ಈ ವಾರ ತೆರೆಗೆ 3 ಚಿತ್ರಗಳು

Team Udayavani, Apr 26, 2019, 11:20 AM IST

Suchi-Film-Release

ಪ್ರೀಮಿಯರ್‌ಪದ್ಮಿನಿ
ಶ್ರುತಿ ನಾಯ್ಡು ನಿರ್ಮಾಣದ ಈ ಚಿತ್ರದಲ್ಲಿ ಜಗ್ಗೇಶ್‌ ನಾಯಕರಾಗಿ ನಟಿಸಿದ್ದಾರೆ. ಇನ್ನು, ರಮೇಶ್‌ ಇಂದಿರಾ ಅವರು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಜಗ್ಗೇಶ್‌ ಅವರೊಂದಿಗೆ ಮಧುಬಾಲಾ, ಸುಧಾರಾಣಿ, ಪ್ರಮೋದ್‌, ಹಿತಾ ಚಂದ್ರಶೇಖರ್‌, ವಿವೇಕ್‌ ಸಿಂಹ, ರಮೇಶ್‌ ಇಂದಿರಾ ಮುಂತಾದ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಚಿತ್ರದ ಹಾಡುಗಳಿಗೆ ಅರ್ಜುನ್‌ ಜನ್ಯ ಅವರ ಸಂಗೀತ ಸಂಯೋಜನೆಯಿದ್ದು, ಯೋಗರಾಜ್‌ ಭಟ್‌, ಕವಿರಾಜ್‌, ಜಯಂತ ಕಾಯ್ಕಿಣಿ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದಾರೆ. ಚಿತ್ರಕ್ಕೆ ಅದ್ವೈತ ಗುರುಮೂರ್ತಿ ಛಾಯಾಗ್ರಹಣವಿದೆ. ರಾಜೇಂದ್ರ ಅರಸ್‌ ಸಂಕಲನವಿದೆ. ಇಮ್ರಾನ್‌ ಸರ್ದಾರಿಯ ನೃತ್ಯ ನಿರ್ದೇಶನ ಮಾಡಿದರೆ, ಡಿಫ‌ರೆಂಟ್‌ ಡ್ಯಾನಿ ಸಾಹಸ ನಿರ್ದೇಶನ ಹಾಗೂ ಶಿವಕುಮಾರ್‌ ಕಲಾ ನಿರ್ದೇಶನ ಚಿತ್ರಕ್ಕಿದೆ. ಕೃಷ್ಣ ಸಾರ್ಥಕ್‌ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.

ಮಹಾಕಾವ್ಯ
ಸುಮಾರು ಮೂರು ವರ್ಷಗಳ ಹಿಂದೆಯೇ ಸೆಟ್ಟೇರಿದ್ದ ‘ಮಹಾಕಾವ್ಯ’ ಚಿತ್ರ ಈ ವಾರ ತೆರೆಗೆ ಬರುತ್ತಿದೆ. ಎಸ್‌.ಆರ್‌.ಕೆ ಪಿಕ್ಚರ್ ಬ್ಯಾನರ್‌ನಲ್ಲಿ ವಿಜಯ. ಎಸ್‌ ನಿರ್ಮಿಸಿರುವ ‘ಮಹಾಕಾವ್ಯ’ ಚಿತ್ರಕ್ಕೆ ಶ್ರೀದರ್ಶನ್‌ ಪರಿಕಲ್ಪನೆ ಜೊತೆಗೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದ ಹಾಡುಗಳಿಗೆ ಮನೋರಂಜನ್‌ ಪ್ರಭಾಕರ್‌ ಸಂಗೀತ ಸಂಯೋಜಿಸಿದ್ದಾರೆ. ರಾಜ ಹಿನ್ನಲೆ ಸಂಗೀತ ನೀಡಿದ್ದಾರೆ.

