ತಾರಕಾಸುರನ ಹಾಡು ಬಂತು
Team Udayavani, Oct 26, 2018, 6:00 AM IST
ಪುರಾಣ, ಪುಣ್ಯ ಕಥೆಗಳಲ್ಲಿ “ತಾರಕಾಸುರ’ ಎಂಬ ರಾಕ್ಷಸನ ಬಗ್ಗೆ ನೀವೆಲ್ಲ ಕೇಳಿರುತ್ತೀರಿ.ಈಗ ಕನ್ನಡದಲ್ಲಿ ಅದೇ ಹೆಸರಿನಲ್ಲಿ ಸಿನಿಮಾವೊಂದು ತೆರೆಗೆ ಬರುತ್ತಿದೆ. ಅಂದಹಾಗೆ ಈ “ತಾರಕಾಸುರ’ಯಾವುದೇ ಪುರಾಣ ಕಥೆಗಳನ್ನು ಆಧರಿಸಿದ ಚಿತ್ರವಲ್ಲ. ಬದಲಾಗಿ ಇಂದಿನ ಜಮಾನದ ಪಕ್ಕಾ ಆ್ಯಕ್ಷನ್ ಕಂ ಲವ್ ಕಥಾಹಂದರದ ಚಿತ್ರ. ಈ ಹಿಂದೆ “ರಥಾವರ’ ಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಶೇಖರ ಬಂಡಿಯಪ್ಪ ಈ “ತಾರಕಾಸುರ’ನ ನಿರ್ದೇಶಕರು. ನವ ನಾಯಕ ವೈಭವ್ ಈ ಚಿತ್ರದ ಮೂಲಕ ಆ್ಯಕ್ಷನ್ ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿ,ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, ಇತ್ತೀಚೆಗೆ “ತಾರಕಾಸುರ’ಚಿತ್ರದ ಹಾಡುಗಳನ್ನು ಅದೂಟಛಿರಿಯಾಗಿ ಹೊರತಂದಿದೆ.
ಇತ್ತೀಚೆಗೆ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್.ಎ ಚಿನ್ನೇಗೌಡ, ಕರಿಸುಬ್ಬು,
ಥಾಮಸ್ ಡಿ’ಸೋಜಾ,ಸಾಧುಕೋಕಿಲ, ಚಿತ್ರಸಾಹಿತಿಗಳಾದ ಡಾ. ವಿ. ನಾಗೇಂದ್ರ ಪ್ರಸಾದ್, ಕವಿರಾಜ್, ನಿರ್ದೇಶಕ ಬಹದ್ದೂರ್ ಚೇತನ್, ನಿರ್ಮಾಪಕಿ ಶೈಲಜಾ ನಾಗ್, ಸಂಖ್ಯಾಶಾಸOಉಜ್ಞ ಜೈ ಶ್ರೀನಿವಾಸನ್ ಗುರೂಜಿ ಮೊದಲಾದವರು ಆಡಿಯೋ ಬಿಡುಗಡೆಯಲ್ಲಿ ಪಾಲ್ಗೊಂಡು ಚಿತ್ರತಂಡಕ್ಕೆ ಶುಭಕೋರಿದರು. ಚಿತ್ರದ ಹಾಡುಗಳಿಗೆ ಧರ್ಮವಿಶ್ ಸಂಗೀತ ಸಂಯೋಜಿಸಿದ್ದಾರೆ. ಚಿತ್ರದ ವಿಶೇಷ ಹಾಡೊಂದಕ್ಕೆ ನಟ ಹ್ಯಾಟ್ರಿಕ್ ಹೀರೋ ಶಿವರಾಜ ಕುಮಾರ್ ಧ್ವನಿಯಾಗಿದ್ದಾರೆ. ಕವಿರಾಜ್ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದಾರೆ.
ವಿತರಕ ಮತ್ತು ಪ್ರದರ್ಶಕ ಎಂ. ನರಸಿಂಹಲು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರದಲ್ಲಿ ನಾಯಕ ವೈಭವ್‌ಗೆ ಜೋಡಿಯಾಗಿ ಮಾನ್ವಿತಾ ಹರೀಶ್ ಹೆಜ್ಜೆ ಹಾಕಿದ್ದಾರೆ. ಹಾಲಿವುಡ್ ನಟ ಡ್ಯಾನಿ ಸಫಾನಿ ಚಿತ್ರದಲ್ಲಿ ಖಳನಾಯಕ ಪಾತ್ರಕ್ಕೆ ಬಣ್ಣ ಹಚ್ಚಿದ್ದು, “ತಾರಕಾಸುರ’ನ ಮೂಲಕ ಡ್ಯಾನಿ ಕನ್ನಡ ಚಿತ್ರರಂಗಕ್ಕೂ ಅಡಿಯಿಟ್ಟಿದ್ದಾರೆ. ಉಳಿದಂತೆ ಸಾಧುಕೋಕಿಲ, ಕರಿಸುಬ್ಬು, ಎಂ.ಕೆ ಮಠದ ಮೊದಲಾದ ಕಲಾವಿದರು ಚಿತ್ರದ ಇತರೆ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಕುಮಾರ್ ಗೌಡ ಛಾಯಾಗ್ರಹಣ, ಶಿವಶಂಕರ್
ಸಂಕಲನ ಕಾರ್ಯ ನಿರ್ವಹಿಸಿದ್ದಾರೆ. ಚಿತ್ರದ ಸಾಹಸ ದೃಶ್ಯಗಳನ್ನು ಡಿಫರೆಂಟ್ ಡ್ಯಾನಿ ಸಂಯೋಜಿಸಿದ್ದಾರೆ. ಸದ್ಯ ಬಿಡುಗಡೆಯಾಗಿರುವ “ತಾರಕಾಸುರ’ ಚಿತ್ರದ ಟೀಸರ್ ಮತ್ತು ಹಾಡುಗಳಿಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ನವೆಂಬರ್ ವೇಳೆಗೆ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Winter: ಚಳಿಗಾಲದಲ್ಲಿ ಆರೋಗ್ಯಕರವಾಗಿರಲು ಸೇವಿಸಬೇಕಾದ ಆಹಾರಗಳು ಇವು…
Signature Bag: ನಿನ್ನೆ ಪ್ಯಾಲೆಸ್ತೀನ್ ಬೆಂಬಲ, ಇಂದು ಬಾಂಗ್ಲಾ ಪರ ಕೈ ಚೀಲ ತಂದ ಸಂಸದೆ!
Tragedy: 18 ವರ್ಷ ವ್ರತದ ಬಳಿಕ ಹುಟ್ಟಿದ ಕಂದಮ್ಮನನ್ನು 14 ತಿಂಗಳಲ್ಲೇ ಕಳೆದುಕೊಂಡ ಕುಟುಂಬ
Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ ಅಂತ್ಯ!
Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.