ಟ್ರಂಕ್‌ನೊಳಗಿಂದ ಬಂದ ಹಾಡು

Team Udayavani, Feb 9, 2018, 9:10 AM IST

28.jpg

ಹಿರಿಯ ನಿರ್ದೇಶಕ, ನಿರ್ಮಾಪಕ ದಿವಂಗತ ಜಿ.ವಿ.ಅಯ್ಯರ್‌ ಅವರ ಮೊಮ್ಮಗಳು ರಿಷಿಕಾ ಶರ್ಮ ನಿರ್ದೇಶನದ “ಟ್ರಂಕ್‌’ ಚಿತ್ರದ ಮೊದಲ ಪೋಸ್ಟರ್‌ ಈಗಾಗಲೇ ಬಿಡುಗಡೆಯಾಗಿದೆ. ಇತ್ತೀಚೆಗೆ ಆ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಲಾಗಿದೆ. ಹಿರಿಯ ಗೀತರಚನೆಕಾರ ಕೆ.ಕಲ್ಯಾಣ್‌ ಅವರು ಆಡಿಯೋ ಸಿಡಿ ಬಿಡುಗಡೆ ಮಾಡುವ ಮೂಲಕ ಹೊಸಬರ ತಂಡಕ್ಕೆ ಶುಭಹಾರೈಸಿದ್ದಾರೆ.

ನಿರ್ದೇಶಕಿ ರಿಷಿಕಾ ಶರ್ಮ ಅವರು ತಮ್ಮ ಮೊದಲ ಚಿತ್ರದ ಕುರಿತು ಅಂದು ಹೇಳಿದ್ದಿಷ್ಟು. “ಇದು ನಿಜ ಘಟನೆ ಇಟ್ಟುಕೊಂಡು ಮಾಡಿದ ಚಿತ್ರ. ಉತ್ತರ ಕರ್ನಾಟಕದಲ್ಲಿ ನಡೆದ ನೈಜ ಘಟನೆಯ ಚಿತ್ರಣವಿದು. ಆ ಭಾಗದಲ್ಲಿರುವ  ಮನೆಯೊಂದರಲ್ಲಿ ಒಂದು ಘಟನೆ ನಡೆದಿತ್ತು. ಅದೇ ಚಿತ್ರದ ಹೈಲೈಟ್‌. ಒಂದು ಟ್ರಂಕ್‌ನಿಂದ ಶುರುವಾಗುವ ಕಥೆ ಅದಾಗಿದ್ದು, ಇಪ್ಪತ್ತು ವರ್ಷದ ಹಿಂದೆ ನಡೆದಂತಹ ಕುತೂಹಲದ ಘಟನೆಯನ್ನು ಚಿತ್ರ ಮಾಡಲಾಗಿದೆ. ಒಂದು ಟ್ರಂಕ್‌ ಸುತ್ತ ನಡೆಯೋ ಘಟನೆಗಳೇ ಚಿತ್ರದ ಜೀವಾಳ. ಚಿತ್ರದಲ್ಲಿ ಟ್ರಂಕ್‌ ಕೇಂದ್ರಬಿಂದು. ಆ ಟ್ರಂಕ್‌ನೊಳಗೊಂದು ವಿಚಿತ್ರ ಘಟನೆ ನಡೆಯುತ್ತೆ. ಅದೇನೆಂಬುದನ್ನು ಸಿನಿಮಾದಲ್ಲೇ ನೋಡಬೇಕು. ಇಲ್ಲಿ ಇನ್ನೊಂದು ವಿಶೇಷವೆಂದರೆ, ನಿಜವಾದ ಘೋಸ್ಟ್‌ ಹಂಟರ್ ಕೂಡ ಕೆಲಸ ಮಾಡಿದ್ದಾರೆ. ತೆರೆಯ ಮೇಲೂ ಅವರೂ ಕಾಣಿಸಿಕೊಂಡಿದ್ದಾರೆ. ತಂತ್ರ, ಮಂತ್ರ ಇಲ್ಲದೆ, ಸೈನ್ಸ್‌ ಮೂಲಕ ಹೊಸತನ್ನು ಹೇಳಿದ್ದೇವೆ’ ಅಂದರು ರಿಷಿಕಾ ಶರ್ಮ.