ಚಿತ್ರಕ್ಕೆ ಮುತ್ತುರಾಜ್‌ ಛಾಯಾಗ್ರಹಣ ಹಾಗೂ ಸುರೇಶ್‌ ಅರಸ್‌ ಸಂಕಲನ ಕಾರ್ಯ ನಿರ್ವಹಿಸಿದ್ದಾರೆ. ಪೌರಾಣಿಕ ಕಥಾಹಂದರ ಹೊಂದಿರುವ “ಮಹಾಕಾವ್ಯ’ ಚಿತ್ರದಲ್ಲಿ ಶ್ರೀದರ್ಶನ್‌, ರಶ್ಮಿ ಪ್ರಭಾಕರ್‌, ರಾಮಕೃಷ್ಣ, ಅನಂತವೇಲು, ಲಕ್ಷ್ಮೀ ಭಟ್‌, ವಲ್ಲಭ್‌, ಗಿರೀಶ್‌, ಗಣೇಶ್‌ ರಾವ್‌, ಅರವಿಂದ್‌, ಸ್ನೇಹ ಸ್ವಾಭಿಮಾನಿ, ನಾಗರಾಜ್‌ ಭಟ್‌ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ವಸಂತ ಕುಲಕರ್ಣಿ ಕಲಾ ನಿರ್ದೇಶನದೆ. ಶ್ರೀದರ್ಶನ್‌ ಹಾಗೂ ಪುರುಷೋತ್ತಮ್‌ ಕಣಗಾಲ್‌ ಸಂಭಾಷಣೆ ಬರೆದಿದ್ದಾರೆ.

ಹೌಲಾ ಹೌಲಾ
ಬಹುತೇಕ ಹೊಸಬರೇ ಸೇರಿ ಮಾಡಿರುವ “ಹೌಲಹೌಲ’ ಚಿತ್ರವನ್ನು ಸುಶೀಲ ಮತ್ತು ಡಾ. ರಮೇಶ್‌ ಚೌದರಿ ನಿರ್ಮಿಸಿದ್ದಾರೆ. ಸೆನ್ಸಾರ್‌ ಮಂಡಳಿಯು ಯು/ಎ ಸರ್ಟಿಫಿಕೆಟ್‌ ಪಡೆದುಕೊಂಡಿರುವ ಈ ಚಿತ್ರಕ್ಕೆ ಎಸ್‌.ಪಿ ಪಾಟೀಲ್‌ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಸುರೇಶ್‌ ವರ್ಮ ಛಾಯಾಗ್ರಹಣ ಮತ್ತು ಜ್ಞಾನೇಶ್ವರ್‌ ಸಂಕಲನ ಕಾರ್ಯವಿದೆ. ಚಿತ್ರದ ಹಾಡುಗಳಿಗೆ ಶ್ಯಾಂಡಿ ಸಂಗೀತ ಸಂಯೋಜಿಸಿದ್ದು, ಕವಿರಾಜ್‌ ಸಾಹಿತ್ಯ ಒದಗಿಸಿದ್ದಾರೆ.

ಸಾಹಸಸಿಂಹ ವಿಷ್ಣುವರ್ಧನ್‌ ಅಭಿಮಾನಿಯೊಬ್ಬಳ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳಬಾರದೆಂದು ಎಂಬ ಸಂದೇಶ ಕೂಡ ಇದೆ. ಚಿತ್ರದಲ್ಲಿ ಆರತಿ ಕುಲಕರ್ಣಿ, ಶೋಭರಾಜ್‌, ಹನುಮಂತ‌ರಾಯ ಗೌಡ, ಅಮಿತ್‌, ವಿಜಯ್‌ ಚಂಡೂರ್‌, ಶಾಲಿನಿ, ಪೃಥ್ವಿ, ಮೇಘನಾ, ಮಂಜು, ಲಯೇಂದ್ರ, ದಿವ್ಯ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಟಾಪ್ ನ್ಯೂಸ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.