Totapuri 2 ಜಗ್ಗೇಶ್-ಡಾಲಿ ಜೊತೆಯಾಟ; ಸೆ.28ರಿಂದ ತೋತಾಪುರಿ ರುಚಿ
Team Udayavani, Sep 22, 2023, 3:51 PM IST
ಜಗ್ಗೇಶ್ ಹಾಗೂ ಡಾಲಿ ಧನಂಜಯ್ ಅಭಿನಯದ “ತೋತಾಪುರಿ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಇತ್ತೀಚೆಗೆ ಚಿತ್ರತಂಡ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದು, ಚಿತ್ರ ಸೆ.28ರಂದು ತೆರೆಕಾಣುತ್ತಿದೆ. ಇತ್ತೀಚೆಗೆ ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಈ ಬಾರಿ ಸಿನಿಮಾದಲ್ಲಿ ಹೊಸದೇನೋ ಇರುವುದು ಎದ್ದು ಕಾಣುತ್ತದೆ. ತಿಳಿ ಹಾಸ್ಯದ ಜೊತೆಗೆ ಗಂಭೀರವಾದ ಒಂದು ಕಥೆಯನ್ನು ಹೇಳಿದಂತಿದೆ. ನಟ ಡಾಲಿ ಧನಂಜಯ್ ಈ ಚಿತ್ರದಲ್ಲಿ ಜಗ್ಗೇಶ್ ಅವರ ಜೊತೆ ಇಡೀ ಸಿನಿಮಾದುದ್ದಕ್ಕೂ ಸಾಗಿಬಂದಿದ್ದಾರೆ. ಧನಂಜಯ್ ಹಾಗೂ ಜಗ್ಗೇಶ್ ಅವರ ಕ್ಯಾರೆಕ್ಟರ್ ಲುಕ್ ಗುರುಪೂರ್ಣಿಮೆಯ ದಿನ ಬಿಡುಗಡೆಯಾಗಿತ್ತು. ಮೊದಲ ಭಾಗದಲ್ಲಿ ನವರಸ ನಾಯಕ ಜಗ್ಗೇಶ್, ಅದಿತಿ ಪ್ರಭುದೇವ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಚಿತ್ರಕ್ಕೆ ನಿರಂಜನ ಬಾಬು ಅವರ ಛಾಯಾಗ್ರಹಣ, ಅರುಣ್ ಆಂಡ್ರ್ಯೂ ಅವರ ಸಂಗೀತ ಸಂಯೋಜನೆಯಿದೆ.
“ನಮ್ಮ ನಿರೀಕ್ಷೆಯಂತೆಯೇ ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ. ಪ್ರೇಕ್ಷಕರಿಗೆ ಇಷ್ಟವಾಗುವ ಮನರಂಜನಾತ್ಮಕ ಕಂಟೆಂಟ್ ಚಿತ್ರದಲ್ಲಿದೆ. ಥೇಟರಿಗೆ ಬರುವ ಪ್ರೇಕ್ಷಕರಿಗೆ ಉತ್ತಮ ಮನರಂಜನೆಯ ಜೊತೆ ಪರಿಶುದ್ಧ ಹಾಸ್ಯದ ಹೂರಣವೂ ಇರುತ್ತದೆ’ ಎಂದು ನಿರ್ಮಾಪಕ ಕೆ.ಎ.ಸುರೇಶ್ ಹೇಳಿದ್ದಾರೆ. ಉಳಿದಂತೆ ಚಿತ್ರದಲ್ಲಿ ದತ್ತಣ್ಣ, ಸುಮನ ರಂಗನಾಥ್, ವೀಣಾ ಸುಂದರ್, ಹೇಮಾದತ್ ಹೀಗೆ ಮೊದಲ ಭಾಗದಲ್ಲಿದ್ದ ಬಹುತೇಕ ಪಾತ್ರಗಳು ಮುಂದುವರಿದಿದೆ.
ತೋತಾಪುರಿ ಚಿತ್ರದ ಮೊದಲ ಭಾಗದಲ್ಲಿ “ಬಾಗ್ಲು ತೆಗಿ ಮೇರಿ ಜಾನ್ ಹಾಡು ಸೂಪರ್ ಹಿಟ್ ಆಗಿತ್ತು. ರೊಮ್ಯಾಂಟಿಕ್ ಕಾಮಿಡಿ ಶೈಲಿಯಲ್ಲಿ ಮೂಡಿಬಂದಿದ್ದ ಈ ಹಾಡಿಗೆ ಲಕ್ಷಾಂತರ ಹಿಟ್ಸ್ ದಾಖಲಾಗಿತ್ತು. ಇದೀಗ “ತೋತಾಪುರಿ-2 ಚಿತ್ರದ ಮೊದಲ ಹಾಡು ಇತ್ತೀಚೆಗೆ ಬಿಡುಗಡೆಯಾಗಿದ್ದು, ಎಲ್ಲೆಡೆ ಸದ್ದು ಮಾಡುತ್ತಿದೆ. ಅದರಲ್ಲೂ ಮಳೆಗಾಲದಲ್ಲಿ ಈ ಹಾಡು ಮೋಡಿ ಮಾಡುತ್ತಿರೋದು ವಿಶೇಷ.
ಹೃದಯಶಿವ ಸಾಹಿತ್ಯ ರಚಿಸಿರುವ “ಮೊದಲ ಮಳೆ ಮನದೊಳಗೆ… ಎಂಬ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸೌಂಡು ಮಾಡುತ್ತಿದೆ. ಡಾಲಿ ಧನಂಜಯ್ ಹಾಗೂ ಸುಮನ್ ರಂಗನಾಥ್ ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದು, ಸಂಜಿತ್ ಹೆಗ್ಡೆ ಕಂಠಸಿರಿಯಲ್ಲಿ “ಮಳೆ ಡಾಲಿ-ಜಗೆ ಹಾಡು ಮೂಡಿಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.