ರಂಗಭೂಮಿ ಹಿನ್ನೆಲೆಯಿಂದ ಬಂದಿರುವ ನಾಯಕ ನಿಹಾಲ್‌ಗೆ “ಟ್ರಂಕ್‌’ ಹೊಸ ಅನುಭವ ಕಟ್ಟಿಕೊಟ್ಟಿದೆಯಂತೆ. ಒಂದೂವರೆ ವರ್ಷ, ಈ ಟ್ರಂಕ್‌ನಲ್ಲೇ ಕಳೆದಿದ್ದಾರಂತೆ. “ಮಹಿಳೆಯೊಬ್ಬಳು ನಿರ್ದೇಶನ ಮಾಡಿದ ಚಿತ್ರ ಅಂತ ಹೇಳಲು ಸಾಧ್ಯವಿಲ್ಲ. ಯಾಕೆಂದರೆ, ಎಲ್ಲವನ್ನೂ ಒಟ್ಟಿಗೆ ನಿರ್ವಹಿಸಿ, ಎಲ್ಲರನ್ನೂ ಒಂದೇ ಕಡೆ ಸೇರಿಸಿ, ನೀಟ್‌ ಸಿನಿಮಾ ಮಾಡಿದ್ದಾರೆ. ಅಷ್ಟೊಂದು ಕೆಲಸವನ್ನು ತುಂಬಾ ಸುಲಭವಾಗಿ ಮಾಡಿದ್ದಾರೆ. ಕನ್ನಡದಲ್ಲಿ ಇದೊಂದು ಸುದ್ದಿ ಮಾಡುವ ಚಿತ್ರವಾಗುತ್ತೆ’ ಎಂದರು ನಿಹಾಲ್‌. ಇನ್ನು ನಿರ್ಮಾಪಕ ರಾಜೇಶ್‌ ಭಟ್‌ ಅವರಿಗೆ ಒಳ್ಳೆಯ ಚಿತ್ರ ಮಾಡಿರುವ ಖುಷಿ ಇದೆಯಂತೆ. “ಇದು ಹಾರರ್‌ ಚಿತ್ರವಾದರೂ, ಕನ್ನಡದ ಮಟ್ಟಿಗೆ ಹೊಸ ಫೀಲ್‌ ಕೊಡುವ ಚಿತ್ರ’ ಎನ್ನುತ್ತಾರೆ ನಿರ್ಮಾಪಕರು. ಈ ಚಿತ್ರಕ್ಕೆ ಕಾರ್ತಿಕ್‌, ಗಣೇಶನ್‌ ಮತ್ತು ಪ್ರದೀಪ್‌ ಈ ಮೂವರು ಸೇರಿ ಸಂಗೀತ ನೀಡಿದ್ದಾರೆ. ಹಾಲಿವುಡ್‌ ಮತ್ತು ಬಾಲಿವುಡ್‌ ಚಿತ್ರಗಳಿಗೆ ಹಿನ್ನೆಲೆ ಸಂಗೀತ ನೀಡಿರುವ ಅಲ್ವಿನ್‌ ಅವರು ಈ ಚಿತ್ರಕ್ಕೆ ಹಿನ್ನೆಲೆ ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಪ್ರದೀಪ್‌ ಗೀತೆ ರಚಿಸಿದ್ದಾರೆ. ಕುಮಾರ್‌ ತಮ್ಮ ಆದ್ಯ ಆಡಿಯೋ ಕಂಪೆನಿ ಮೂಲಕ ಮೊದಲ ಆಡಿಯೋ ಸಿಡಿ ಬಿಡುಗಡೆ ಮಾಡಿದ್ದಾರೆ. ಚಿತ್ರಕ್ಕೆ ವೈಶಾಲಿ ದೀಪಕ್‌ ನಾಯಕಿ. ಉಳಿದಂತೆ ಅರುಣ ಬಾಲರಾಜ್‌, ರಂಗಭೂಮಿಯ ಹಿರಿಯ ಕಲಾವಿದೆ ಸುಂದರಶ್ರೀ ಸೇರಿದಂತೆ ಅನೇಕರು ನಟಿಸಿದ್ದಾರೆ. ಭಜರಂಗ್‌, ಸಂದೀಪ್‌ ಕ್ಯಾಮೆರಾ ಹಿಡಿದಿದ್ದಾರೆ. 

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayogya 2: ಇಲ್ಲಿ ಎಲ್ಲವೂ ಡಬಲ್‌ ಆಗಿರುತ್ತದೆ…ಇದು ʼಅಯೋಗ್ಯʼನ ಭರವಸೆ

Ayogya 2: ಇಲ್ಲಿ ಎಲ್ಲವೂ ಡಬಲ್‌ ಆಗಿರುತ್ತದೆ…ಇದು ʼಅಯೋಗ್ಯʼನ ಭರವಸೆ

Sandalwood: ರಂಗೇರಲಿದೆ ಜನವರಿ; ಹೊಸ ವರ್ಷದ ಮೊದಲ ತಿಂಗಳಲ್ಲಿ ಸಿನಿ ಮಿಂಚು

Sandalwood: ರಂಗೇರಲಿದೆ ಜನವರಿ; ಹೊಸ ವರ್ಷದ ಮೊದಲ ತಿಂಗಳಲ್ಲಿ ಸಿನಿ ಮಿಂಚು

Pushpa-2; Bollywood withered in Pushpa fire

Pushpa-2; ಪುಷ್ಪ ಫೈರ್‌ ನಲ್ಲಿ ಬಾಡಿದ ಬಾಲಿವುಡ್

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.