ಇಂದಿನಿಂದ ಗಿರಿಗಿಟ್ ಆರಂಭ

ರೂಪೇಶ್‌ ಶೆಟ್ಟಿ ಹೊಸ ಭರವಸೆ

Team Udayavani, Aug 23, 2019, 5:04 AM IST

36

ತುಳು ಚಿತ್ರರಂಗದಲ್ಲಿ ಈ ವರ್ಷ ಇಲ್ಲಿವರೆಗೆ ಒಂದಷ್ಟು ಸಿನಿಮಾಗಳು ಬಿಡುಗಡೆಯಾಗಿವೆ. ಕೆಲವು ಸಿನಿಮಾಗಳು ನಿರ್ಮಾಪಕರ ಮೊಗದಲ್ಲಿ ನಗು ಮೂಡಿಸಿದರೆ, ಇನ್ನು ಕೆಲವು ಸಿನಿಮಾಗಳು ಬೇಸರಕ್ಕೆ ಕಾರಣವಾಗಿವೆ. ಇದು ಯಾವುದೇ ಭಾಷೆಯ ಚಿತ್ರರಂಗದಲ್ಲಿ ಸಹಜ ಕೂಡಾ. ಈಗ ಚಿತ್ರತಂಡವೊಂದು ಸಿಕ್ಕಾಪಟ್ಟೆ ವಿಶ್ವಾಸದೊಂದಿಗೆ ಎದುರು ನೋಡುತ್ತಿದೆ. ಅದಕ್ಕೆ ಕಾರಣ ‘ಗಿರಿಗಿಟ್’. ಇಂದು (ಆ.23) ತೆರೆಕಾಣುತ್ತಿರುವ ತುಳು ಸಿನಿಮಾವಿದು. ಈಗಾಗಲೇ ಕನ್ನಡ, ತುಳು ಚಿತ್ರಗಳಲ್ಲಿ ನಟಿಸಿರುವ ರೂಪೇಶ್‌ ಶೆಟ್ಟಿ ಈ ಚಿತ್ರದ ನಾಯಕ. ಕೇವಲ ನಾಯಕರಾಗಿಯಷ್ಟೇ ಇವರು ಈ ಚಿತ್ರದಲ್ಲಿ ತೊಡಗಿಸಿಕೊಂಡಿಲ್ಲ. ನಿರ್ದೇಶನದಲ್ಲೂ ಭಾಗಿಯಾಗಿದ್ದಾರೆ. ರೂಪೇಶ್‌ ಶೆಟ್ಟಿ ಹಾಗೂ ರಾಕೇಶ್‌ ಕದ್ರಿ ಜೊತೆಯಾಗಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಚಿತ್ರ ವಿದೇಶಗಳಲ್ಲೂ ತೆರೆಕಾಣುತ್ತಿದೆ.

ಚಿತ್ರದ ಬಗ್ಗೆ ಮಾತನಾಡುವ ರೂಪೇಶ್‌ ಶೆಟ್ಟಿ, ‘ಇದು ಇವತ್ತಿನ ಟ್ರೆಂಡ್‌ಗೆ ತಕ್ಕಂತಹ ಸಿನಿಮಾ. ನಮ್ಮ ಜೀವನದ ಸುತ್ತಮುತ್ತ ಈ ಕಥೆ ನಡೆಯುತ್ತದೆ., ಕಾಮಿಡಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ’ ಎನ್ನುತ್ತಾರೆ. ಇನ್ನು, ತುಳು ಚಿತ್ರರಂಗದಲ್ಲಿ ಹೊಸ ಬಗೆಯ ಸಿನಿಮಾವಾಗಿ ಈ ಚಿತ್ರ ಹಿಟ್ ಆಗುವ ವಿಶ್ವಾಸ ಕೂಡಾ ರೂಪೇಶ್‌ ಅವರಿಗಿದೆ. ಅದಕ್ಕೆ ಪೂರಕವಾಗಿ ಈಗಾಗಲೇ ಬಿಡುಗಡೆಯಾಗಿರುವ ಟೀಸರ್‌, ಟ್ರೇಲರ್‌ಗಳಿಗೆ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರದಲ್ಲಿ ರೂಪೇಶ್‌ಗೆ ಜೋಡಿಯಾಗಿ ಶಿಲ್ಪಾ ಶೆಟ್ಟಿ ನಟಿಸಿದ್ದಾರೆ. ಜೊತೆಗೆ ತುಳು ಚಿತ್ರರಂಗದ ಹಾಸ್ಯ ಕಲಾವಿದರ ದಂಡೇ ಈ ಚಿತ್ರದಲ್ಲಿದೆ. ಅರವಿಂದ್‌ ಬೋಳಾರ್‌, ನವೀನ್‌ ಡಿ. ಪಡೀಲ್ , ಭೋಜರಾಜ್‌ ವಾಮಂಜೂರು , ಉಮೇಶ್‌ ಮಿಜಾರ್‌, ಪ್ರಸನ್ನ ಶೆಟ್ಟಿ ಬೈಲೂರು , ಸಂದೀಪ್‌ ಶೆಟ್ಟಿ ಮಾಣಿಬೆಟ್ಟು ಮುಂತಾದ ಹಾಸ್ಯ ಕಲಾವಿದರು ನಟಿಸಿದ್ದಾರೆ. ಮಂಜುನಾಥ ಅತ್ತಾವರ್‌ ಹಾಗೂ ಶೂಲಿನ್‌ ಫಿಲಂಸ್‌ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಖಳನಾಯಕನಾಗಿ ರೋಶನ್‌ ಶೆಟ್ಟಿ ಬಣ್ಣ ಹಚ್ಚಿದ್ದಾರೆ. ಇನ್ನು ಚಿತ್ರಕ್ಕೆ ಡೇರಿಲ್ ಮಸ್ಕರೇನಸ್‌ ಹಾಗೂ ಜೋಯೆಲ್ ರೆಬೆಲ್ಲೋ ಸಂಗೀತ, ‘ಬಲೆ ತೆಲಿಪಾಲೆ’ ಖ್ಯಾತಿಯ ಪ್ರಸನ್ನ ಶೆಟ್ಟಿ ಬೈಲೂರು ಸಂಭಾಷಣೆ ಚಿತ್ರಕ್ಕಿದೆ. ಇಂದು ಬಿಡುಗಡೆಯಾಗುತ್ತಿರುವ ಈ ಚಿತ್ರವನ್ನು ಪ್ರೇಕ್ಷಕರು ಇಷ್ಟಪಡುತ್ತಾರೆಂಬ ವಿಶ್ವಾಸದೊಂದಿಗೆ ಚಿತ್ರತಂಡ ಎದುರು ನೋಡುತ್ತಿದೆ.

ಟಾಪ್ ನ್ಯೂಸ್

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.