್ಷಿಸಿದ ದರ್ಶನ್ ಆ್ಯಂಡ್ ಫ್ಯಾಮಿಲಿ